ವಿಶಾಖಪಟ್ಟಣ: ಬಲಿಷ್ಠ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾದ ಸ್ಟಾರ್ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಚೊಚ್ಚಲ ದ್ವಿಶತಕ ಸಿಡಿಸಿ ಸಂಭ್ರಮಿಸಿದ್ದಾರೆ. ವಿಶಾಖಪಟ್ಟಣದ ಡಾ.ವೈ.ಎಸ್.ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಂಗ್ಲರ ವಿರುದ್ಧ ನಡೆಯುತ್ತಿರುವ 2ನೇ ಟೆಸ್ಟ್‌ನ 2ನೇ ದಿನದಾಟದಲ್ಲಿ ಯಶಸ್ವಿ ಜೈಸ್ವಾಲ್ ದ್ವಿಶತಕ ಪೂರೈಸುವಲ್ಲಿ ಯಶಸ್ವಿಯಾಗಿದ್ದಾರೆ.
ಶುಕ್ರವಾರ ಮೊದಲ ದಿನದಾಟದಂತ್ಯದ ವೇಳೆಗೆ 257 ಎಸೆತಗಳನ್ನು ಎದುರಿಸಿ 179 ರನ್ ಗಳಿಸಿದ್ದ ಜೈಸ್ವಾಲ್, ಶನಿವಾರ(ಫೆ.3) 2ನೇ ದಿನದಾಟದಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸುವ ಮೂಲಕ ಮಿಂಚಿದರು. 277 ಎಸೆತಗಳನ್ನು ಎದುರಿಸಿದ ಅವರು ದ್ವಿಶತಕ ಪೂರೈಸಿ ಮೈದಾನದಲ್ಲಿ ಸಂಭ್ರಮಿಸಿದರು.
ಇದನ್ನೂ ಓದಿ: Rohit Sharma: 56 ಟೆಸ್ಟ್ ಪಂದ್ಯಗಳನ್ನಾಡಿರುವ ರೋಹಿತ್ ಶರ್ಮಾ ವಿಕೆಟ್ ಕಬಳಿಸಿದ್ದು 20ರ ಹರೆಯದ ಈ ಸ್ಪಿನ್ನರ್!
That Leap. That Celebration. That Special Feeling 👏 👏
Here's how Yashasvi Jaiswal notched up his Double Hundred 🎥 🔽
Follow the match ▶️ https://t.co/X85JZGt0EV#TeamIndia | #INDvENG | @ybj_19 | @IDFCFIRSTBank pic.twitter.com/CUiikvbQqa
— BCCI (@BCCI) February 3, 2024
290 ಎಸೆತಗಳನ್ನು ಎದುರಿಸಿದ ಜೈಸ್ವಾಲ್ 19 ಬೌಂಡರಿ ಮತ್ತು 7 ಭರ್ಜರಿ ಸಿಕ್ಸರ್ ಇದ್ದ 209 ರನ್ ಗಳಿಸಿ ಜೇಮ್ಸ್ ಆಂಡರ್ಸನ್‌ಗೆ ವಿಕೆಟ್ ಒಪ್ಪಿಸಿದರು. ಮೊದಲ ದಿನ ಒಂದೆಡೆ ವಿಕೆಟ್ ಉರುಳುತ್ತಿದ್ದರೂ ಇಂಗ್ಲೆಂಡ್ ಸ್ಪಿನ್ನರ್‌ಗಳ ದಾಳಿಯನ್ನು ಸಮರ್ಥವಾಗಿ ಹಿಮ್ಮೆಟ್ಟಿಸಿದ ಜೈಸ್ವಾಲ್ ಕ್ರೀಸ್‌ನಲ್ಲಿ ಗಟ್ಟಿಯಾಗಿ ನೆಲೆಯೂರಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ತೋರಿದರು. ತಮ್ಮ ರಕ್ಷಣಾತ್ಮಕ ಆಟದಿಂದ ಪ್ರೇಕ್ಷಕರ ಮನರಂಜಿಸಿದ ಜೈಸ್ವಾಲ್ 72ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದರು. ಯಶಸ್ವಿಯಾದರು.
📸 📸 In Pics!
That 2⃣0⃣0⃣ Moment!
Follow the match ▶️ https://t.co/X85JZGt0EV#TeamIndia | #INDvENG | @IDFCFIRSTBank pic.twitter.com/QsJO7tUTiH
— BCCI (@BCCI) February 3, 2024
ಸದ್ಯದ ಮಾಹಿತಿ ಪ್ರಕಾರ ಟೀಂ ಇಂಡಿಯಾ 112 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 396 ರನ್ ಗಳಿಸಿದೆ. ಭಾರತದ ಪರ ಶುಭಮನ್ ಗಿಲ್(34), ರಜತ್ ಪಾಟಿದಾರ್ (32), ಶ್ರೇಯಸ್ ಅಯ್ಯರ್(27), ಅಕ್ಸರ್ ಪಟೇಲ್(27) ಮತ್ತು ಆರ್.ಅಶ್ವಿನ್ (20) ರನ್ ಗಳಿಸಿದರು. ಇಂಗ್ಲೆಂಡ್ ಪರ ಜೇಮ್ಸ್ ಆಂಡರ್ಸನ್, ಶೋಯೆಬ್ ಬಶೀರ್ ಮತ್ತು ರೆಹಾನ್ ಅಹ್ಮದ್ ತಲಾ 3 ವಿಕೆಟ್ ಪಡೆಯುವ ಮೂಲಕ ಮಿಂಚಿದರು.
ಇದನ್ನೂ ಓದಿ: Yashaswi Jaiswal GF ಯಾರು? ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ಛಾಯಾಚಿತ್ರಗಳು!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=xFI-KJNrEP8
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.