IND vs ENG: ಭಾರತದ ಟೆಸ್ಟ್ ಕ್ರಿಕೆಟ್ ತಂಡದಿಂದ ಬುಮ್ರಾ ಹೊರಕ್ಕೆ
ಮಾರ್ಚ್ 4 ರಿಂದ ಅಹಮದಾಬಾದ್‌ನ ಮೊಟೆರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಮತ್ತು ಅಂತಿಮ ಮುಖಾಮುಖಿಗಾಗಿ ಜಸ್ಪ್ರೀತ್ ಬುಮ್ರಾ ಅವರನ್ನು ಭಾರತೀಯ ಟೆಸ್ಟ್ ತಂಡದಿಂದ ಕೈ ಬಿಡಲಾಗಿದೆ.
ನವದೆಹಲಿ: ಮಾರ್ಚ್ 4 ರಿಂದ ಅಹಮದಾಬಾದ್‌ನ ಮೊಟೆರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಮತ್ತು ಅಂತಿಮ ಮುಖಾಮುಖಿಗಾಗಿ ಜಸ್ಪ್ರೀತ್ ಬುಮ್ರಾ ಅವರನ್ನು ಭಾರತೀಯ ಟೆಸ್ಟ್ ತಂಡದಿಂದ ಕೈ ಬಿಡಲಾಗಿದೆ.
ಭಾರತೀಯ ಕ್ರಿಕೆಟ್ ಆಡಳಿತ ಮಂಡಳಿ ಬಿಸಿಸಿಐ ಈ ನಿಟ್ಟಿನಲ್ಲಿ ಹೇಳಿಕೆ ಬಿಡುಗಡೆ ಮಾಡಿತು ಮತ್ತು ವೈಯಕ್ತಿಕ ಕಾರಣಗಳಿಂದಾಗಿ ತಂಡದಿಂದ ಬಿಡುಗಡೆ ಮಾಡುವಂತೆ ಅವರು ಮನವಿ ಮಾಡಿದ್ದಾರೆ ಎನ್ನಲಾಗಿದೆ.ಏತನ್ಮಧ್ಯೆ, ಟೆಸ್ಟ್ ತಂಡದಲ್ಲಿ ಯಾವುದೇ ಸೇರ್ಪಡೆ ಇರುವುದಿಲ್ಲ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.
27 ವರ್ಷದ ಬುಮ್ರಾ (Jasprit Bumrah)ಗೆ ಇಂಗ್ಲೆಂಡ್ ವಿರುದ್ಧದ ಮುಂಬರುವ ಐದು ಪಂದ್ಯಗಳ ಟಿ 20 ಸರಣಿಗೆ ವಿಶ್ರಾಂತಿ ನೀಡಲಾಗಿದೆ ಮತ್ತು ಕೆಲಸದ ಹೊರೆ ನಿರ್ವಹಣೆಯನ್ನು ಪರಿಗಣಿಸಿ ಅವರನ್ನು 50 ಓವರ್‌ಗಳ ತಂಡದಲ್ಲಿ ಆಯ್ಕೆ ಮಾಡದಿರುವ ಸಾಧ್ಯತೆಗಳಿವೆ.ಏತನ್ಮಧ್ಯೆ, ಬುಮ್ರಾ ಅವರ ಅನುಪಸ್ಥಿತಿಯು ಈ ವರ್ಷದ ಟಿ 20 ವಿಶ್ವಕಪ್ ಗಾಗಿ ತಂಡದಲ್ಲಿ ಸೇರ್ಪಡೆಗೊಳ್ಳುವ ಇತರ ಸಂಭಾವ್ಯ ಅಭ್ಯರ್ಥಿಗಳನ್ನು ಪರೀಕ್ಷಿಸಲು ಅವಕಾಶ ಒದಗಿಸುತ್ತದೆ.
ಭಾರತ ಗುರುವಾರ ಇಂಗ್ಲೆಂಡ್ ವಿರುದ್ಧ 10 ವಿಕೆಟ್‌ಗಳ ಜಯ ಸಾಧಿಸಿದೆ ಮತ್ತು ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ.ಆದಾಗ್ಯೂ, ಜೂನ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಗೆ ಪ್ರವೇಶಿಸಬೇಕಾದರೆ ಭಾರತ ಕನಿಷ್ಠ ಪಂದ್ಯವನ್ನು ಡ್ರಾ ಮಾಡಿಕೊಳ್ಳಬೇಕು.
4 ನೇ ಟೆಸ್ಟ್ ಪಂದ್ಯಕ್ಕೆ ಭಾರತದ ತಂಡ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ರೋಹಿತ್ ಶರ್ಮಾ, ಮಾಯಾಂಕ್ ಅಗರ್ವಾಲ್, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ಉಪನಾಯಕ), ಕೆ.ಎಲ್. ರಾಹುಲ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ ( ವಿಕೆಟ್ ಕೀಪರ್), ಆರ್ ಅಶ್ವಿನ್, ಕುಲದೀಪ್ ಯಾದವ್, ಆಕ್ಸಾರ್ ಪಟೇಲ್, ವಾಷಿಂಗ್ಟನ್ ಸುಂದರ್, ಇಶಾಂತ್ ಶರ್ಮಾ, ಎಂಡಿ ಸಿರಾಜ್, ಉಮೇಶ್ ಯಾದವ್.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.