IND vs ENG: ಮೊಹಮ್ಮದ್ ಸಿರಾಜ್ ‘ಸಿಗ್ನೇಚರ್ ಸ್ಟೈಲ್’ ನ ಕಟೌಟ್ ನಿಲ್ಲಿಸಿದ ಅಭಿಮಾನಿಗಳು..!
ಮೊಹಮ್ಮದ್ ಸಿರಾಜ್ ಅವರ `ಸಿಗ್ನೇಚರ್ ಸ್ಟೈಲ್`ನ ಕಟೌಟ್ ನಿಲ್ಲಿಸುವ ಮೂಲಕ ಅಭಿಮಾನಿಗಳು ಸಂಭ್ರಮಿಸಿದ್ದಾರೆ.
ನವದೆಹಲಿ: ಸಾಮಾನ್ಯವಾಗಿ ಅಭಿಮಾನಿಗಳು ಸಿನಿಮಾ ಸ್ಟಾರ್ ಗಳ ಕಟೌಟ್ ಹಾಕಿ ಸಂಭ್ರಮಿಸುವುದನ್ನೂ ನೋಡಿದ್ದೀರಿ. ಕ್ರಿಕೆಟಿಗರ ಕಟೌಟ್ ಹಾಕಿದ್ದವನ್ನು ನೋಡಿದ್ದೀರಾ..? ಸೂಪರ್ ಸ್ಟಾರ್ಗಳ ಸಿನಿಮಾ ಬಿಡುಗಡೆಯಾಗುತ್ತಿದ್ದಂತೆ ದೊಡ್ಡ ದೊಡ್ಡ ಕಟೌಟ್ಗಳು ರಾರಾಜಿಸಲು ಶುರುವಾಗುತ್ತವೆ. ಬರೀ ಸಿನಿಮಾ ಕ್ಷೇತ್ರದಲ್ಲಿದ್ದ ಈ ಸಂಪ್ರದಾಯವಿಗ ಕ್ರಿಕೆಟ್ ಕ್ಷೇತ್ರಕ್ಕೂ ಕಾಲಿಟ್ಟಿದೆ. ಮೊದಲ ಬಾರಿಗೆ ಮಹೇಂದ್ರ ಸಿಂಗ್ ಧೋನಿ(Mahendra Singh Dhoni) ಅಭಿಮಾನಿಗಳು ತಮ್ಮ ನೆಚ್ಚಿನ ಆಟಗಾರನ ಕಟೌಟ್ ಹಾಕಿ ಸಂಭ್ರಮಿಸಿದ್ದರು. ಈಗ ಮೊಹಮ್ಮದ್ ಸಿರಾಜ್(Mohammed Siraj) ಕಟೌಟ್ ಹಾಕಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.
ಹೌದು, ಎದುರಾಳಿ ತಂಡದ ವಿಕೆಟ್ ಪಡೆದ ಖುಷಿಯಲ್ಲಿ ಟೀಕಾಕಾರರಿಗೆ ಬಾಯಿ ಮುಚ್ಚಿಕೊಳ್ಳುವಂತೆ ಸಂಭ್ರಮಿಸುವ ಮೊಹಮ್ಮದ್ ಸಿರಾಜ್(Mohammed Siraj) ಅವರ ಸಿಗ್ನೇಚರ್ ಸ್ಟೈಲ್(Signature Style)ನ ಕಟೌಟ್ ಅನ್ನು ನಿಲ್ಲಿಸುವ ಮೂಲಕ ಅವರ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿತ್ತು. ಕ್ರಿಕೆಟ್ ಕಾಶಿಯಲ್ಲಿ ಆಂಗ್ಲರನ್ನು 151 ರನ್ಗಳಿಂದ ಬಗ್ಗು ಬಡಿದ ವಿರಾಟ್ ಕೊಹ್ಲಿ ಪಡೆ 5 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ1-0 ದಿಂದ ಮುನ್ನಡೆ ಸಾಧಿಸಿದೆ.
ಇದನ್ನೂ ಓದಿ: ಅಫ್ಘಾನಿಸ್ತಾನ್ ದಲ್ಲಿ ಆಸ್ಟ್ರೇಲಿಯಾದ ಕ್ರಿಕೆಟರ್ ಸ್ಟೀವ್ ಸ್ಮಿತ್...!
Lords 2nd Test)ದಲ್ಲಿ ಟೀಂ ಇಂಡಿಯಾ ಆಂಗ್ಲರ ವಿರುದ್ಧ ಗೆಲುವು ಸಾಧಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದು ಯುವ ವೇಗಿ ಮೊಹಮ್ಮದ್ ಸಿರಾಜ್. ಮೊದಲ ಮತ್ತು 2ನೇ ಇನ್ನಿಂಗ್ಸ್ ನಲ್ಲಿ ತಲಾ 4ರಂತೆ ಒಟ್ಟು 8 ವಿಕೆಟ್ ಉರುಳಿಸಿದ ಸಿರಾಜ್ ತಂಡಕ್ಕೆ ಗೆಲುವು ತಂದುಕೊಡಲು ನೆರವಾಗಿದ್ದರು. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ನಲ್ಲಿ ಸಿರಾಜ್ ಅಮೋಘ ಸಾಧನೆ ಮಾಡಿದ ಬೆನ್ನಲ್ಲೇ ಅವರ ಹುಟ್ಟೂರಿನಲ್ಲಿ ಸಂಭ್ರಮ ಮನೆಮಾಡಿದೆ. ಆಂಗ್ಲರ ಕೊನೆ ವಿಕೆಟ್ ಉರುಳುತ್ತಿದ್ದಂತೆ ಟೀಂ ಇಂಡಿಯಾ ಆಟಗಾರರು ಲಾರ್ಡ್ಸ್ ಮೈದಾನದಲ್ಲಿ ಸಂಭ್ರಮಾಚರಣೆ ಮಾಡಿದರು. ಸಿರಾಜ್ ಸಾಧನೆಗೆ ಅಪಾರ ಮೆಚ್ಚುಗೆ ವ್ಯಕ್ತವಾಯಿತು.
ಇದನ್ನೂ ಓದಿ: IPL 2021: ರಾಜಸ್ಥಾನ ತಂಡಕ್ಕೆ ಬಿಗ್ ಶಾಕ್! ಈ ಮೂವರು ಸ್ಟಾರ್ ಆಟಗಾರರು ಪಂದ್ಯಾವಳಿಗೆ ಗೈರು
ಸೋಷಿಯಲ್ ಮೀಡಿಯಾ(Social Media)ದಲ್ಲಿಯೂ ಸಿರಾಜ್ ಅವರ ಅದ್ಭುತ ಪ್ರದರ್ಶನಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿತ್ತು. ಹೈದರಾಬಾದಿನಲ್ಲಿ ಸಿರಾಜ್ ನೆರೆಹೊರೆಯವರು ರಸ್ತೆಬದಿ ಬೃಹತ್ ಕಟೌಟ್ ನಿಲ್ಲಿಸುವ ಮೂಲಕ ಅಭಿಮಾನ ಮೆರೆದಿದ್ದಾರೆ. ವಿಕೆಟ್ ಪಡೆದ ಸಂಭ್ರಮದಲ್ಲಿ ಸಿರಾಜ್ ಟೀಕಾಕಾರರಿಗೆ ಬಾಯಿ ಮುಚ್ಚಿಕೊಳ್ಳುವಂತೆ ಹೇಳುವ ಅವರ ಸಿಗ್ನೇಚರ್ ಸ್ಟೈಲ್ ನ ಕಟೌಟ್ ನಿಲ್ಲಿಸಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಈ ಮೂಲಕ ಹೈದಾಬಾದ್ ಕುವರನ ಸಾಧನೆಗೆ ಅಲ್ಲಿನ ಜನರು ಗೌರವ ಸಲ್ಲಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ