IND vs AUS : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯ ನಾಗ್ಪುರದಲ್ಲಿ ನಡೆಯುತ್ತಿದೆ. ಈ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದು ಕೊಂಡಿದೆ. ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಟೆಸ್ಟ್ ಪಂದ್ಯದಲ್ಲಿಯೇ  ರವಿಚಂದ್ರನ್ ಅಶ್ವಿನ್ ದಾಖಲೆ ಬರೆದಿದ್ದಾರೆ. ಈ ಸರಣಿಯಲ್ಲಿ ಮೊದಲ ವಿಕೆಟ್ ಪಡೆದ ಕೂಡಲೇ ಅಶ್ವಿನ್ ತಮ್ಮ ಹೆಸರಿಗೆ ಹೊಸ ದಾಖಲೆ ಸೇರಿಸಿಕೊಂಡಿದ್ದಾರೆ. 


COMMERCIAL BREAK
SCROLL TO CONTINUE READING

ಭಾರತ vs ಆಸ್ಟ್ರೇಲಿಯಾ ಟೆಸ್ಟ್ : 
ಅಶ್ವಿನ್ ವೇಗವಾಗಿ 450 ಟೆಸ್ಟ್ ವಿಕೆಟ್‌ಗಳನ್ನು ಪಡೆದ ದಾಖಲೆ ಮಾಡಿದ್ದಾರೆ. ನಾಗ್ಪುರದಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ ಮೊದಲ ವಿಕೆಟ್ ಪಡೆದ ತಕ್ಷಣ ಈ ದಾಖಲೆ ಬರೆದಿದ್ದಾರೆ. ಭಾರತದ ಸ್ಪಿನ್ನರ್ ಆರ್ ಅಶ್ವಿನ್ ಗುರುವಾರ ನಾಲ್ಕು ಪಂದ್ಯಗಳ ಭಾರತ ಮತ್ತು ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ತಮ್ಮ 450 ನೇ ಟೆಸ್ಟ್ ವಿಕೆಟ್ ಪಡೆದರು. ತಮ್ಮ 89 ನೇ ಟೆಸ್ಟ್ ಪಂದ್ಯದಲ್ಲಿ 450 ನೇ ವಿಕೆಟ್ ಪಡೆಯುವ ಮೂಲಕ ಅನಿಲ್ ಕುಂಬ್ಳೆ ಅವರ ದಾಖಲೆ ಮುರಿದಿದ್ದಾರೆ. 


ಇದನ್ನೂ ಓದಿ : IND vs AUS 1st Test : ದ್ವಿಶತಕ ಸಿಡಿಸಿದ ಈ ಆಟಗಾರನಿಗೆ ಟೀಂನಲ್ಲಿ ಸ್ಥಾನ ನೀಡದೆ ಅನ್ಯಾಯ!


ವಿಕೆಟ್‌ಗಳ ದಾಖಲೆ :
ತನ್ನ 80 ನೇ ಟೆಸ್ಟ್ ಪಂದ್ಯದಲ್ಲಿ ಸಾಧನೆ ಮಾಡಿದ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ನಂತರ ತನ್ನ 450 ನೇ ಟೆಸ್ಟ್ ವಿಕೆಟ್ ಅನ್ನು ತಲುಪಿದ ವಿಶ್ವದ ಎರಡನೇ ವೇಗದ ಬೌಲರ್ ಆಗಿ ಆರ್ ಅಶ್ವಿನ್ ಹೊರ ಹೊಮ್ಮಿದ್ದಾರೆ.  ಆಸ್ಟ್ರೇಲಿಯದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಅಲೆಕ್ಸ್ ಕ್ಯಾರಿ  ವವಿಕೆಟ್ ಪಡೆಯುವ ಮೂಲಕ ಅಶ್ವಿನ್ ಟೆಸ್ಟ್ ಪಂದ್ಯದಲ್ಲಿ 450ನೇ ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. 


ಇದನ್ನೂ ಓದಿ : IND vs AUS: ಮೊದಲ ಟೆಸ್ಟ್ ಪಂದ್ಯದಲ್ಲಿ ಈ ಆಟಗಾರರಿಗೆ ಅವಕಾಶ ನೀಡಿದ ನಾಯಕ ರೋಹಿತ್ ಶರ್ಮಾ


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.