ಭಾರತ-ಇಂಗ್ಲೆಂಡ್ ಸಂಬಂಧಿಸಿ ಮೀಮ್ ಶೇರ್ ಮಾಡಿದ ಕ್ರಿಕೆಟ್ ದಿಗ್ಗಜ: ಇದರ ಅರ್ಥವೇನು!
ಒಂದೆಡೆ ಭಾರತದ ಬ್ಯಾಟ್ಸ್‌ಮನ್‌ಗಳು ರನ್ ಗಳಿಸಲು ಪರದಾಡುತ್ತಿದ್ದರೆ, ಇನ್ನೊಂದೆಡೆ ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳು ಅಬ್ಬರದ ಪ್ರದರ್ಶನವನ್ನು ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಭಾರತದ ಮಾಜಿ ಬ್ಯಾಟ್ಸ್‌ಮನ್ ವಾಸಿಂ ಜಾಫರ್ ಸಾಮಾಜಿಕ ಮಾಧ್ಯಮದಲ್ಲಿ ಮೀಮ್ ಹಂಚಿಕೊಂಡಿದ್ದು, ಇದು ಅಭಿಮಾನಿಗಳಿಗೆ ಕೊಂಚ ಗೊಂದಲ ಜೊತೆಗೆ ಸಾಕಷ್ಟು ಇಷ್ಟವಾಗುತ್ತಿದೆ.
ಟೀಂ ಇಂಡಿಯಾದಿಂದ ಬಹುತೇಕ ಕೈತಪ್ಪಿದೆ ಎನ್ನಬಹುದು. ಮೊದಲನೇ ಇನ್ನಿಂಗ್ಸ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಭಾರತ ತಂಡ ನಾಲ್ಕನೇ ದಿನದಾಟದಲ್ಲಿ ಕಳಪೆ ಪ್ರದರ್ಶನ ನೀಡಿದೆ. ಇಂಗ್ಲೆಂಡ್ ತಂಡವು ನಾಲ್ಕನೇ ದಿನದಲ್ಲಿ ಅಮೋಘ ಆಟ ಪ್ರದರ್ಶಿಸಿದೆ. ಆರಂಭಿಕ ಜೋಡಿ ತಂಡಕ್ಕೆ ಗೆಲುವಿನ ಭರವಸೆಯನ್ನು ನೀಡಿದ್ದಾರೆ.
ಇದನ್ನೂ ಓದಿ: ಹುಡುಗಿಯರ ಈ ವಿಚಾರಗಳ ಬಗ್ಗೆ ಹೆಚ್ಚು ಸರ್ಚ್ ಮಾಡಿ ತಿಳಿ ದುಕೊಳ್ಳುತ್ತಾರಂತೆ ಹುಡುಗರು
ಒಂದೆಡೆ ಭಾರತದ ಬ್ಯಾಟ್ಸ್‌ಮನ್‌ಗಳು ರನ್ ಗಳಿಸಲು ಪರದಾಡುತ್ತಿದ್ದರೆ, ಇನ್ನೊಂದೆಡೆ ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳು ಅಬ್ಬರದ ಪ್ರದರ್ಶನವನ್ನು ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಭಾರತದ ಮಾಜಿ ಬ್ಯಾಟ್ಸ್‌ಮನ್ ವಾಸಿಂ ಜಾಫರ್ ಸಾಮಾಜಿಕ ಮಾಧ್ಯಮದಲ್ಲಿ ಮೀಮ್ ಹಂಚಿಕೊಂಡಿದ್ದು, ಇದು ಅಭಿಮಾನಿಗಳಿಗೆ ಕೊಂಚ ಗೊಂದಲ ಜೊತೆಗೆ ಸಾಕಷ್ಟು ಇಷ್ಟವಾಗುತ್ತಿದೆ.
ಕ್ರಿಕೆಟ್‌ನ ಮಾಜಿ ಆಟಗಾರ, ಅನುಭವಿ ಬ್ಯಾಟ್ಸ್‌ಮನ್ ವಾಸಿಂ ಜಾಫರ್, ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮೀಮ್ ಅನ್ನು ಪೋಸ್ಟ್ ಮಾಡಿದ್ದಾರೆ. ರಸ್ತೆ ನಿರ್ಮಿಸಲು ಬಳಸಲಾಗುವ ರೋಲರ್‌ನೊಂದಿಗೆ 'ಖಟ್ಟಾ ಮೀಠಾ' ಚಿತ್ರದ ಅಕ್ಷಯ್ ಕುಮಾರ್ ಮತ್ತು ಜಾನಿ ಲಿವರ್ ಅವರ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. "ಕ್ರಿಕೆಟ್ ಮೈದಾನವನ್ನು ಸಮತಟ್ಟಾಗಿ ಮಾಡಲು ಹೆವಿ ರೋಲರ್ ಅನ್ನು ಸಹ ಬಳಸಲಾಗುತ್ತದೆ. ಇದು ಪಿಚ್‌ನಲ್ಲಿ ಬ್ಯಾಟಿಂಗ್ ಮಾಡಲು ಸುಲಭವಾಗುತ್ತದೆ" ಎಂದು ಬರೆದುಕೊಂಡಿದ್ದಾರೆ. ಈ ಹೇಳಿಕೆ ನೀಡಲು ಕಾರಣ ಏನು ಎಂಬುದು ತಿಳಿದುಬಂದಿಲ್ಲ.
ಎರಡನೇ ಇನ್ನಿಂಗ್ಸ್‌ನಲ್ಲಿ ಚೇತೇಶ್ವರ್ ಪೂಜಾರ ಮತ್ತು ರಿಷಭ್ ಪಂತ್ ಹೊರತುಪಡಿಸಿ ಭಾರತದ ಯಾವುದೇ ಬ್ಯಾಟ್ಸ್‌ಮನ್‌ಗಳು ಅಮೋಘ ಆಟ ಪ್ರದರ್ಶಿಸಲು ಸಾಧ್ಯವಾಗಲಿಲ್ಲ. ಪೂಜಾರ 66 ರನ್ ಗಳಿಸಿದರೆ, ರಿಷಭ್ ಪಂತ್ 57 ರನ್‌ಗಳ ಇನ್ನಿಂಗ್ಸ್ ಆಡಿದ್ದಾರೆ. ಭಾರತ ತಂಡ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ 245 ರನ್ ಗಳಿಸಿದ್ದು, ಇಂಗ್ಲೆಂಡ್‌ಗೆ ಗೆಲ್ಲಲು 378 ರನ್‌ಗಳ ಗುರಿಯನ್ನು ನೀಡಿತ್ತು. ಜೊತೆಗೆ ಇಂಗ್ಲೆಂಡ್ ಬೌಲರ್‌ಗಳು ಭಾರತದ ಬ್ಯಾಟ್ಸ್‌ಮನ್‌ಗಳಿಗೆ ಕಡಿವಾಣ ಹಾಕಿದ್ದರು.
ಇದನ್ನೂ ಓದಿ: ಕಡಿಮೆ ವಿದ್ಯುತ್ ಬಳಕೆಯೊಂದಿಗೆ ಎಸಿ ಅಂತಹ ಹವಾ ನೀಡುವ ಫ್ಯಾನ್
ಏಳು ವಿಕೆಟ್ ಪಡೆದರೆ ಭಾರತಕ್ಕೆ ಗೆಲುವು:
ಕಳೆದ ದಿನ ನಡೆದ ಪಂದ್ಯದಲ್ಲಿ ಇಂಡಿಯಾ ಬೌಲರ್‌ಗಳು ಹೆಚ್ಚಿನ ಸಾಧನೆ ಮಾಡಲು ಸಾಧ್ಯವಾಗಿಲ್ಲ. ವಿಕೆಟ್ ಪಡೆಯೋದಕ್ಕೆ ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ ಮತ್ತು ಶಾರ್ದೂಲ್ ಠಾಕೂರ್ ಪ್ರಯತ್ನಿಸುತ್ತಲೇ ಇದ್ದರು. ಆದರೆ ಇಂಗ್ಲೆಂಡ್ ಆರಂಭಿಕರಾದ ಜಾಕ್ ಕ್ರಾಲಿ ಮತ್ತು ಅಲೆಕ್ಸ್ ಲೀಸ್ ಸರಾಗವಾಗಿ ಬ್ಯಾಟಿಂಗ್ ಮಾಡಿದ್ದರಿಂದ ಒಂದೇ ಒಂದು ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ. ಕೊನೆಯ ದಿನದಾಟದಲ್ಲಿ ಇಂಗ್ಲೆಂಡ್ ಗೆಲುವಿಗೆ 119 ರನ್ ಅಗತ್ಯವಿದೆ. ಆದರೆ ಭಾರತ ತಂಡ ಏಳು ವಿಕೆಟ್‌ಗಳನ್ನೂ ಸಹ ಕಬಳಿಸಿದರೆ ಗೆಲ್ಲುವ ಸಾಧ್ಯತೆ ಇದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.