ನವದೆಹಲಿ: ಏಷ್ಯಾಕಪ್‌ನಲ್ಲಿ ಟೀಂ ಇಂಡಿಯಾ ಉತ್ತಮ ಫಾರ್ಮ್‌ನಲ್ಲಿ ಸಾಗುತ್ತಿದೆ. ಮೊದಲ ಪಂದ್ಯದಲ್ಲಿ ಭಾರತ 5 ವಿಕೆಟ್‌ಗಳಿಂದ ಪಾಕಿಸ್ತಾನದ ವಿರುದ್ಧ ಭರ್ಜರಿ ಜಯ ಸಾಧಿಸಿತು. ಅದೇ ರೀತಿ 2ನೇ ಪಂದ್ಯದಲ್ಲಿ ಹಾಂಗ್ ಕಾಂಗ್ ತಂಡವನ್ನು 40 ರನ್‌ಗಳಿಂದ ಸೋಲಿಸಿತು. ಈ ಪಂದ್ಯದ ಬಳಿಕ ಭಾರತ ಸೂಪರ್-4ಗೆ ಅರ್ಹತೆ ಪಡೆದುಕೊಂಡಿದೆ. ಇಂದು ಸಂಜೆ ಪಾಕಿಸ್ತಾನ ಮತ್ತು ಹಾಂಗ್ ಕಾಂಗ್ ನಡುವೆ ಗ್ರೂಪ್ ಹಂತದ ಕೊನೆಯ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸಿದವರು 4ನೇ ತಂಡವಾಗಿ ಸೂಪರ್-4ಗೆ ಪ್ರವೇಶ ಪಡೆಯಲಿದ್ದಾರೆ.


COMMERCIAL BREAK
SCROLL TO CONTINUE READING

ಹಾಂಗ್ ಕಾಂಗ್ ವಿರುದ್ಧ ಪಾಕಿಸ್ತಾನ ಗೆಲುವು ಸಾಧಿಸುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ಸೆಪ್ಟೆಂಬರ್ 4ರ ಭಾನುವಾರ ಭಾರತ ಮತ್ತು ಪಾಕಿಸ್ತಾನ ಮತ್ತೆ ಮುಖಾಮುಖಿಯಾಗುವ ಸಾಧ್ಯತೆ ಇದೆ. ಅದೇ ರೀತಿ ಯಾವ ಏಷ್ಯಾಕಪ್‍ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳೇ ಫೈನಲ್‍ಗೆ ಅರ್ಹತೆ ಪಡೆಯಲಿದ್ದು, ಟ್ರೋಫಿಗಾಗಿ ಸೆಣಸಾಟ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ: Yuzvendra Chahal-Dhanashree : ಧನಶ್ರೀ, ಯುಜ್ವೇಂದ್ರ ಚಹಾಲ್ ದಾಂಪತ್ಯದಲ್ಲಿ ಬಿರುಕು..!


ಹಾಂಗ್ ಕಾಂಗ್ ಮತ್ತು ಪಾಕಿಸ್ತಾನ ಸೆಣಸಾಟ  


ಭಾರತದ ವಿರುದ್ಧ ಸೋತಿರುವ ಪಾಕಿಸ್ತಾನ ತಂಡ ಇಂದು (ಸೆ.2) ದುರ್ಬಲ ಹಾಂಗ್ ಕಾಂಗ್ ವಿರುದ್ಧ ಆಡಲಿದೆ. ಈ ಪಂದ್ಯವನ್ನು ಗೆದ್ದರೆ ಪಾಕಿಸ್ತಾನ ತಂಡವು ಗ್ರೂಪ್ ಹಂತದಿಂದ ಸೂಪರ್-4ಗೆ ಅರ್ಹತೆ ಪಡೆಯುತ್ತದೆ. ಅಂದುಕೊಂಡಂತೆ ಆದರೆ ಸೆಪ್ಟೆಂಬರ್ 4ರಂದು ಅಭಿಮಾನಿಗಳಿಗೆ ಭಾರತ ಮತ್ತು ಪಾಕಿಸ್ತಾನ ನಡುವಿನ ಮತ್ತೊಂದು ಶ್ರೇಷ್ಠ ಪಂದ್ಯವನ್ನು ವೀಕ್ಷಿಸುವ ಅವಕಾಶ ಸಿಗಲಿದೆ.  


ಸೂಪರ್-4ಗೆ ಅರ್ಹತೆ ಪಡೆದಿರುವ ತಂಡಗಳು


ಈಗಾಗಲೇ ಭಾರತ, ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ಸೂಪರ್-4ಗೆ ಅರ್ಹತೆ ಪಡೆದಿವೆ. ಹಾಂಗ್ ಕಾಂಗ್ ಸೋಲಿಸುವ ಮೂಲಕ ಪಾಕಿಸ್ತಾನವು ಸೂಪರ್-4ಗೆ ಅರ್ಹತೆ ಪಡೆಯುವ ಸಾಧ್ಯತೆ ಇದೆ. ಸೂಪರ್ 4ರಲ್ಲಿ ಎಲ್ಲಾ ತಂಡಗಳು ತಲಾ 3 ಪಂದ್ಯಗಳನ್ನು ಆಡುತ್ತವೆ. ಇದರಲ್ಲಿ 2 ತಂಡಗಳು ಫೈನಲ್‌ಗೆ ಪ್ರವೇಶಿಸುತ್ತವೆ. ಏಷ್ಯಾ ಕಪ್ 2022ರ ಅಂತಿಮ ಅಂದರೆ ಫೈನಲ್ ಪಂದ್ಯ ಸೆಪ್ಟೆಂಬರ್ 11ರಂದು ನಡೆಯಲಿದೆ. ಅಂದು ಭಾರತ ಮತ್ತು ಪಾಕಿಸ್ತಾನ ತಂಡಗಳು 3ನೇ ಬಾರಿಗೆ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.  


ಇದನ್ನೂ ಓದಿ: Team India : ರೋಹಿತ್‌ನಂತೆ ಈ ಸ್ಫೋಟಕ ಬ್ಯಾಟ್ಸಮನ್ ಗೆ ಓಪನರ್ ಆಗಿ ಚಾನ್ಸ್..!


 ಭಾರತ 7 ಬಾರಿ ಏಷ್ಯಾಕಪ್ ಗೆದ್ದಿದೆ


ಏಷ್ಯಾಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಅಂತಿಮ ಪಂದ್ಯ ಇನ್ನಷ್ಟೇ ನಡೆಯಬೇಕಿದೆ. ಏಷ್ಯಾಕಪ್‌ನಲ್ಲಿ ಭಾರತ ತಂಡ ಯಾವಾಗಲೂ ಪಾಕಿಸ್ತಾನ ತಂಡಕ್ಕಿಂತ ಮೇಲುಗೈ ಸಾಧಿಸಿದೆ. ಏಷ್ಯಾಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ 15 ಪಂದ್ಯಗಳು ನಡೆದಿದ್ದು, ಇದರಲ್ಲಿ ಭಾರತ 9 ಪಂದ್ಯಗಳನ್ನು ಗೆದ್ದಿದೆ ಮತ್ತು ಪಾಕಿಸ್ತಾನ ಕೇವಲ 5 ಪಂದ್ಯಗಳನ್ನು ಗೆದ್ದಿದೆ. ಅದೇ ರೀತಿ ಭಾರತವು ಏಷ್ಯಾಕಪ್ ಪ್ರಶಸ್ತಿಯನ್ನು ಅತಿಹೆಚ್ಚು ಬಾರಿ ಅಂದರೆ 7 ಬಾರಿ ಗೆದ್ದಿದೆ. ಪಾಕಿಸ್ತಾನಕ್ಕೆ ಕೇವಲ 2 ಬಾರಿ ಮಾತ್ರ ಏಷ್ಯಾಕಪ್ ಗೆಲ್ಲಲು ಸಾಧ್ಯವಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.