IND vs BAN: ಭಾರತ vs ಬಾಂಗ್ಲಾದೇಶ T20 ಸರಣಿಗೆ ಟೀಂ ಇಂಡಿಯಾದ ತಂಡವನ್ನು ಬಿಸಿಸಿಐ ಶನಿವಾರ ರಾತ್ರಿ ಪ್ರಕಟಿಸಿದೆ. ಈ ತಂಡದಲ್ಲಿ ಐಪಿಎಲ್ 2024ರ ಸಮಯದಲ್ಲಿ ಎಲ್ಲಾ ಪ್ರಸಿದ್ಧ ಬೌಲರ್‌ಗಳಿಗೆ ಬೆವರಿಳಿಸಿದ್ದ ಯುವ ಬ್ಯಾಟ್ಸ್‌ಮನ್ ಕಮ್‌ಬ್ಯಾಕ್ ಮಾಡಿದ್ದಾರೆ. ಟಿ-20 ಸರಣಿಗೆ ಪ್ರಕಟಿಸಿರುವ ತಂಡದಲ್ಲಿ ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ಸಿಕ್ಕಿದೆ. ಈ ಆಟಗಾರರಲ್ಲಿ ಅಭಿಷೇಕ್ ಶರ್ಮಾ ಕೂಡ ಒಬ್ಬರು. ಅಭಿಷೇಕ್ ಶರ್ಮಾ ಮರಳಿ ಬಂದಿರುವುದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ. ಅಭಿಷೇಕ್ ಶರ್ಮಾಗೆ ಈ ವರ್ಷ ಟೀಂ ಇಂಡಿಯಾಗೆ ಪದಾರ್ಪಣೆ ಮಾಡುವ ಅವಕಾಶ ಸಿಕ್ಕಿದೆ. ಜಿಂಬಾಬ್ವೆ ವಿರುದ್ಧದ ಐದು ಪಂದ್ಯಗಳ T20 ಸರಣಿಯಲ್ಲಿ ಅವರು ಕಾಣಿಸಿಕೊಂಡಿದ್ದರು.
ಶ್ರೀಲಂಕಾ ಸರಣಿಯಲ್ಲಿ ಅವಕಾಶ ಸಿಗಲಿಲ್ಲ
ಶ್ರೀಲಂಕಾ ವಿರುದ್ಧದ ಟಿ-20 ಸರಣಿಯ ವೇಳೆ ಅಭಿಷೇಕ್ ಶರ್ಮಾ ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡಿರಲಿಲ್ಲ. ಬಿಸಿಸಿಐ ಆಯ್ಕೆ ಕುರಿತು ಹಲವು ಪ್ರಶ್ನೆಗಳು ಎದ್ದಿದ್ದವು. ಜಿಂಬಾಬ್ವೆ ವಿರುದ್ಧ ಶತಕ ಬಾರಿಸಿದ ನಂತರವೂ ಶ್ರೀಲಂಕಾ ಸರಣಿಗೆ ಟೀಂ ಇಂಡಿಯಾದ ತಂಡದಲ್ಲಿ ಅಭಿಷೇಕ್ ಶರ್ಮಾಗೆ ಏಕೆ ಅವಕಾಶ ಸಿಗಲಿಲ್ಲವೆಂದು ಅಭಿಮಾನಿಗಳು ಪ್ರಶ್ನಿಸಿದ್ದರು. ಚೊಚ್ಚಲ ಪಂದ್ಯದಲ್ಲೇ ಖಾತೆ ತೆರೆಯದೆ ಅಭಿಷೇಕ್ ಡಕ್‌ನಲ್ಲಿ ಔಟಾಗಿದ್ದರು. ಆದರೆ ಮುಂದಿನ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ ಏಕೆ ಸ್ಥಾನ ನೀಡಬೇಕು ಎಂಬುದನ್ನು ಅವರು ಸಾಬೀತುಪಡಿಸಿದರು. ೨ನೇ ಪಂದ್ಯದಲ್ಲಿಯೇ ಅವರು ಭರ್ಜರಿ ಶತಕ ಬಾರಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದರು.
ಇದನ್ನೂ ಓದಿ: India vs Bangladesh, 2nd Test: ಕ್ಯಾಪ್ಟನ್ ರೋಹಿತ್ ಶರ್ಮಾ ತಪ್ಪು ಮಾಡಿದ್ದಾರೆಯೇ?
ರೋಹಿತ್ ನಿವೃತ್ತಿಯ ನಂತರ ದೊಡ್ಡ ಜವಾಬ್ದಾರಿ
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಿ-20 ವಿಶ್ವಕಪ್ 2024ರ ಪ್ರಶಸ್ತಿ ಗೆದ್ದ ನಂತರ ನಿವೃತ್ತಿ ಘೋಷಿಸಿದ್ದರು. ರೋಹಿತ್ ಅವರ ನಿವೃತ್ತಿಯು ನಂತರ ಅವರ ಸ್ಥಾನಕ್ಕೆ ಯಾರು ಎಂಬ ದೊಡ್ಡ ಪ್ರಶ್ನೆಯನ್ನು ಹುಟ್ಟುಹಾಕಿತ್ತು! ಟೀಂ ಇಂಡಿಯಾ ಅನೇಕ ಯುವ ಆರಂಭಿಕರನ್ನು ಹೊಂದಿದ್ದು, ಅವರು ಮುಂಬರುವ ಕಾಲಕ್ಕೆ ತಕ್ಕಂತೆ ಸಜ್ಜಾಗಬಹುದು. ಅಂತಹ ಆಟಗಾರರಲ್ಲಿ ಅಭಿಷೇಕ್ ಶರ್ಮಾ ಕೂಡ ಒಬ್ಬರು. ಐಪಿಎಲ್ 2024ರ ಅವಧಿಯಲ್ಲಿ ಅಭಿಷೇಕ್ ಶರ್ಮಾ 16 ಪಂದ್ಯಗಳಲ್ಲಿ 32.27 ಸರಾಸರಿ ಮತ್ತು 204.22 ಸ್ಟ್ರೈಕ್ ರೇಟ್‌ನಲ್ಲಿ 484 ರನ್ ಗಳಿಸಿದ್ದಾರೆ. ಅವರು ಈ ಋತುವಿನಲ್ಲಿ ಅತ್ಯಂತ ಪ್ರಭಾವಶಾಲಿ ಯುವ ಬ್ಯಾಟ್ಸ್‌ಮನ್ ಆಗಿದ್ದರು. ಹೀಗಿರುವಾಗ ನಾಯಕ ಸೂರ್ಯಕುಮಾರ್ ಯಾದವ್ ಅವರಿಗೆ ಟೀಂ ಇಂಡಿಯಾದ ಆಡುವ 11ರಲ್ಲಿ ಅವಕಾಶ ನೀಡುತ್ತಾರೋ ಇಲ್ಲವೋ ಎಂಬುದು ಕುತೂಹಲ ಮೂಡಿಸಿದೆ.
ಬಾಂಗ್ಲಾದೇಶ ವಿರುದ್ಧದ ಟಿ೦20 ಸರಣಿಗೆ ಟೀಂ ಇಂಡಿಯಾ ತಂಡ
ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ ಮತ್ತು ಮಯಾಂಕ್ ಯಾದವ್.
ಇದನ್ನೂ ಓದಿ: IND vs BAN: ಹಾರ್ದಿಕ್ ಪಾಂಡ್ಯ ಬದಲು ಬಾಂಗ್ಲಾ ವಿರುದ್ಧ ಈ ಆಟಗಾರನಿಗೆ ಪಾದಾರ್ಪಣೆ ಮಾಡುವ ಅವಕಾಶ!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.