IND vs ENG Ranchi Test: ಬುಮ್ರಾಗೆ ರೆಸ್ಟ್, ಕೆ.ಎಲ್.ರಾಹುಲ್ ವಾಪಸ್..?
IND vs ENG Ranchi 4th Test: ಟೀಂ ಇಂಡಿಯಾ ಈಗಾಗಲೇ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-1ರಿಂದ ಮುನ್ನಡೆ ಸಾಧಿಸಿದ್ದು, ರಾಂಚಿಯಲ್ಲಿ ಫೆಬ್ರವರಿ 23ರಿಂದ 4ನೇ ಟೆಸ್ಟ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಗೆದ್ದರೆ ಭಾರತ ತಂಡವು ಸರಣಿ ಕೈವಶ ಮಾಡಿಕೊಳ್ಳಲಿದೆ.
IND vs ENG Ranchi 4th Test: ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಿಂದ ಮಧ್ಯಮ ವೇಗಿ ಜಸ್‌ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದ್ದು, ಕನ್ನಡಿಗ ಕೆ.ಎಲ್.ರಾಹುಲ್ ತಂಡಕ್ಕೆ ಮರಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಟೀಂ ಇಂಡಿಯಾ ಈಗಾಗಲೇ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-1ರಿಂದ ಮುನ್ನಡೆ ಸಾಧಿಸಿದ್ದು, ರಾಂಚಿಯಲ್ಲಿ ಫೆಬ್ರವರಿ 23ರಿಂದ 4ನೇ ಟೆಸ್ಟ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಗೆದ್ದರೆ ಭಾರತ ತಂಡವು ಸರಣಿ ಕೈವಶ ಮಾಡಿಕೊಳ್ಳಲಿದೆ.
ಇದನ್ನೂ ಓದಿ: Rohit Sharma: ಸರ್ಫರಾಜ್-ಗಿಲ್ ಇವರ್ಯಾರೂ ಅಲ್ಲ.. ಈ ಇಬ್ಬರೂ ಆಟಗಾರರೇ ಟೀಂ ಇಂಡಿಯಾದ ಹೀರೋಗಳು ಎಂದ ರೋಹಿತ್ ಶರ್ಮಾ!
ಭಾರತ ತಂಡವು ರಾಜ್‌ಕೋಟ್‌ನಲ್ಲಿ ನಡೆದ 3ನೇ ಟೆಸ್ಟ್ ಪಂದ್ಯದಲ್ಲಿ 434 ರನ್‌ಗಳ ಭಾರೀ ಅಂತರದಿಂದ ಜಯ ಸಾಧಿಸುವ ಮೂಲಕ ಸರಣಿಯಲ್ಲಿ ಹಿಡಿತ ಸಾಧಿಸಿದೆ. ಪ್ರಮುಖ ಆಟಗಾರರಿಲ್ಲದೇ ತಂಡವು ಕೇವಲ ಯುವ ಆಟಗಾರಿಂದಲೇ ಗೆಲುವು ಸಾಧಿಸಿದ್ದರಿಂದ ಆತ್ಮವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ.
ಪ್ರಮುಖ ಆಟಗಾರರ ಅನುಪಸ್ಥಿತಿಯಲ್ಲಿ ಜಸ್‌ಪ್ರೀತ್ ಬುಮ್ರಾ ಮೇಲೆ ಒತ್ತಡ ಹೆಚ್ಚಾಗಿತ್ತು. ಈ ಹಿನ್ನೆಲೆ 3ನೇ ಟೆಸ್ಟ್ ಪಂದ್ಯದಲ್ಲಿ ಬುಮ್ರಾ ಆಡಬೇಕಿತ್ತು. ಇದೀಗ ಅವರ ಮೇಲಿನ ಒತ್ತಡ ಕಡಿಮೆ ಮಾಡಲು 4ನೇ ಟೆಸ್ಟ್ ಪಂದ್ಯದಿಂದ ವಿಶ್ರಾಂತಿ ನೀಡಲು ಬಿಸಿಸಿಐ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: IND vs ENG: ರಾಜ್‌ಕೋಟ್ ಟೆಸ್ಟ್‌ನಲ್ಲಿ ದಾಖಲಾದ ಟಾಪ್-10 ವಿಶ್ವ ದಾಖಲೆಗಳಿವು!
2 ಮತ್ತು 3ನೇ ಟೆಸ್ಟ್ ಪಂದ್ಯದಲ್ಲಿ ಸ್ಥಾನ ಪಡೆದರೂ ಫಿಟ್ನೆಸ್ ಸಮಸ್ಯೆಯಿಂದ ತಂಡದಲ್ಲಿ ಅವಕಾಶ ಪಡೆಯಲು ವಿಫಲರಾಗಿದ್ದ ಕನ್ನಡಿಗ ಕೆ.ಎಲ್.ರಾಹುಲ್ 4ನೇ ಟೆಸ್ಟ್ ಪಂದ್ಯಕ್ಕೆ ಮರಳುವ ಸಾಧ್ಯತೆ ಇದೆ. ರಾಹುಲ್ ಮರಳಿದರೆ ಸತತ ವಿಫಲರಾಗಿರುವ ರಜತ್ ಪಾಟಿದರ್ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಇದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.