IND vs AUS: ಆಸ್ಟ್ರೇಲಿಯಾ ವಿರುದ್ಧದ T20 ಸರಣಿಗೂ ಮುನ್ನವೇ ಟೀಂ ಇಂಡಿಯಾಗೆ ದೊಡ್ಡ ಹೊಡೆತ!
ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 3 ಟಿ-20 ಪಂದ್ಯಗಳ ಸರಣಿ ಆಡಬೇಕಾಗಿದೆ. ಆದರೆ ಟೀಂ ಇಂಡಿಯಾದ ಸ್ಟಾರ್ ಬೌಲರ್‍ಗೆ ಕೋವಿಡ್ ಪಾಸಿಟಿವ್ ಆಗಿದ್ದು, ಇದರಿಂದ ಭಾರತ ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ.
ನವದೆಹಲಿ: T20 ವಿಶ್ವಕಪ್‌ಗೂ ಮೊದಲು ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ T20 ಸರಣಿ ಆಡಬೇಕಾಗಿದೆ. ಆದರೆ ಇದಕ್ಕೂ ಮೊದಲೇ ಟೀಂ ಇಂಡಿಯಾದ ಸ್ಟಾರ್ ವೇಗದ ಬೌಲರ್‍ಗೆ ಕೋವಿಡ್ -19 ಪಾಸಿಟಿವ್ ಆಗಿದ್ದರಿಂದ ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. ಇದು ಭಾರತ ತಂಡಕ್ಕೆ ದೊಡ್ಡ ಹೊಡೆತ ನೀಡಿದಂತಾಗಿದೆ.
ಆಸೀಸ್ ವಿರುದ್ಧದ ಸರಣಿಯಿಂದ ಈ ಆಟಗಾರ ಔಟ್!
ವರದಿಯ ಪ್ರಕಾರ ಭಾರತದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಶಮಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. ಮೊಹಮ್ಮದ್ ಶಮಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಭಾರತ ತಂಡವು ಶನಿವಾರ ಮೊಹಾಲಿ ತಲುಪಿದಾಗ ಬಿಸಿಸಿಐ ಮತ್ತು ತಂಡದ ನಿರ್ವಹಣೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ದೊರೆತಿದೆ. ಭಾರತದ ವಿರುದ್ಧ ಸರಣಿ ಆಡಲು ಆಸ್ಟ್ರೇಲಿಯಾ ತಂಡ ಪಂಜಾಬ್ ನಗರಕ್ಕೆ ಬಂದಿಳಿದಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟಿ-20 ಪಂದ್ಯವು ಮೊಹಾಲಿ ಮೈದಾನದಲ್ಲಿ ನಡೆಯಲಿದೆ.
ಇದನ್ನೂ ಓದಿ: New Rule in IPL: ಇನ್ಮುಂದೆ IPLನಲ್ಲಿ ಒಂದು ತಂಡದಿಂದ 15 ಆಟಗಾರರು ಆಡಬಹುದು:ಹೇಗೆ ಸಾಧ್ಯ?
ಭಾರತ ತಂಡಕ್ಕೆ ದೊಡ್ಡ ಹೊಡೆತ!
ಮೊಹಮ್ಮದ್ ಶಮಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಹೊರಬಿದ್ದಿದ್ದು ಭಾರತ ತಂಡಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ. ಶಮಿ ಕಳೆದ ವರ್ಷ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ತಮ್ಮ ಕೊನೆಯ ಟಿ-20 ಅಂತಾರಾಷ್ಟ್ರೀಯ ಪಂದ್ಯ ಆಡಿದ್ದರು. ಅಂದಿನಿಂದ ಅವರು ಟೀಂ ಇಂಡಿಯಾದಿಂದ ಹೊರಗುಳಿಯುತ್ತಿದ್ದಾರೆ. ಮೊಹಮ್ಮದ್ ಶಮಿ ಭಾರತ ಪರ 17 ಟಿ-20 ಪಂದ್ಯಗಳಲ್ಲಿ 18 ವಿಕೆಟ್ ಪಡೆದಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧವೂ ಆಡುವುದು ಕಷ್ಟ !
ಮೊಹಮ್ಮದ್ ಶಮಿ ಕೊರೊನಾದಿಂದ ಚೇತರಿಸಿಕೊಳ್ಳದಿದ್ದರೆ ದಕ್ಷಿಣ ಆಫ್ರಿಕಾ ವಿರುದ್ಧವೂ ಆಡುವುದು ಅವರಿಗೆ ಕಷ್ಟವಾಗಲಿದೆ. ಟಿ-20 ವಿಶ್ವಕಪ್‌ಗೆ ಆಯ್ಕೆಗಾರರು ಸ್ಟ್ಯಾಂಡ್‌ಬೈ ಆಟಗಾರರಲ್ಲಿ ಮೊಹಮ್ಮದ್ ಶಮಿಗೆ ಸ್ಥಾನ ನೀಡಿದ್ದಾರೆ. ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಭುವನೇಶ್ವರ್ ಕುಮಾರ್ ಮತ್ತು ಹರ್ಷಲ್ ಪಟೇಲ್ ಅವರಿಗೆ ಮುಖ್ಯ ತಂಡದಲ್ಲಿ ಅವಕಾಶ ನೀಡಲಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ 3 ಟಿ-20 ಪಂದ್ಯಗಳು ಕ್ರಮವಾಗಿ ತಿರುವನಂತಪುರಂ, ಗುವಾಹಟಿ ಮತ್ತು ಇಂದೋರ್‌ನಲ್ಲಿ ಸೆಪ್ಟೆಂಬರ್ 28, ಅಕ್ಟೋಬರ್ 2 ಮತ್ತು ಅಕ್ಟೋಬರ್ 4ರಂದು ನಡೆಯಲಿವೆ.
ಇದನ್ನೂ ಓದಿ: ಬೆಂಗಳೂರಲ್ಲಿ ಬೈಕ್‌ಗಳ ಸದ್ದು: ಕರ್ನಾಟಕದ ನಟರಾಜ್ ಚಾಂಪಿಯನ್
ಶಿಖರ್ ಧವನ್ ಕ್ಯಾಪ್ಟನ್
ದಕ್ಷಿಣ ಆಫ್ರಿಕಾವು ಅಕ್ಟೋಬರ್ 6, 9 ಮತ್ತು 11ರಂದು ಲಕ್ನೋ, ರಾಂಚಿ ಮತ್ತು ದೆಹಲಿಯಲ್ಲಿ ಭಾರತದ ವಿರುದ್ಧ 3 ಏಕದಿನ ಪಂದ್ಯಗಳನ್ನು ಆಡಬೇಕಾಗಿದೆ. ಆದರೆ ಟಿ-20 ತಂಡದ ಯಾವುದೇ ಆಟಗಾರರು ಏಕದಿನ ಪಂದ್ಯಗಳಲ್ಲಿ ಆಡುವುದಿಲ್ಲ. ಶಿಖರ್ ಧವನ್ ನೇತೃತ್ವದ ತಂಡವು ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಸರಣಿ ಆಡಲಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.