IND vs NZ: ಫೈನಲ್‌ನಲ್ಲಿ ಕೊಹ್ಲಿ ರೊಚ್ಚಿಗೆದ್ರೆ ದಾಖಲೆಗಳ ಸುರಿಮಳೆ, ಸಚಿನ್‌ ನಂ.1 ಕಳೆದುಕೊಳ್ತಾರೆ..!

ICC Champions Trophy: ಟೀಂ ಇಂಡಿಯಾದ ಡ್ಯಾಶಿಂಗ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ನಾಳೆ ದುಬೈನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್‌ ವಿರುದ್ಧ ಹಲವು ದಾಖಲೆಗಳನ್ನು ನಿರ್ಮಿಸುವ ತವಕದಲ್ಲಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ ಅಬ್ಬರದ ಬ್ಯಾಟಿಂಗ್‌ ಪ್ರದರ್ಶಿಸಿದರೆ ದಾಖಲೆಗಳ ಸುರಿಮಳೆಯೇ ಆಗಲಿದೆ.  

Written by - Puttaraj K Alur | Last Updated : Mar 8, 2025, 03:14 PM IST
  • ನಾಳೆ ಭಾರತ vs ನ್ಯೂಜಿಲ್ಯಾಂಡ್‌ ನಡುವೆ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಪಂದ್ಯ ನಡೆಯಲಿದೆ
  • ಈ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಅಬ್ಬರದ ಬ್ಯಾಟಿಂಗ್‌ ಪ್ರದರ್ಶಿಸಿದರೆ ಹಲವು ದಾಖಲೆಗಳ ನಿರ್ಮಾಣ
  • ಕ್ರಿಸ್ ಗೇಲ್ ಮತ್ತು ಸಚಿನ್‌ ತೆಂಡೂಲ್ಕರ್‌ ದಾಖಲೆ ಬ್ರೇಕ್‌ ಮಾಡುತ್ತಾರಾ ರನ್‌ ಮಷಿನ್‌ ಕೊಹ್ಲಿ?
IND vs NZ: ಫೈನಲ್‌ನಲ್ಲಿ ಕೊಹ್ಲಿ ರೊಚ್ಚಿಗೆದ್ರೆ ದಾಖಲೆಗಳ ಸುರಿಮಳೆ, ಸಚಿನ್‌ ನಂ.1 ಕಳೆದುಕೊಳ್ತಾರೆ..!
ಕಿವೀಸ್‌ ವಿರುದ್ಧ ಅಬ್ಬರಿಸ್ತಾರಾ ಕೊಹ್ಲಿ?

IND vs NZ: ನಾಳೆ ಅಂದರೆ ಭಾನುವಾರ (ಮಾರ್ಚ್‌ 9) ಭಾರತ vs ನ್ಯೂಜಿಲ್ಯಾಂಡ್‌ ನಡುವೆ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಪಂದ್ಯ ನಡೆಯಲಿದೆ. ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಹೈವೋಲ್ಟೇಜ್‌ ಪಂದ್ಯವನ್ನ ವೀಕ್ಷಿಸಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ರೋಹಿತ್‌ ಶರ್ಮಾ ಪಡೆ ಮತ್ತೊಮ್ಮೆ ಚಾಂಪಿಯನ್ಸ್‌ ಟ್ರೋಫಿ ಎತ್ತಿಹಿಡಿಯುವ ಉತ್ಸಾಹದಲ್ಲಿದ್ದರೆ, ಲೀಗ್‌ ಪಂದ್ಯದಲ್ಲಿನ ಸೋಲಿಗೆ ಸೇಡು ತೀರಿಸಿಕೊಳ್ಳಲು ಕಿವೀಸ್‌ ಪಡೆ ಸಜ್ಜಾಗಿದೆ. ಈ ಮಹತ್ವದ ಪಂದ್ಯದಲ್ಲಿ ದಾಖಲೆಗಳ ಸುರಿಮಳೆಯೇ ಆಗುವ ನಿರೀಕ್ಷೆ ಇದೆ. 

Add Zee News as a Preferred Source

ಹೌದು, ಈ ಪಂದ್ಯದಲ್ಲಿ ರನ್‌ ಮಷಿನ್‌ ಖ್ಯಾತಿಯ ವಿರಾಟ್‌ ಕೊಹ್ಲಿ ಬ್ಯಾಟಿಂಗ್‌ ಮೂಲಕ ಅಬ್ಬರಿಸಿದರೆ ಹಲವಾರು ದಾಖಲೆಗಳು ಊಡೀಸ್‌ ಆಗಲಿವೆ. ಹೀಗಾಗಿಯೇ ಎಲ್ಲರ ಕಣ್ಣು ಈಗ ಕೊಹ್ಲಿ ಮೇಲೆ ನಟ್ಟಿವೆ. ಉತ್ತಮ ಫಾರ್ಮ್‌ಗೆ ಕಮ್‌ಬ್ಯಾಕ್‌ ಆಗಿರುವ ಕೊಹ್ಲಿ ನ್ಯೂಜಿಲ್ಯಾಂಡ್‌ ವಿರುದ್ಧವೂ ಸ್ಫೋಟಕ ಬ್ಯಾಟಿಂಗ್‌ ಮಾಡುವ ನಿರೀಕ್ಷೆ ಇದೆ. ಇದೇ ಕಾರಣಕ್ಕೆ 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಅತಿಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಕೊಹ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಇಲ್ಲಿಯವರೆಗೆ 4 ಪಂದ್ಯಗಳನ್ನು ಆಡಿರುವ ಅವರು 1 ಶತಕ ಮತ್ತು 1 ಅರ್ಧಶತಕದ ಸಹಾಯದಿಂದ 217 ರನ್ ಗಳಿಸಿದ್ದಾರೆ. ಕೊಹ್ಲಿ ಈಗ ಟೂರ್ನಿಯಲ್ಲಿ ಅತಿಹೆಚ್ಚು ರನ್ ಗಳಿಸಿದ ಅದ್ಭುತ ದಾಖಲೆಯತ್ತ ಗುರಿಯಿಟ್ಟಿದ್ದಾರೆ.

ಇದನ್ನೂ ಓದಿ: ಭಾರತ vs ನ್ಯೂಜಿಲೆಂಡ್ ನಡುವಿನ ಫೈನಲ್ ಪಂದ್ಯಕ್ಕೆ ಮಳೆ ಭೀತಿ ಇದ್ಯಾ? ಒಂದು ವೇಳೆ ಪಂದ್ಯ ರದ್ದಾದ್ರೆ ಮುಂದೇನು..?

ವಿರಾಟ್ ಕೊಹ್ಲಿ ಇತಿಹಾಸ ನಿರ್ಮಿಸುತ್ತಾರಾ?

ಒಂದು ವೇಳೆ ವಿರಾಟ್ ಕೊಹ್ಲಿ ಫೈನಲ್‌ನಲ್ಲಿ ದೊಡ್ಡ ಇನ್ನಿಂಗ್ಸ್ ಆಡಲು ಯಶಸ್ವಿಯಾದರೆ, ಚಾಂಪಿಯನ್ಸ್ ಟ್ರೋಫಿಯ ಇತಿಹಾಸದಲ್ಲಿ ಅತಿಹೆಚ್ಚು ರನ್ ಗಳಿಸಿದ ಆಟಗಾರನಾಗಲಿದ್ದಾರೆ. ಪ್ರಸ್ತುತ ಈ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಚಾಂಪಿಯನ್ಸ್ ಟ್ರೋಫಿಯ 17 ಪಂದ್ಯಗಳಲ್ಲಿ ಗೇಲ್ 791 ರನ್ ಗಳಿಸಿದ್ದರು. ಅದೇ ರೀತಿ ಕೊಹ್ಲಿ 17 ಪಂದ್ಯಗಳ 16 ಇನ್ನಿಂಗ್ಸ್‌ಗಳಲ್ಲಿ 746 ರನ್ ಗಳಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಪ್ರಶಸ್ತಿ ಪಂದ್ಯದಲ್ಲಿ ಕೇವಲ 46 ರನ್ ಗಳಿಸಿದ ತಕ್ಷಣವೇ ಕೊಹ್ಲಿ, ಗೇಲ್‌ ದಾಖಲೆಯನ್ನು ಬ್ರೇಕ್‌ ಮಾಡಲಿದ್ದಾರೆ.   

ಸಚಿನ್ ತೆಂಡೂಲ್ಕರ್‌ ದಾಖಲೆಯ ಮೇಲೆ ಕಣ್ಣು!

ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿ ಸಚಿನ್ ತೆಂಡೂಲ್ಕರ್ ಅವರ ದೊಡ್ಡ ದಾಖಲೆಯನ್ನು ಮುರಿಯುವ ಗುರಿಯನ್ನು ವಿರಾಟ್ ಕೊಹ್ಲಿ ಹೊಂದಿದ್ದಾರೆ. ಒಂದು ವೇಳೆ ಈ ಪಂದ್ಯದಲ್ಲಿ ಕೊಹ್ಲಿ 128 ರನ್ ಗಳಿಸುವಲ್ಲಿ ಯಶಸ್ವಿಯಾದರೆ, ಐಸಿಸಿ ಏಕದಿನ ಟೂರ್ನಿಗಳ ನಾಕೌಟ್ ಪಂದ್ಯಗಳಲ್ಲಿ ಅತಿಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದು, ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಲಿದ್ದಾರೆ. ಪ್ರಸ್ತುತ ಐಸಿಸಿ ಏಕದಿನ ಟೂರ್ನಿಗಳ ನಾಕೌಟ್ ಪಂದ್ಯಗಳಲ್ಲಿ ಭಾರತದ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ. ಮಾಸ್ಟರ್ ಬ್ಲಾಸ್ಟರ್ 657 ರನ್ ಗಳಿಸಿದ್ದರೆ, ವಿರಾಟ್ ಕೊಹ್ಲಿ 530 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ: ಕ್ರಿಕೆಟಿಗ ಶುಭ್‌ಮನ್ ಗಿಲ್ ಮೇಲಿನ ಪ್ರೀತಿಗೆ ʼಈʼ ಸುಂದರ ನಟಿ ಕ್ರೀಡಾಂಗಣಕ್ಕೆ ಹೋಗುತ್ತಾರೆ?!

ಐಸಿಸಿ ಏಕದಿನ ಟೂರ್ನಿಗಳ ನಾಕೌಟ್ ಪಂದ್ಯಗಳಲ್ಲಿ ಅತಿಹೆಚ್ಚು ರನ್‌ಗಳು

* ರಿಕಿ ಪಾಂಟಿಂಗ್ - 731 ರನ್‌ಗಳು
* ಸಚಿನ್ ತೆಂಡೂಲ್ಕರ್ - 657 ರನ್‌ಗಳು
* ವಿರಾಟ್ ಕೊಹ್ಲಿ - 530 ರನ್‌ಗಳು
* ಸೌರವ್ ಗಂಗೂಲಿ - 514 ರನ್‌ಗಳು

ಐಸಿಸಿ ಏಕದಿನ ನಾಕೌಟ್‌ಗಳಲ್ಲಿ ಸಚಿನ್ ಐವತ್ತಕ್ಕೂ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಹೊಂದಿದ್ದಾರೆ, ಅಂದರೆ 6 ಬಾರಿ, ಆದರೆ ಕೊಹ್ಲಿ 5 ಬಾರಿ ರನ್ ಗಳಿಸಿದ್ದಾರೆ ಎಂಬುದು ಗಮನಾರ್ಹ. ಒಂದು ವೇಳೆ ಈ ಪಂದ್ಯದಲ್ಲಿ ಕೊಹ್ಲಿ ಅರ್ಧಶತಕ ಗಳಿಸಿದರೆ, ಅವರು ಸಚಿನ್ ತೆಂಡೂಲ್ಕರ್ ಅವರ ಈ ಶ್ರೇಷ್ಠ ದಾಖಲೆಯನ್ನು ಸರಿಗಟ್ಟುತ್ತಾರೆ. ಅಲ್ಲದೇ ಆಸ್ಟ್ರೇಲಿಯಾದ ದಂತಕಥೆ ಸ್ಟೀವ್ ಸ್ಮಿತ್ (5 ಬಾರಿ 50+ ಸ್ಕೋರ್) ಅವರ ದಾಖಲೆಯನ್ನ ಬ್ರೇಕ್‌ ಮಾಡಲಿದ್ದಾರೆ.   

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

About the Author

Puttaraj K Alur

ಪುಟ್ಟರಾಜ ಕೆ ಆಲೂರ ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser) ನ್ಯೂಸ್‌, ಒಪೊಯಿ‌ (Opoyi) ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. ...Read More

Trending News