IND vs AUS: ಆಸ್ಟ್ರೇಲಿಯಾ ವಿರುದ್ಧ ಯುವ ಆಟಗಾರರಿಗೆ ಸ್ಥಾನ ನೀಡಲಿದ್ದಾರೆ ರೋಹಿತ್ ಶರ್ಮಾ!
ಟೀಂ ಇಂಡಿಯಾ ಅಕ್ಟೋಬರ್ 20ರಂದು ಆಸ್ಟ್ರೇಲಿಯಾ ವಿರುದ್ಧ ಮೊದಲ T20 ಆಡಬೇಕಾಗಿದೆ. ಈ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಅನೇಕ ಫ್ಲಾಪ್ ಆಟಗಾರರಿಗೆ ಗೇಟ್‍ಪಾಸ್ ನೀಡಬಹುದು.
ನವದೆಹಲಿ: T20 ವಿಶ್ವಕಪ್‌ಗೂ ಮೊದಲು ಟೀಂ ಇಂಡಿಯಾ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ T20 ಸರಣಿ ಆಡಬೇಕಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟಿ-20 ಪಂದ್ಯ ಅಕ್ಟೋಬರ್ 20ರಂದು ಮೊಹಾಲಿಯಲ್ಲಿ ನಡೆಯಲಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ನಾಯಕ ರೋಹಿತ್ ಶರ್ಮಾ ಸರಿಯಾದ ತಂಡ ಸಜ್ಜುಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಹಾಗಾದ್ರೆ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಆಡುವ ಇಲೆವೆನ್ ಹೇಗಿರಬಹುದು? ಕಳಪೆ ಫಾರ್ಮ್‌ನಲ್ಲಿರುವ ಅನೇಕ ಸ್ಟಾರ್ ಆಟಗಾರರಿಗೆ ರೋಹಿತ್ ಗೇಟ್‍ಪಾಸ್ ನೀಡುವ ಸಾಧ‍್ಯತೆ ಇದೆ.
ಆರಂಭಿಕರಾಗಿ ಯಾರು ಕಣಕ್ಕಿಳಿಯಲಿದ್ದಾರೆ..?
ಏಷ್ಯಾಕಪ್‍ನಲ್ಲಿ ಕೆ.ಎಲ್.ರಾಹುಲ್ ಹೆಸರಿಗೆ ತಕ್ಕಂತೆ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಆದರೆ ಟಿ-20 ವಿಶ್ವಕಪ್‌ಗೂ ಮುನ್ನ ಫಾರ್ಮ್‌ಗೆ ಬರುವುದು ಅವರಿಗೆ ಬಹಳ ಮುಖ್ಯವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಜೊತೆ ಓಪನರ್ ಆಗಿ ಅವರು ಕಣಕ್ಕಿಳಿಯಬಹುದು. ಹೀಗಾದ್ರೆ ಕಿಂಗ್ ಕೊಹ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬೇಕಾಗುತ್ತದೆ. ಇತ್ತೀಚೆಗಷ್ಟೇ ಮುಕ್ತಾಯವಾದ ಏಷ್ಯಾಕಪ್‍ನ್‍ಲ್ಲಿ ಕೊಹ್ಲಿ ಉತ್ತಮ ಲಯಕ್ಕೆ ಮರಳಿದ್ದಾರೆ. ಅವರು ಫಾರ್ಮ್‌ಗೆ ಮರಳಿರುವುದು ಟೀಂ ಇಂಡಿಯಾಕ್ಕೆ ಆನೆಬಲ ಬಂದಂತಾಗಿದೆ.
ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ: ಡಿಕೆಶಿ-ಸಿದ್ದರಾಮಯ್ಯ ಆಂತರಿಕ ಕಲಹ ಮುಗಿಲು ಮುಟ್ಟಿದೆ ಎಂದ ಬಿಜೆಪಿ
ಮಧ್ಯಮ ಕ್ರಮಾಂಕದಲ್ಲಿ ಈ ಆಟಗಾರರಿಗೆ ಸ್ಥಾನ?
ಕೆಲ ದಿನಗಳಿಂದ ಭಾರತ ತಂಡಕ್ಕೆ ಮಧ್ಯಮ ಕ್ರಮಾಂಕವೇ ದೊಡ್ಡ ಸಮಸ್ಯೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ 4ನೇ ಕ್ರಮಾಂಕದಲ್ಲಿಇಂಗ್ಲೆಂಡ್ ನೆಲದಲ್ಲಿ ಶತಕ ಸಿಡಿಸಿದ ಸೂರ್ಯಕುಮಾರ್ ಯಾದವ್‍ಗೆ ರೋಹಿತ್ ಅವಕಾಶ ನೀಡಬಹುದು. ಅದೇ ರೀತಿ ಸ್ಟಾರ್ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ 5ನೇ ಕ್ರಮಾಂಕದಲ್ಲಿ ಸ್ಥಾನ ಪಡೆಯಬಹುದು. ಹಾರ್ದಿಕ್ ಬೌಲಿಂಗ್ ಮತ್ತು ಬ್ಯಾಟಿಂಗ್ ಮೂಲಕ ಅದ್ಭುತ ಆಟ ಪ್ರದರ್ಶಿಸುವುದರಲ್ಲಿ ಪರಿಣತಿ ಹೊಂದಿದ್ದಾರೆ. ವಿಕೆಟ್ ಕೀಪರ್ ಆಗಿ ರಿಷಭ್ ಪಂತ್ ಅಥವಾ ದಿನೇಶ್ ಕಾರ್ತಿಕ್‍ಗೆ ಅವಕಾಶ ಸಿಗಬಹುದು.
ಭಾರತದ ಬೌಲಿಂಗ್ ಪಡೆ
ಜಸ್ಪ್ರೀತ್ ಬುಮ್ರಾ ಭಾರತದ ವೇಗದ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ. ಇವರಿಗೆ ಭುವನೇಶ್ವರ್ ಕುಮಾರ್ ಮತ್ತು ಅರ್ಷದೀಪ್ ಸಿಂಗ್ ಬೆಂಬಲ ನೀಡಲಿದ್ದಾರೆ. ಏಷ್ಯಾಕಪ್‍ನಲ್ಲಿ, ಅರ್ಷದೀಪ್ ಸಿಂಗ್ ಡೆತ್ ಓವರ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಇದೇ ವೇಳೆ ಸ್ಪಿನ್ ವಿಭಾಗದ ಜವಾಬ್ದಾರಿಯನ್ನು ಯುಜ್ವೇಂದ್ರ ಚಹಾಲ್‍ಗೆ ವಹಿಸಲಾಗುವುದು. ಆಲ್ ರೌಂಡರ್ ಆಗಿ ಅಕ್ಷರ್ ಪಟೇಲ್ ಅವರನ್ನು ಆಡುವ XIಗೆ ಸೇರಿಸಿಕೊಳ್ಳಬಹುದು.
ಇದನ್ನೂ ಓದಿ: ಅ.15 ರಂದು ಹಿಂದಿ ಹೇರಿಕೆ ವಿರುದ್ಧ ಎಲ್ಲಾ ಜಿಲ್ಲಾಕೇಂದ್ರಗಳಲ್ಲಿ ಪ್ರತಿಭಟನೆ: ವಾಟಾಳ್ ನಾಗರಾಜ್
ಆಸ್ಟ್ರೇಲಿಯಾ ವಿರುದ್ಧ ಭಾರತದ ಸಂಭಾವ್ಯ ಪ್ಲೇಯಿಂಗ್ XI
ರೋಹಿತ್ ಶರ್ಮಾ (ನಾಯಕ), ಕೆ.ಎಲ್.ರಾಹುಲ್, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್/ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.