ಭಾರತ vs ಆಸ್ಟ್ರೇಲಿಯಾ T20 ಸರಣಿ: ಭಾರತ vs ಆಸ್ಟ್ರೇಲಿಯಾ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಅದ್ಭುತ ಆಟವನ್ನಾಡಿದ ಟೀಂ ಇಂಡಿಯಾ ಆಸ್ಟ್ರೇಲಿಯಾವನ್ನು 6 ವಿಕೆಟ್‌ಗಳಿಂದ ಮಣಿಸಿತು. ಇದರೊಂದಿಗೆ ಟೀಂ ಇಂಡಿಯಾ 2-1 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ. ಈ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಟೀಂ ಇಂಡಿಯಾ ಪರ ಬೌಲರ್‌ಗಳು ಮತ್ತು ಬ್ಯಾಟ್ಸ್‌ಮನ್‌ಗಳು ಆಸಿಸ್ ತಂಡವನ್ನು ಮಣಿಸಿದ್ದಷ್ಟೇ ಅಲ್ಲದೆ ಪಾಕಿಸ್ತಾನ ತಂಡವನ್ನು ಹಿಂದಿಕ್ಕಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ವಿಶೇಷವೆಂದರೆ ಈ ವಿಶ್ವದಾಖಲೆಯನ್ನು ಬರೆದಿರುವ ಮೊದಲ ದೇಶ ಭಾರತ.
ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಉತ್ತಮ ಆಟ ಪ್ರದರ್ಶಿಸುತ್ತಿದೆ. ಆಸ್ಟ್ರೇಲಿಯಾದ ಸೋಲಿನೊಂದಿಗೆ ಭಾರತ ತಂಡ ಒಂದು ವರ್ಷದಲ್ಲಿ ಅತಿ ಹೆಚ್ಚು ಟಿ20 ಪಂದ್ಯಗಳನ್ನು ಗೆದ್ದ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ವರ್ಷ 21ನೇ ಟಿ20ಯಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದೆ. ಗಮನಾರ್ಹ ವಿಷಯವೆಂದರೆ ಈ ವಿಷಯದಲ್ಲಿ ಟೀಂ ಇಂಡಿಯಾ ತನ್ನ ಸಾಂಪ್ರದಾಯಕ ಎದುರಾಳಿ ಪಾಕಿಸ್ತಾನ ತಂಡವನ್ನು ಸಹ ಹಿಂದಿಕ್ಕಿದೆ.
ಇದನ್ನೂ ಓದಿ- Surya Kumar Yadav: ಯುವಿ ದಾಖಲೆ ಮುರಿದ ಸೂರ್ಯ ಕುಮಾರ್: ’ಇಂಡಿಯಾದ ಮಿಸ್ಟರ್ 360’ಯಿಂದ ಹೊಸ ವಿಶ್ವ ದಾಖಲೆ
ವಾಸ್ತವವಾಗಿ, 2021 ರಲ್ಲಿ ಒಂದು ಕ್ಯಾಲೆಂಡರ್ ವರ್ಷದಲ್ಲಿ ಪಾಕಿಸ್ತಾನ 20 T20 ಅಂತರಾಷ್ಟ್ರೀಯ ಪಂದ್ಯಗಳನ್ನು ಗೆದ್ದಿದೆ. ಭಾರತಕ್ಕಿಂತ ಮೊದಲು, ವಿಶ್ವದ ಯಾವುದೇ ತಂಡವು ಕ್ಯಾಲೆಂಡರ್ ವರ್ಷದಲ್ಲಿ 20 ಕ್ಕಿಂತ ಹೆಚ್ಚು ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಗೆದ್ದಿರಲಿಲ್ಲ.
ಅತ್ಯುತ್ತಮ ಫಾರ್ಮ್‌ನಲ್ಲಿ ಟೀಂ ಇಂಡಿಯಾ:
ಅತ್ಯುತ್ತಮ ಫಾರ್ಮ್‌ನಲ್ಲಿರುವ ಟೀಂ ಇಂಡಿಯಾ 2022 ರಲ್ಲಿ ಇಲ್ಲಿಯವರೆಗೆ 29 ಟಿ20 ಪಂದ್ಯಗಳಲ್ಲಿ 21 ಪಂದ್ಯಗಳನ್ನು ಗೆದ್ದಿದೆ. ಈ ವರ್ಷ 10 ತಿಂಗಳು ಕೂಡ ಪೂರ್ಣಗೊಂಡಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾ ತನ್ನ ದಾಖಲೆಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬಹುದು. ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 4 ವಿಕೆಟ್‌ಗಳ ಸೋಲನ್ನು ಎದುರಿಸಬೇಕಾಯಿತು, ಆದರೆ ನಂತರ ಭಾರತ ತಂಡ ಅಬ್ಬರದಿಂದ ಸರಣಿಯನ್ನು ವಶಪಡಿಸಿಕೊಂಡಿದೆ. 2022ರ ಟಿ20 ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧವೂ ಸರಣಿ ಆಡಬೇಕಿದೆ.
ಇದನ್ನೂ ಓದಿ- ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ತಂತ್ರದ ಬಗ್ಗೆ ಕೊಹ್ಲಿ ಎನ್ ಹೇಳಿದ್ರು ಗೊತ್ತಾ?
ಆಸ್ಟ್ರೇಲಿಯ ವಿರುದ್ಧ ಅಬ್ಬರಿಸುವ ಮೂಲಕ ಭಾರತ ತಂಡ 2-1 ಅಂತರದಲ್ಲಿ ಸರಣಿ ಗೆದ್ದುಕೊಂಡಿದೆ. ಮೂರನೇ ಟಿ20 ಪಂದ್ಯದಲ್ಲಿ ಭಾರತ ಪರ ಸೂರ್ಯಕುಮಾರ್ ಯಾದವ್ ಮತ್ತು ವಿರಾಟ್ ಕೊಹ್ಲಿ ಅತ್ಯುತ್ತಮ ಆಟ ಪ್ರದರ್ಶಿಸಿದರು. ಇವರಿಬ್ಬರ ಬ್ಯಾಟಿಂಗ್ ಮುಂದೆ ಆಸ್ಟ್ರೇಲಿಯದ ಬೌಲರ್‌ಗಳು ನಿಲ್ಲಲು ಸಾಧ್ಯವಾಗಲಿಲ್ಲ. ಇದಾದ ಬಳಿಕ ಹಾರ್ದಿಕ್ ಪಾಂಡ್ಯ ಡೆತ್ ಓವರ್‌ಗಳಲ್ಲಿ 16 ಎಸೆತಗಳಲ್ಲಿ 25 ರನ್ ಗಳಿಸಿ ಬಿರುಸಿನ ಆಟವಾಡಿದರು. ಟೀಂ ಇಂಡಿಯಾ ಪಂದ್ಯವನ್ನು 4 ವಿಕೆಟ್‌ಗಳಿಂದ ಗೆದ್ದುಕೊಂಡಿತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.