IND vs BAN: ಶತಕ ಸಿಡಿಸಿ ಸಚಿನ್ ಅವರ ಮೂರು ದಾಖಲೆಗಳನ್ನು ಮುರಿದ ವಿರಾಟ್ ಕೊಹ್ಲಿ

IND vs BAN: ಬಾಂಗ್ಲಾದೇಶ ವಿರುದ್ಧ ನಡೆದ ವಿಶ್ವಕಪ್ ಪಂದ್ಯದಲ್ಲಿ, ವಿರಾಟ್ ಕೊಹ್ಲಿ ಐಕಾನ್ ಸಚಿನ್ ತೆಂಡೂಲ್ಕರ್ ನಿರ್ಮಿಸಿದ ವಿಶ್ವದಾಖಲೆಯನ್ನು ಮುರಿದಿದ್ದಾರೆ. 

Written by - Yashaswini V | Last Updated : Oct 20, 2023, 08:41 AM IST
  • ಬಾಂಗ್ಲಾದೇಶ ವಿರುದ್ಧ ನಡೆದ ವಿಶ್ವಕಪ್ ಪಂದ್ಯದಲ್ಲಿ 97 ಎಸೆತಗಳಲ್ಲಿ 103 ರನ್ ಗಳಿಸಿ ಅಜೇಯ ಶತಕ ಗಳಿಸಿದ ವಿರಾಟ್ ಕೊಹ್ಲಿ
  • ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿ ದಾಖಲೆಗಳನ್ನು ಸೃಷ್ಟಿಸಿದ ಭಾರತದ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ
  • ಒಂದೇ ಶತಕದಲ್ಲಿ ಮೂರು ವಿಶ್ವ ದಾಖಲೆ ಮುರಿದ ವಿರಾಟ್ ಕೊಹ್ಲಿ
IND vs BAN: ಶತಕ ಸಿಡಿಸಿ ಸಚಿನ್ ಅವರ ಮೂರು ದಾಖಲೆಗಳನ್ನು ಮುರಿದ ವಿರಾಟ್ ಕೊಹ್ಲಿ  title=

IND vs BAN: ನಿನ್ನೆ(ಅಕ್ಟೋಬರ್ 19, 2023) ಬಾಂಗ್ಲಾದೇಶ ಮತ್ತು ಭಾರತ ನಡುವಿನ ವಿಶ್ವಕಪ್ 2023ರ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ ಇತಿಹಾಸ ಸೃಷ್ಟಿಸಿದ್ದಾರೆ.  ಈ ಪಂದ್ಯದಲ್ಲಿ  97 ಎಸೆತಗಳಲ್ಲಿ 103 ರನ್ ಗಳಿಸಿ ಅಜೇಯ ಶತಕ ಗಳಿಸಿದ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ  ಹಲವು ದಾಖಲೆಗಳನ್ನು ಬರೆದಿದ್ದರೆ.  ಅಷ್ಟೇ ಅಲ್ಲ, ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಸಚಿನ್ ತೆಂಡೂಲ್ಕರ್ ಅವರ ಹಲವು ದೊಡ್ಡ ದಾಖಲೆಗಳನ್ನೂ ಕೂಡ ಮುರಿದಿದ್ದಾರೆ. 

ಪುಣೆಯಲ್ಲಿ ನಡೆದ ಈ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 7 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಟೀಮ್ ಇಂಡಿಯಾ 2023 ರ ವಿಶ್ವಕಪ್‌ನಲ್ಲಿ ನಾಲ್ಕನೇ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ತಂಡ 8 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ತಲುಪಿದೆ. ಈ ಪಂದ್ಯದಲ್ಲಿ ವಿಭಿನ್ನ ಶೈಲಿಯಲ್ಲಿ ಕಾಣಿಸಿಕೊಂಡ ವಿರಾಟ್ ಕೊಹ್ಲಿ ಏಕದಿನ ವೃತ್ತಿಜೀವನದ 48ನೇ ಶತಕ ಗಳಿಸಿ 103 ರನ್ ಗಳ ಅಜೇಯ ಇನ್ನಿಂಗ್ಸ್ ಆಡಿದರು. 

ಇದನ್ನೂ ಓದಿ- ವಿರಾಟ್ ಕೊಹ್ಲಿ ಅಜೇಯ ಶತಕ, ಬಾಂಗ್ಲಾ ವಿರುದ್ಧ ಟೀಮ್ ಇಂಡಿಯಾಗೆ 7 ವಿಕೆಟ್ ಗಳ ಭರ್ಜರಿ ಜಯ 

ಈ ಮೂಲಕ ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೇಗವಾಗಿ 26000 ರನ್ ಪೂರೈಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಇನ್ನೂ ವಿಶೇಷವೆಂದರೆ, ಕೇವಲ 567 ಇನ್ನಿಂಗ್ಸ್‌ಗಳಲ್ಲಿ  ಕೊಹ್ಲಿ ಈ ಸಾಧನೆ ಮಾಡಿದ್ದಾರೆ.  ಈ ವಿಚಾರದಲ್ಲಿ ಸಚಿನ್ ತೆಂಡೂಲ್ಕರ್ ಅವರನ್ನು ಕೂಡ ಹಿಂದಿಕ್ಕಿದ್ದಾರೆ.  

ಸಚಿನ್ ತೆಂಡೂಲ್ಕರ್ (664 ಪಂದ್ಯಗಳಲ್ಲಿ 782 ಇನ್ನಿಂಗ್ಸ್‌ಗಳಲ್ಲಿ 34,357 ರನ್) ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೇಗವಾಗಿ 26,000 ರನ್ ಗಳಿಸಿದ ದಾಖಲೆಯನ್ನು ಹೊಂದಿದ್ದರು. 

ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕೇವಲ ಮೂವರು ಬ್ಯಾಟ್ಸ್‌ಮನ್‌ಗಳು 26,000+ ರನ್ ಗಳಿಸಿದ್ದಾರೆ. ವೇಗವಾಗಿ 26000 ರನ್ ಪೂರೈಸಿದ ಆಟಗಾರರ ಸಂಪೂರ್ಣ ಪಟ್ಟಿ ಈ ಕೆಳಕಂಡಂತಿದೆ: 
567ಇನ್ನಿಂಗ್ಸ್‌ಗಳಲ್ಲಿ – ವಿರಾಟ್ ಕೊಹ್ಲಿ*
600ಇನ್ನಿಂಗ್ಸ್‌ಗಳಲ್ಲಿ – ಸಚಿನ್ ತೆಂಡೂಲ್ಕರ್
624ಇನ್ನಿಂಗ್ಸ್‌ಗಳಲ್ಲಿ – ರಿಕಿ ಪಾಂಟಿಂಗ್
625ಇನ್ನಿಂಗ್ಸ್‌ಗಳಲ್ಲಿ – ಕುಮಾರ ಸಂಗಕ್ಕಾರ

ಇದನ್ನೂ ಓದಿ- ಮೈಕೆಲ್ ಕ್ಲಾರ್ಕ್ ಗೆ ಕಮ್ಮಿನ್ಸ್ ತಿರುಗೇಟು: ಪಾಕ್ ವಿರುದ್ಧ ಗೆಲ್ಲುವ ವಿಶ್ವಾಸದಲ್ಲಿ ಕಾಂಗರೂ

ಏಕದಿನ ಪಂದ್ಯದಲ್ಲಿ ಅತಿ ಹೆಚ್ಚು ಶತಕ ಗಳಿಸಿದ ಆಟಗಾರ: 
ಚೇಸ್ ಮಾಸ್ಟರ್ ಎಂದು ಕರೆಯಲ್ಪಡುವ ವಿರಾಟ್ ಕೊಹ್ಲಿ ಏಕದಿನ ಪಂದ್ಯದಲ್ಲಿ ಅತಿ ಹೆಚ್ಚು ಶತಕ ಗಳಿಸುವ ಮೂಲಕ ಮತ್ತೊಮ್ಮೆ ಈ ಹೆಸರನ್ನು ಉಳಿಸಿಕೊಂಡಿದ್ದಾರೆ.  ಗೆದ್ದ ಪಂದ್ಯಗಳಲ್ಲಿ ಅತಿ ಹೆಚ್ಚು ಶತಕ ಬಾರಿಸಿದವರಲ್ಲಿ ಕೊಹ್ಲಿ ಸಚಿನ್ ಅವರ ದಾಖಲೆಯನ್ನು ಮುರಿದಿದ್ದಾರೆ. ವಿರಾಟ್ ಕೊಹ್ಲಿ ಇದುವರೆಗೂ ಗೆದ್ದ ಪಂದ್ಯಗಳಲ್ಲಿ 54 ಶತಕಗಳನ್ನು ಹೊಂದಿದ್ದರೆ, ಸಚಿನ್ 53 ಶತಕಗಳನ್ನು ಹೊಂದಿದ್ದಾರೆ.

ಅತಿ ಹೆಚ್ಚು ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ: 
ವಿರಾಟ್ ಕೊಹ್ಲಿ ಐಸಿಸಿ ಪಂದ್ಯಗಳಲ್ಲಿ ಭಾರತದ ಪರ ಅತಿ ಹೆಚ್ಚು ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರ ಎನಿಸಿಕೊಂಡಿದ್ದಾರೆ. ಈ ವಿಚಾರದಲ್ಲಿಯೂ ಕೂಡ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದ್ದಾರೆ. ಕೊಹ್ಲಿ ತಮ್ಮ ಹೆಸರಿನಲ್ಲಿ 11 ಪ್ರಶಸ್ತಿಗಳನ್ನು ಹೊಂದಿದ್ದರೆ, ಸಚಿನ್ 10 ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News