IND vs NZ Final: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಅಂತಿಮ ಪಂದ್ಯವು ಮಾರ್ಚ್ 9ರಂದು ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 4 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಟೀಂ ಇಂಡಿಯಾ ಮೊದಲ ತಂಡವಾಗಿ ಫೈನಲ್‌ಗೆ ಎಂಟ್ರಿ ಕೊಟ್ಟಿದೆ. ಅದೇ ರೀತಿ ಲಾಹೋರ್ ಮೈದಾನದಲ್ಲಿ ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 50 ರನ್‌ಗಳಿಂದ ಸೋಲಿಸುವ ಮೂಲಕ ನ್ಯೂಜಿಲೆಂಡ್ ತಂಡವು ಫೈನಲ್ ತಲುಪಿದೆ. ಈ ಬಾರಿ ಭಾರತ ತಂಡವು ಪ್ರಶಸ್ತಿ ಗೆಲ್ಲುವ ಫೆವರಿಟ್ ತಂಡವಾಗಿದ್ದು, ನ್ಯೂಜಿಲ್ಯಾಂಡ್ ಕೂಡ ಟೂರ್ನಿಯುದ್ದಕ್ಕೂ ಅತ್ಯುತ್ತಮ ಪ್ರದರ್ಶನ ನೀಡಿದೆ. ಐಸಿಸಿ ನಾಕೌಟ್ ಪಂದ್ಯಗಳಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾದ ದಾಖಲೆಯನ್ನು ನೋಡಿದರೆ, ಅದು ಉತ್ತಮವಾಗಿಲ್ಲ.
ಇದನ್ನೂ ಓದಿ: IND vs Aus : ಸೆಮಿಫೈನಲ್‌ನಲ್ಲಿ ಬ್ಯಾಟ್ ಮುಟ್ಟದೆ ದೊಡ್ಡ ದಾಖಲೆ ಸೃಷ್ಟಿಸಿದ ವಿರಾಟ್..!
ನಾಲ್ಕರಲ್ಲಿ ಮೂರು ಸೋಲು!
ಐಸಿಸಿ ಟೂರ್ನಮೆಂಟ್‌ನಲ್ಲಿ ಟೀಂ ಇಂಡಿಯಾ ಇದುವರೆಗೆ ನ್ಯೂಜಿಲೆಂಡ್ ವಿರುದ್ಧ ನಾಲ್ಕು ನಾಕೌಟ್ ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಕೇವಲ ಒಂದು ಪಂದ್ಯ ಗೆದ್ದು ಮೂರು ಪಂದ್ಯಗಳನ್ನು ಸೋತಿದೆ. 2000ದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಅಂತಿಮ ಪಂದ್ಯದಲ್ಲಿ ಎರಡೂ ತಂಡಗಳು ಮೊದಲ ಬಾರಿಗೆ ಐಸಿಸಿ ಟೂರ್ನಮೆಂಟ್‌ನ ನಾಕೌಟ್‌ಗಳಲ್ಲಿ ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಕಿವೀಸ್ ತಂಡ ಗೆದ್ದಿತು. ಇದರ ನಂತರ ೨೦೧೯ರ ಏಕದಿನ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿಯೂ ಕಿವೀಸ್ ತಂಡವೇ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ೨೦೨೧ರಲ್ಲಿ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವು ಭಾರತವನ್ನು ಮತ್ತೆ ಸೋಲಿಸಿತ್ತು. ಇದರ ನಂತರ 2023ರಲ್ಲಿ ನಡೆದ ODI ವಿಶ್ವಕಪ್‌ನ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ನ್ಯೂಜಿಲೆಂಡ್ ತಂಡವನ್ನು ಸೋಲಿಸಿತು, ಇದು ಐಸಿಸಿ ನಾಕೌಟ್ ಪಂದ್ಯಗಳಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಗೆಲುವು ಕೂಡ ಆಗಿತ್ತು.
ಇದನ್ನೂ ಓದಿ: ವಿರಾಟ್ ಕೊಹ್ಲಿ ಬ್ಯಾಟಿಂಗ್ ಮಾಡುವಾಗ ಪತ್ನಿ ಅನುಷ್ಕಾ ಪಬ್ಲಿಕ್ ನಲ್ಲಿ ಮಾಡಿದ್ದೇನು? ವಿಡಿಯೋ ವೈರಲ್!!
ಭಾರತ 5ನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಫೈನಲ್ ತಲುಪಿದೆ
ಚಾಂಪಿಯನ್ಸ್ ಟ್ರೋಫಿಯ ಇತಿಹಾಸದಲ್ಲಿ ಭಾರತ ತಂಡವು 5ನೇ ಬಾರಿಗೆ ಫೈನಲ್ ತಲುಪುವಲ್ಲಿ ಯಶಸ್ವಿಯಾಗಿದೆ. ಈ ಪೈಕಿ ಟೀಂ ಇಂಡಿಯಾ 2000ನೇ ಇಸವಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತಿತ್ತು. ಆದರೆ 2002ರಲ್ಲಿ ಟೀಮ್ ಇಂಡಿಯಾವು ಶ್ರೀಲಂಕಾ ಜೊತೆಗೆ ಜಂಟಿಯಾಗಿ ಪ್ರಶಸ್ತಿ ಗೆದ್ದುಕೊಂಡಿತ್ತು. 2013ರಲ್ಲಿ ಎಂ.ಎಸ್.ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾವು ಇಂಗ್ಲೆಂಡ್ ವಿರುದ್ಧದ ಅಂತಿಮ ಪಂದ್ಯವನ್ನು ಗೆಲ್ಲುವ ಮೂಲಕ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನು ಗೆದ್ದುಕೊಂಡಿತು. ೨೦೧೭ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡ ಚಾಂಪಿಯನ್ಸ್ ಟ್ರೋಫಿಯ ಫೈನಲ್ ತಲುಪಿತ್ತು. ಆದರೆ ಪಾಕಿಸ್ತಾನ ವಿರುದ್ಧ ಸೋಲು ಕಂಡು ನಿರಾಸೆ ಅನುಭವಿಸಿತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.









