T20 World Cup 2024: ಟಿ20 ವಿಶ್ವಕಪ್‌ 2024 ಸೂಪರ್ 8 ಸುತ್ತಿನ ಸೆಮಿಫೈನಲ್ ಪಂದ್ಯ ಜೂನ್‌ 24, ಸೋಮವಾರ ಭಾರತ vs ಆಸ್ಟ್ರೇಲಿಯಾ ನಡುವೆ ನಡೆಯಲಿದೆ. ಈ ಪಂದ್ಯ ಎರಡು ತಂಡಗಳಿಗೆ ಬಹಳ ಮಹತ್ವದ್ದಾಗಿದ್ದು,  ಪಂದ್ಯಕ್ಕೆ ಮಳೆರಾಯ ಅಡ್ಡಿಯಾಗುವನಾ ಎನ್ನುವ ಭಯ ಎಲ್ಲರನ್ನು ಕಾಡಿದೆ.


COMMERCIAL BREAK
SCROLL TO CONTINUE READING

ಸೇಂಟ್ ಲೂಸಿಯಾದಲ್ಲಿ ಉಭಯ ತಂಡಗಳ ನಡುವೆ ಪಂದ್ಯ ನಡೆಯಲಿದ್ದು ಸ್ಥಳೀಯ ಕಾಲಮಾನ ಬೆಳಿಗ್ಗೆ 10.30ಕ್ಕೆ ನಡೆಯಲಿದೆ. ಅಂದರೆ,  ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಹವಾಮಾನ ವರದಿಗಳ ಪ್ರಕಾರ ಇಂದು ಬೆಳಗ್ಗೆ ಸೇಂಟ್ ಲೂಸಿಯಾದಲ್ಲಿ ಶೇ.55ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಪಂದ್ಯಕ್ಕೆ ಮಳೆಯ ಭೀತಿ ಎದುರಾಗಿದೆ.


ಸೂಪರ್ 8 ಸುತ್ತಿನಲ್ಲಿ ಎರಡೂ ತಂಡಗಳಿಗೆ ಇದು ಕೊನೆಯ ಪಂದ್ಯವಾಗಿದೆ. ಈ ಪಂದ್ಯ ಮಳೆಯಿಂದ ರದ್ದಾದರೆ ಉಭಯ ತಂಡಗಳು ತಲಾ ಒಂದು ಅಂಕ ಪಡೆಯಲಿವೆ. ಇಂತಹ ಪರಿಸ್ಥಿತಿಯಲ್ಲಿ ಭಾರತ 5 ಅಂಕಗಳೊಂದಿಗೆ ಸೆಮಿಫೈನಲ್‌ಗೆ ಅರ್ಹತೆ ಪಡೆಯಲಿದೆ. 


ಇದನ್ನೂ ಓದಿ: ಅಫ್ಘನ್ ವಿರುದ್ಧ ಭಾರತ ಗೆಲ್ಲಲು ಇವರೇ ಕಾರಣ: ಗೆಲುವಿನ ಸಂಪೂರ್ಣ ಕ್ರೆಡಿಟ್ ಈ ಇಬ್ಬರಿಸಿಗೆ ಸಲ್ಲಿಸಿದ ರೋಹಿತ್ ಶರ್ಮಾ


ಸೆಮಿಫೈನಲ್ ಪ್ರವೇಶಿಸಲು ಆಸ್ಟ್ರೇಲಿಯಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯಗಳ ಫಲಿತಾಂಶಗಳನ್ನು ಕೂಡ ಅವಲಂಬಿಸಬೇಕಾಗಿದೆ. ಒಂದು ವೇಳೆ ಅಫ್ಘಾನಿಸ್ತಾನ vs ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಗೆದ್ದರೆ ಆಸ್ಟ್ರೇಲಿಯಾ ತಂಡ ಟೂರ್ನಿಯಿಂದ ಹೊರ ಬೀಳಲಿದೆ.


ಪ್ಲೇಯಿಂಗ್‌ XI:


ಟೀಮ್ ಇಂಡಿಯಾ ಪ್ಲೇಯಿಂಗ್‌ XI:
ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ, ರಿಷಬ್ ಪಂತ್ , ಮೊಹಮ್ಮದ್ ಸಿರಾಜ್‌, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ,ಅಕ್ಷರ್ ಪಟೇಲ್ , ಕುಲದೀಪ್ ಯಾದವ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ಶಿವಂ ದುಬೆ, ರವೀಂದ್ರ ಜಡೇಜಾ ಯುಜ್ವೇಂದ್ರ ಚಹಾಲ್, ಅರ್ಶ್ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ.


ಆಸ್ಟ್ರೇಲಿಯಾ ಪ್ಲೇಯಿಂಗ್‌ XI:
ಮಿಚೆಲ್ ಮಾರ್ಷ್ , ಆಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆಡಮ್ ಝಂಪಾ .


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್