Rohit Sharma : ಭಾರತ ತಂಡ ಟೆಸ್ಟ್​ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ 400ಕ್ಕಿಂತ ಅಧಿಕ ರನ್​ಗಳ ಅಂತರದಲ್ಲಿ ಗೆದ್ದು ಬೀಗಿದೆ. ಈ ಗೆಲುವುನೊಂದಿಗೆ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮ ವಿಶೇಷ ದಾಖಲೆಯೊಂದನ್ನು ತಮ್ಮ ಹೆಸರಲ್ಲಿ ಬರೆದುಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಏಕದಿನ ಹಾಗೂ ಟೆಸ್ಟ್​ ಎರಡೂ ಮಾದರಿಯಲ್ಲಿ ಅತೀ ಹೆಚ್ಚು ರನ್​ಗಳ ಜಯ ರೋಹಿತ್​ ನಾಯಕತ್ವದಲ್ಲಿ ಬಂದಿದೆ. ಇವತ್ತಿನ ಜಯಕ್ಕಿಂತ ಮೊದಲು ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ 372 ರನ್​ಗಳ ವಿನ್‌ ಆಗಿದ್ದು, ಗರಿಷ್ಠ ರನ್​ಗಳ ವಿಜಯವಾಗಿತ್ತು. 


ಇದನ್ನೂ ಓದಿ : ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 434 ರನ್ ಗಳ ಅಂತರದಿಂದ ದಾಖಲೆಯ ಜಯ


ಕಳೆದ ವರ್ಷ ಏಕದಿನ ಕ್ರಿಕೆಟ್​ನಲ್ಲಿ ಶ್ರೀಲಂಕಾ ವಿರುದ್ಧ ಎರಡು ಬಾರಿ 300ಕ್ಕೂ ಅಧಿಕ ರನ್​ಗಳ ಅಂತರದಿಂದ ಭಾರತ ಗೆಲುವು ಸಾಧಿಸಿತ್ತು. ಇದೀಗ ಟೆಸ್ಟ್​ನಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲೇ ಮೊದಲ ಬಾರಿಗೆ 400 ಕ್ಕಿಂತ ಹೆಚ್ಚು ರನ್​ಗಳಿಂದ ಗೆದ್ದು ಬೀಗಿದೆ. ಟಿ20 ಕ್ರಿಕೆಟ್​ನಲ್ಲಿ ಈ ದಾಖಲೆ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಕಿವೀಸ್​ ವಿರುದ್ಧ ಭಾರತ ಕಳೆದ ವರ್ಷ 168 ರನ್​ಗಳ ಜಯ ಸಾಧಿಸಿದೆ. 


ಮತ್ತೊಂದು ವಿಶೇಷವೆಂದರೆ ರೋಹಿತ್ ಶರ್ಮಾ ಟೆಸ್ಟ್​ ಕ್ರಿಕೆಟ್​ನಲ್ಲಿ ಶತಕ ಬಾರಿಸಿದ ಎಲ್ಲಾ ಪಂದ್ಯದಲ್ಲೂ ಭಾರತ ಗೆದ್ದಿದೆ. ಟೆಸ್ಟ್ ಕ್ರಿಕೆಟ್​ನಲ್ಲಿ ರೋಹಿತ್ ಶರ್ಮಾ ಇದುವರೆಗೂ 11 ಶತಕ ಸಿಡಿಸಿದ್ದು, ಎಲ್ಲಾ ಪಂದ್ಯಗಳಲ್ಲೂ ಭಾರತ ಜಯ ಸಾಧಿಸಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.