IND vs BAN: ಶತಕ ಸಿಡಿಸಿ ಸಚಿನ್ ಅವರ ಮೂರು ದಾಖಲೆಗಳನ್ನು ಮುರಿದ ವಿರಾಟ್ ಕೊಹ್ಲಿ
IND vs BAN: ಬಾಂಗ್ಲಾದೇಶ ವಿರುದ್ಧ ನಡೆದ ವಿಶ್ವಕಪ್ ಪಂದ್ಯದಲ್ಲಿ, ವಿರಾಟ್ ಕೊಹ್ಲಿ ಐಕಾನ್ ಸಚಿನ್ ತೆಂಡೂಲ್ಕರ್ ನಿರ್ಮಿಸಿದ ವಿಶ್ವದಾಖಲೆಯನ್ನು ಮುರಿದಿದ್ದಾರೆ.
IND vs BAN: ನಿನ್ನೆ(ಅಕ್ಟೋಬರ್ 19, 2023) ಬಾಂಗ್ಲಾದೇಶ ಮತ್ತು ಭಾರತ ನಡುವಿನ ವಿಶ್ವಕಪ್ 2023ರ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ ಇತಿಹಾಸ ಸೃಷ್ಟಿಸಿದ್ದಾರೆ. ಈ ಪಂದ್ಯದಲ್ಲಿ 97 ಎಸೆತಗಳಲ್ಲಿ 103 ರನ್ ಗಳಿಸಿ ಅಜೇಯ ಶತಕ ಗಳಿಸಿದ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಹಲವು ದಾಖಲೆಗಳನ್ನು ಬರೆದಿದ್ದರೆ. ಅಷ್ಟೇ ಅಲ್ಲ, ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಸಚಿನ್ ತೆಂಡೂಲ್ಕರ್ ಅವರ ಹಲವು ದೊಡ್ಡ ದಾಖಲೆಗಳನ್ನೂ ಕೂಡ ಮುರಿದಿದ್ದಾರೆ.
ಪುಣೆಯಲ್ಲಿ ನಡೆದ ಈ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 7 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಟೀಮ್ ಇಂಡಿಯಾ 2023 ರ ವಿಶ್ವಕಪ್‌ನಲ್ಲಿ ನಾಲ್ಕನೇ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ತಂಡ 8 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ತಲುಪಿದೆ. ಈ ಪಂದ್ಯದಲ್ಲಿ ವಿಭಿನ್ನ ಶೈಲಿಯಲ್ಲಿ ಕಾಣಿಸಿಕೊಂಡ ವಿರಾಟ್ ಕೊಹ್ಲಿ ಏಕದಿನ ವೃತ್ತಿಜೀವನದ 48ನೇ ಶತಕ ಗಳಿಸಿ 103 ರನ್ ಗಳ ಅಜೇಯ ಇನ್ನಿಂಗ್ಸ್ ಆಡಿದರು.
ಇದನ್ನೂ ಓದಿ- ವಿರಾಟ್ ಕೊಹ್ಲಿ ಅಜೇಯ ಶತಕ, ಬಾಂಗ್ಲಾ ವಿರುದ್ಧ ಟೀಮ್ ಇಂಡಿಯಾಗೆ 7 ವಿಕೆಟ್ ಗಳ ಭರ್ಜರಿ ಜಯ
ಈ ಮೂಲಕ ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೇಗವಾಗಿ 26000 ರನ್ ಪೂರೈಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಇನ್ನೂ ವಿಶೇಷವೆಂದರೆ, ಕೇವಲ 567 ಇನ್ನಿಂಗ್ಸ್‌ಗಳಲ್ಲಿ ಕೊಹ್ಲಿ ಈ ಸಾಧನೆ ಮಾಡಿದ್ದಾರೆ. ಈ ವಿಚಾರದಲ್ಲಿ ಸಚಿನ್ ತೆಂಡೂಲ್ಕರ್ ಅವರನ್ನು ಕೂಡ ಹಿಂದಿಕ್ಕಿದ್ದಾರೆ.
ಸಚಿನ್ ತೆಂಡೂಲ್ಕರ್ (664 ಪಂದ್ಯಗಳಲ್ಲಿ 782 ಇನ್ನಿಂಗ್ಸ್‌ಗಳಲ್ಲಿ 34,357 ರನ್) ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೇಗವಾಗಿ 26,000 ರನ್ ಗಳಿಸಿದ ದಾಖಲೆಯನ್ನು ಹೊಂದಿದ್ದರು.
ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕೇವಲ ಮೂವರು ಬ್ಯಾಟ್ಸ್‌ಮನ್‌ಗಳು 26,000+ ರನ್ ಗಳಿಸಿದ್ದಾರೆ. ವೇಗವಾಗಿ 26000 ರನ್ ಪೂರೈಸಿದ ಆಟಗಾರರ ಸಂಪೂರ್ಣ ಪಟ್ಟಿ ಈ ಕೆಳಕಂಡಂತಿದೆ:
567ಇನ್ನಿಂಗ್ಸ್‌ಗಳಲ್ಲಿ – ವಿರಾಟ್ ಕೊಹ್ಲಿ*
600ಇನ್ನಿಂಗ್ಸ್‌ಗಳಲ್ಲಿ – ಸಚಿನ್ ತೆಂಡೂಲ್ಕರ್
624ಇನ್ನಿಂಗ್ಸ್‌ಗಳಲ್ಲಿ – ರಿಕಿ ಪಾಂಟಿಂಗ್
625ಇನ್ನಿಂಗ್ಸ್‌ಗಳಲ್ಲಿ – ಕುಮಾರ ಸಂಗಕ್ಕಾರ
ಇದನ್ನೂ ಓದಿ- ಮೈಕೆಲ್ ಕ್ಲಾರ್ಕ್ ಗೆ ಕಮ್ಮಿನ್ಸ್ ತಿರುಗೇಟು: ಪಾಕ್ ವಿರುದ್ಧ ಗೆಲ್ಲುವ ವಿಶ್ವಾಸದಲ್ಲಿ ಕಾಂಗರೂ
ಏಕದಿನ ಪಂದ್ಯದಲ್ಲಿ ಅತಿ ಹೆಚ್ಚು ಶತಕ ಗಳಿಸಿದ ಆಟಗಾರ:
ಚೇಸ್ ಮಾಸ್ಟರ್ ಎಂದು ಕರೆಯಲ್ಪಡುವ ವಿರಾಟ್ ಕೊಹ್ಲಿ ಏಕದಿನ ಪಂದ್ಯದಲ್ಲಿ ಅತಿ ಹೆಚ್ಚು ಶತಕ ಗಳಿಸುವ ಮೂಲಕ ಮತ್ತೊಮ್ಮೆ ಈ ಹೆಸರನ್ನು ಉಳಿಸಿಕೊಂಡಿದ್ದಾರೆ. ಗೆದ್ದ ಪಂದ್ಯಗಳಲ್ಲಿ ಅತಿ ಹೆಚ್ಚು ಶತಕ ಬಾರಿಸಿದವರಲ್ಲಿ ಕೊಹ್ಲಿ ಸಚಿನ್ ಅವರ ದಾಖಲೆಯನ್ನು ಮುರಿದಿದ್ದಾರೆ. ವಿರಾಟ್ ಕೊಹ್ಲಿ ಇದುವರೆಗೂ ಗೆದ್ದ ಪಂದ್ಯಗಳಲ್ಲಿ 54 ಶತಕಗಳನ್ನು ಹೊಂದಿದ್ದರೆ, ಸಚಿನ್ 53 ಶತಕಗಳನ್ನು ಹೊಂದಿದ್ದಾರೆ.
ಅತಿ ಹೆಚ್ಚು ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ:
ವಿರಾಟ್ ಕೊಹ್ಲಿ ಐಸಿಸಿ ಪಂದ್ಯಗಳಲ್ಲಿ ಭಾರತದ ಪರ ಅತಿ ಹೆಚ್ಚು ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರ ಎನಿಸಿಕೊಂಡಿದ್ದಾರೆ. ಈ ವಿಚಾರದಲ್ಲಿಯೂ ಕೂಡ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದ್ದಾರೆ. ಕೊಹ್ಲಿ ತಮ್ಮ ಹೆಸರಿನಲ್ಲಿ 11 ಪ್ರಶಸ್ತಿಗಳನ್ನು ಹೊಂದಿದ್ದರೆ, ಸಚಿನ್ 10 ಪ್ರಶಸ್ತಿಗಳನ್ನು ಗೆದ್ದಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.