Ind vs Pak : ಟೀಂ ಇಂಡಿಯಾ palying 11ನಲ್ಲಿ 3 ಪ್ರಮುಖ ಬದಲಾವಣೆಗಳು!

ಪಾಕಿಸ್ತಾನ ವಿರುದ್ಧದ ಈ ಅಮೋಘ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬಲಿಷ್ಠ ತಂಡವನ್ನು ಕಣಕ್ಕಿಳಿಸಿದ್ದಾರೆ. ಹಾಗೆ, ಪ್ಲೇಯಿಂಗ್ 11 ನಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ.

Written by - Channabasava A Kashinakunti | Last Updated : Sep 4, 2022, 07:41 PM IST
  • ಟೀಂ ಇಂಡಿಯಾ ಮತ್ತು ಪಾಕಿಸ್ತಾನದ ನಡುವೆ ದುಬೈನಲ್ಲಿ ಪಂದ್ಯ
  • ಈ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್
  • ಈ ಬೌಲರ್‌ಗಳಿಗೆ ಅವಕಾಶ ನೀಡಿದ ರೋಹಿತ್
Ind vs Pak : ಟೀಂ ಇಂಡಿಯಾ palying 11ನಲ್ಲಿ 3 ಪ್ರಮುಖ ಬದಲಾವಣೆಗಳು! title=

Ind vs Pak Asia Cup 2022 : ಏಷ್ಯಾ ಕಪ್ 2022 ನಲ್ಲಿ ಟೀಂ ಇಂಡಿಯಾ ಮತ್ತು ಪಾಕಿಸ್ತಾನದ ನಡುವೆ ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯ ನಡೆಯುತ್ತಿದೆ. ಈ ಟೂರ್ನಿಯಲ್ಲಿ ಉಭಯ ತಂಡಗಳ ನಡುವಿನ ಎರಡನೇ ಪಂದ್ಯ ಇದಾಗಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ. ಪಾಕಿಸ್ತಾನ ವಿರುದ್ಧದ ಈ ಅಮೋಘ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬಲಿಷ್ಠ ತಂಡವನ್ನು ಕಣಕ್ಕಿಳಿಸಿದ್ದಾರೆ. ಹಾಗೆ, ಪ್ಲೇಯಿಂಗ್ 11 ನಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ.

ಟೀಂ ಇಂಡಿಯಾದ ಬಲಿಷ್ಠ ಆಟಗಾರರು ಅಗ್ರ ಕ್ರಮಾಂಕ

ಕೆಎಲ್ ರಾಹುಲ್ ಅವರು ರೋಹಿತ್ ಶರ್ಮಾ ಅವರೊಂದಿಗೆ ಪಾಕ್ ವಿರುದ್ಧ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಈ ಪಂದ್ಯದಲ್ಲಿ ಕೆಎಲ್ ರಾಹುಲ್ ಫಾರ್ಮ್‌ಗೆ ಮರಳಲು ಬಯಸಿದ್ದಾರೆ. ಹಾಗೆ, ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಏಷ್ಯಾಕಪ್ 2022 ರಲ್ಲಿ ವಿರಾಟ್ ಕೊಹ್ಲಿ ಅವರ ಪ್ರದರ್ಶನ ಇಲ್ಲಿಯವರೆಗೆ ಉತ್ತಮವಾಗಿದೆ. ಅಲ್ಲದೆ, ಸೂರ್ಯಕುಮಾರ್ ಯಾದವ್ ನಾಲ್ಕನೇ ಕ್ರಮಾಂಕದಲ್ಲಿ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ : T20 World Cup 2022 : ಜಡೇಜಾ ಸ್ಥಾನಕ್ಕೆ ಈ ಆಟಗಾರನಿಗೆ ಚಾನ್ಸ್, ಮೊದಲ ಬಾರಿಗೆ ಟಿ20 ವಿಶ್ವಕಪ್​ಗೆ ಎಂಟ್ರಿ!

ಮಧ್ಯಮ ಕ್ರಮಾಂಕದಲ್ಲಿ ಈ ಆಟಗಾರರು

ಟೀಂ ಇಂಡಿಯಾದ ಪ್ಲೇಯಿಂಗ್ XI ನ ಮಧ್ಯಮ ಕ್ರಮಾಂಕವು ಈ ಬಾರಿಯೂ ತುಂಬಾ ಪ್ರಬಲವಾಗಿದೆ. ಪಾಕ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ರೋಹಿತ್ ಶರ್ಮಾ ಮಧ್ಯಮ ಕ್ರಮಾಂಕದ ಜವಾಬ್ದಾರಿಯನ್ನು ರಿಷಬ್ ಪಂತ್ ಮತ್ತು ಹಾರ್ದಿಕ್ ಪಾಂಡ್ಯ ಅವರಿಗೆ ನೀಡಿದ್ದಾರೆ. ಹಾಗೆ, ದೀಪಕ್ ಹೂಡಾ ಅವರಂತಹ ಆಲ್ ರೌಂಡರ್ ಫಿನಿಶರ್ ಪಾತ್ರದಲ್ಲಿ ಕಾಣಬಹುದು.

ಈ ಬೌಲರ್‌ಗಳಿಗೆ ಅವಕಾಶ ನೀಡಿದ ರೋಹಿತ್ 

ರೋಹಿತ್ ಈ ಪಂದ್ಯದಲ್ಲಿ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಜೊತೆಗೆ ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್ ಮತ್ತು ರವಿ ಬಿಷ್ಣೋಯ್ ಅವರನ್ನು ಪ್ಲೇಯಿಂಗ್ 11 ರಲ್ಲಿ ಸೇರಿಸಿದ್ದಾರೆ. ಉಭಯ ತಂಡಗಳ ನಡುವೆ ನಡೆದ ಮೊದಲ ಪಂದ್ಯದಲ್ಲಿ ಭಾರತದ ಬೌಲರ್‌ಗಳು ಮೇಲುಗೈ ಸಾಧಿಸಿದ್ದರು. ಪಾಕಿಸ್ತಾನದ ಇಡೀ ತಂಡಕ್ಕೆ 20 ಓವರ್‌ಗಳಲ್ಲಿ ಬ್ಯಾಟಿಂಗ್ ಮಾಡಲು ಸಾಧ್ಯವಾಗಲಿಲ್ಲ.

ಟೀಂ ಇಂಡಿಯಾ ಪ್ಲೇಯಿಂಗ್ 11 ಹೀಗಿದೆ

ರೋಹಿತ್ ಶರ್ಮಾ(ಕ್ಯಾ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ದೀಪಕ್ ಹೂಡಾ, ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಾಹಲ್ ಮತ್ತು ಅರ್ಷದೀಪ್ ಸಿಂಗ್.

ಇದನ್ನೂ ಓದಿ : Video : ಈ 4 ಅಕ್ಷರ ಪದ ಹೇಳಲು ನಾಚಿನೀರಾದ ರಾಹುಲ್ ದ್ರಾವಿಡ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News