Ravichandran Ashwin: ಟೀಂ ಇಂಡಿಯಾ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ 500 ವಿಕೆಟ್ ಪಡೆದ ಭಾರತದ ಎರಡನೇ ಬೌಲರ್ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದರು.. ಅದೇ ರೀತಿ ನಿನ್ನೆಯಷ್ಟೇ  ರಾಂಚಿಯಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ದಿನ ಮತ್ತೊಂದು ಅಪರೂಪದ ಸಾಧನೆ ಮಾಡಿದ್ದಾರೆ..


COMMERCIAL BREAK
SCROLL TO CONTINUE READING

ಈಗಾಗಲೇ ಟೆಸ್ಟ್ ಕ್ರಿಕೆಟ್‌ನಲ್ಲಿ 500 ವಿಕೆಟ್‌ಗಳನ್ನು ಪಡೆದು ದೊಡ್ಡ ದಾಖಲೆ ಸೃಷ್ಟಿಸಿದ ಭಾರತದ ಸ್ಟಾರ್ ಸ್ಪಿನ್ನರ.. ರಾಂಚಿಯಲ್ಲಿ ನಡೆದ ಭಾರತ-ಇಂಗ್ಲೆಂಡ್ ನಡುವಿನ 4ನೇ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ ಎದುರಾಳಿ ವಿರುದ್ಧ 100 ವಿಕೆಟ್ ಮತ್ತು 1000 ರನ್ ಗಳಿಸಿದ ಮೊದಲ ಭಾರತೀಯ ಆಲ್‌ರೌಂಡರ್ ಎಂಬ ಇತಿಹಾಸವನ್ನು ನಿರ್ಮಿಸಿದ್ದಾರೆ..


ಇದನ್ನೂ ಓದಿ-ಇದಪ್ಪಾ ಸಾಧನೆ ಅಂದ್ರೆ: ಗುಡಿಸಲಲ್ಲಿದ್ದ ಯಶಸ್ವಿ ಜೈಸ್ವಾಲ್‌ ಹೊಸ ಮನೆ ಬೆಲೆ ಎಷ್ಟು ಗೊತ್ತಾ..?


ನಾಲ್ಕನೇ ಟೆಸ್ಟ್‌ ಪಂದ್ಯದ ಮೊದಲಇನ್ನಿಂಗ್ಸ್‌ನಲ್ಲಿ ಜಾನಿ ಬೈರ್‌ಸ್ಟೋವ್ ಅವರನ್ನು ಔಟ್ ಮಾಡಿ ಆರ್ ಅಶ್ವಿನ್ ಈ ಸಾಧನೆ ಮಾಡಿದ್ದಾರೆ.. ಅಶ್ವಿನ್ ತಮ್ಮ 98ನೇ ಟೆಸ್ಟ್ ನಲ್ಲಿ ಈ ಮೈಲಿಗಲ್ಲು ತಲುಪಿದ್ದಾರೆ.. ಒಟ್ಟಾರೆಯಾಗಿ ಅಶ್ವಿನ್‌ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಎರಡನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.


ಸದ್ಯ 350 ಅಥವಾ ಅದಕ್ಕಿಂತ ಹೆಚ್ಚು ಟೆಸ್ಟ್ ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಅಶ್ವಿನ್ ಅನಿಲ್ ಕುಂಬ್ಳೆ, ಮುತ್ತಯ್ಯ ಮುರಳೀಧರನ್, ಸ್ಟುವರ್ಟ್ ಬ್ರಾಡ್ ಮತ್ತು ಜೇಮ್ಸ್ ಆಂಡರ್ಸನ್ ಅವರ ಹೆಸರುಗಳಿವೆ.. ಇನ್ನು ಈ ಪಂದ್ಯದಲ್ಲಿ ಭಾರತ ತಂಡದ ಪರವಾಗಿ ಆಕಾಶ್ ದೀಪ್ ಅವರನ್ನು ಟೆಸ್ಟ್ ಕ್ರಿಕೆಟ್‌ಗೆ ಪರಿಚಯಿಸಲಾಯಿತು.. 


ಇದನ್ನೂ ಓದಿ-IND vs ENG Ranchi Test: ಬುಮ್ರಾಗೆ ರೆಸ್ಟ್‌.. ಆಕಾಶ್ ದೀಪ್ ಟೆಸ್ಟ್ ಕ್ರಿಕೆಟ್‌ಗೆ ಎಂಟ್ರಿ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.