IND vs AUS: ರಾಜ್‌ಕೋಟ್‌ನಲ್ಲಿ ಬುಧವಾರ (ಸೆಪ್ಟೆಂಬರ್ 27)  ಆಸ್ಟ್ರೇಲಿಯಾ ವಿರುದ್ಧ ನಡೆದ 3ನೇ ಏಕದಿನ ಪಂದ್ಯದಲ್ಲಿ ಹಿಟ್​ಮ್ಯಾನ್  ಖ್ಯಾತಿಯ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ  ಕ್ರಿಸ್ ಗೇಲ್ ನಂತರ ಈ ದಾಖಲೆ ಬರೆದ 2ನೇ ಬ್ಯಾಟರ್  ಎಂಬ ಕೀರ್ತಿಗೆ ರೋಹಿತ್ ಶರ್ಮಾ ಭಾಜನರಾಗಿದ್ದಾರೆ. 


COMMERCIAL BREAK
SCROLL TO CONTINUE READING

ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಏಕದಿನ ಪಂದ್ಯಗಳಲ್ಲಿ ವಿಶ್ರಾಂತ್ರಿ ಪಡೆದಿದ್ದ ಹಿಟ್​ಮ್ಯಾನ್ ರೋಹಿತ್ ಶರ್ಮಾ ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ  ನಡೆದ ಮೂರನೇ ಪಂದ್ಯದಲ್ಲಿ ತಂಡಕ್ಕೆ ಮರಳಿದರು. ಮಾತ್ರವಲ್ಲ, ಆಸ್ಟ್ರೇಲಿಯಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ರೋಹಿತ್ ಶರ್ಮಾ ಹೊಸ ಇತಿಹಾಸ ನಿರ್ಮಿಸಿದ್ದಾರೆ. 


ಆಸ್ಟ್ರೇಲಿಯಾ ವಿರುದ್ಧ ರೋಹಿತ್ ಶರ್ಮಾ ಅಬ್ಬರದ ಆಟ ಹೇಗಿತ್ತು ಅಂತ ಈ ವಿಡಿಯೋ ನೋಡಿ... 


IND VS AUS ಸರಣಿಯ ನಡುವೆ ಶಾಕಿಂಗ್ ನ್ಯೂಸ್, ಈ ಆಟಗಾರನಿಗೆ ಎರಡು ಪಂದ್ಯಗಳಿಗೆ ನಿಷೇಧ


ಹೌದು, ನಿನ್ನೆ ರಾಜ್​ಕೋಟ್​ನಲ್ಲಿ  ಆಸ್ಟ್ರೇಲಿಯಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ  57 ಎಸೆತಗಳಲ್ಲಿ 6 ಸಿಕ್ಸರ್ ಮತ್ತು ಐದು ಬೌಂಡರಿಗಳೊಂದಿಗೆ ಅದ್ಭುತ 81 ರನ್ ಗಳಿಸಿದ ರೋಹಿತ್ ಶರ್ಮಾ, ಅರ್ಧ ಡಜನ್ ಸಿಕ್ಸರ್‌ಗಳನ್ನು ಬಾರಿಸುವ ಮೂಲಕ  ವೆಸ್ಟ್ ಇಂಡೀಸ್ ಮಾಜಿ ಆರಂಭಿಕ ಆಟಗಾರ ಕ್ರಿಸ್ ಗೇಲ್ ನಂತರ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 550 ಸಿಕ್ಸರ್‌ಗಳನ್ನು ಹೊಡೆದ ಎರಡನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 


ವೆಸ್ಟ್ ಇಂಡೀಸ್ ಮಾಜಿ ಆರಂಭಿಕ ಆಟಗಾರ ಕ್ರಿಸ್ ಗೇಲ್ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 551 ಇನಿಂಗ್ಸ್​ಗಳ ಮೂಲಕ ಒಟ್ಟು 553 ಸಿಕ್ಸ್​ಗಳನ್ನು ಬಾರಿಸಿ ಕ್ರಿಕೆಟ್ ಅಂಗಳದ ಸಿಕ್ಸರ್ ಕಿಂಗ್ ಎಂದೇ ಖ್ಯಾತಿ ಗಳಿಸಿದ್ದಾರೆ. ಇದೀಗ ರೋಹಿತ್ ಶರ್ಮಾ 471 ಇನಿಂಗ್ಸ್​ಗಳಲ್ಲಿ ಒಟ್ಟು 551 ಸಿಕ್ಸ್​ಗಳನ್ನು ಸಿಡಿಸಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 550 ಕ್ಕೂ ಹೆಚ್ಚು ಸಿಕ್ಸ್​ ಬಾರಿಸಿದ ವಿಶ್ವದ 2ನೇ ಬ್ಯಾಟರ್ ಆಗಿದ್ದಾರೆ. 


ಇದನ್ನೂ ಓದಿ- 12 ವರ್ಷಗಳ ನಂತರ ವಿಶ್ವಕಪ್ ನಲ್ಲಿ ವಿಜಯ ಪತಾಕೆ ಹಾರಿಸಲಿದೆಯಂತೆ ಭಾರತ ! ಯಾವ ಲೆಕ್ಕಾಚಾರದಲ್ಲಿ ಅನ್ನುವ ಮಾಹಿತಿ ಇಲ್ಲಿದೆ !


ಇನ್ನೂ ನಿನ್ನೆ ನಡೆದ ಪಂದ್ಯದಲ್ಲಿ ಆರು ಸಿಕ್ಸ್​​ಗಳೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 550 ಅಧಿಕ ಸಿಕ್ಸರ್ ಬಾರಿಸಿದ ವಿಶ್ವದ 2ನೇ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿರುವ ಹಿಟ್​ಮ್ಯಾನ್ ರೋಹಿತ್ ಶರ್ಮಾ,  ಈ ಸಿಕ್ಸ್​ಗಳೊಂದಿಗೆ ತವರು ನೆಲದಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ವಿಶ್ವ ದಾಖಲೆಯಲ್ಲೂ ಮೈಲಿಗಲ್ಲು ಸಾಧಿಸಿದ್ದಾರೆ. 


ಅಂತರರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ಸಿಕ್ಸರ್ ಬಾರಿಸುವ ಆಟಗಾರನಾಗಲು ಅವರಿಗೆ ಕೇವಲ ಮೂರು ಗರಿಷ್ಠ ಸಿಕ್ಸರ್‌ಗಳಷ್ಟೇ ಬೇಕಾಗುತ್ತವೆ.  


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.