IND vs AUS: 6-6-6-6 ‘ಸೂರ್ಯ’ನ ಅಬ್ಬರ! ಆಸೀಸ್ಗೆ 400 ಟಾರ್ಗೆಟ್ ನೀಡಿದ ಭಾರತ
India vs Australia, 2nd ODI: ಆಸ್ಟ್ರೇಲಿಯಾ ವಿರುದ್ಧ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಸೂರ್ಯಕುಮಾರ್ ಯಾದವ್ ಭರ್ಜರಿ ಅರ್ಧಶತಕ ಸಿಡಿಸಿದರು. ಆಸೀಸ್ ಬೌಲರ್ಗಳ ಬೆವರಳಿಸಿದ ‘ಸ್ಕೈ’ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಗಳಿಸಿ ಮಿಂಚಿದರು.
ನವದೆಹಲಿ: ಕ್ಯಾಮರೂನ್ ಗ್ರೀನ್ ಎಸೆದ 44ನೇ ಓವರ್ನಲ್ಲಿ ಟೀಂ ಇಂಡಿಯಾದ ಸ್ಫೋಟಕ ಆಟಗಾರ ಸೂರ್ಯಕುಮಾರ್ 4 ಹ್ಯಾಟ್ರಿಕ್ ಸಿಕ್ಸ್ ಬಾರಿಸುವ ಮೂಲಕ ಆಸ್ಟ್ರೇಲಿಯಾಗೆ ನಡುಕ ಹುಟ್ಟಿಸಿದ್ದಾರೆ. ‘ಸ್ಕೈ’ ಅಬ್ಬರಕ್ಕೆ ಆಸೀಸ್ ಕಂಗಾಲಾಗಿ ಹೋಗಿದೆ.
ಇಂದೋರ್ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ಭಾರತದ ಬಾಟ್ಸ್ ಮನ್ಗಳು ಅಬ್ಬರದ ಬ್ಯಾಟಿಂಗ್ ನಡೆಸಿದ್ದು, ಆಸೀಸ್ಗೆ ಬೃಹತ್ ಮೊತ್ತದ ಟಾರ್ಗೆಟ್ ನೀಡಿದೆ. ಟಾಸ್ ಗೆದ್ದು ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 399 ರನ್ಗಳ ಬೃಹತ್ ಮೊತ್ತ ಪೇರಿಸಿದೆ.
ಭಾರತದ ಪರ ಅಬ್ಬರದ ಬ್ಯಾಟಿಂಗ್ ನಡೆಸಿದ ಆರಂಭಿಕ ಆಟಗಾರ ಶುಭ್ಮನ್ ಗಿಲ್(104) ಮತ್ತು ಶ್ರೇಯಸ್ ಅಯ್ಯರ್(105) ಭರ್ಜರಿ ಶತಕ ಸಿಡಿಸಿ ಮಿಂಚಿದರು. ನಂತರ ಬಂದ ಕನ್ನಡಿಗ ಕೆ.ಎಲ್.ರಾಹುಲ್(52) ಆಕರ್ಷಕ ಅರ್ಧಶತಕ ಸಿಡಿಸಿದ್ರೆ, ಇಶಾನ್ ಕಿಶನ್(31) ರನ್ ಗಳಿಸಿದರು.
ಇದನ್ನೂ ಓದಿ: ಆಸೀಸ್ ವಿರುದ್ಧದ 2ನೇ ಏಕದಿನಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆ! ಈ ಆಟಗಾರನ ಬದಲು ಸಿರಾಜ್’ಗೆ ಅವಕಾಶ
ಸೂರ್ಯಕುಮಾರ್ ಅಬ್ಬರದ ಬ್ಯಾಟಿಂಗ್..!
ಡೇವಿಡ್ ವಾರ್ನರ್ ಮತ್ತು ಮಾರ್ನಸ್ ಲ್ಯಾಬುಶೇನ್ ಬ್ಯಾಟಿಂಗ್ ಮಾಡುತ್ತಿದ್ದಾರೆ.
ಇದನ್ನೂ ಓದಿ: ನಾಯಕ ರೋಹಿತ್ ಶರ್ಮಾರ ಅತ್ಯಂತ ನೆಚ್ಚಿನ ಓಪನಿಂಗ್ ಬ್ಯಾಟ್ಸ್’ಮನ್ ಯಾರು ಗೊತ್ತಾ?
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.