ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ನಿರ್ಣಾಯಕ ಐದನೇ ಮತ್ತು ಅಂತಿಮ ಪಂದ್ಯ ಮಳೆಯಿಂದಾಗಿ ರದ್ದಾದ ನಂತರ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು 2-2 ರ ಸಮಬಲದೊಂದಿಗೆ ಟ್ವೆಂಟಿ-20 ಸರಣಿಯನ್ನು ಹಂಚಿಕೊಂಡಿವೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಪ್ರಾರಂಭವಾಗುತ್ತಿದ್ದಂತೆಯೇ ಮಳೆಯಿಂದಾಗಿ ಆಟಗಾರರು ಮೈದಾನದಿಂದ ಹೊರಗುಳಿಯಬೇಕಾಯಿತು ಮತ್ತು ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಲುಂಗಿ ಎನ್‌ಗಿಡಿ ಭಾರತ ತಂಡದ ಮೊತ್ತ 28 ಆಗುವಷ್ಟರಲ್ಲಿ ಇಬ್ಬರು ಬ್ಯಾಟ್ಸಮನ್ ಗಳನ್ನು ಔಟ್ ಮಾಡುವ ಮೂಲಕ ತಂಡಕ್ಕೆ ಆಘಾತ ನೀಡಿದ್ದರು.ಆದರೆ ನಂತರ 3.3 ಓವರ್‌ಗಳಾಗಿದ್ದಾಗ ಮತ್ತೆ ಸುರಿಯಲಾರಂಭಿಸಿದ್ದರಿಂದಾಗಿ ಹೆಚ್ಚಿನ ಆಟವನ್ನು ಆಡಲು ಸಾಧ್ಯವಾಗಲಿಲ್ಲ.ಹೀಗಾಗಿ ಅನಿವಾರ್ಯವಾಗಿ ಪಂದ್ಯವನ್ನು ರದ್ದುಗೊಳಿಸಲಾಯಿತು.
ಭಾರತದ ಪರವಾಗಿ ಇಶಾನ್ ಕಿಶನ್ 15 ರನ್ ಗಳನ್ನು ಗಳಿಸಿದ್ದರೆ, ಋತುರಾಜ್ ಗಾಯಕ್ವಾಡ್ 10 ಗಳಿಸಿದರು.
ಭಾರತ ತಂಡ: ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಅವೇಶ್ ಖಾನ
🚨 Update 🚨
Play has heen officially called off.
The fifth & final @Paytm #INDvSA T20I has been abandoned due to rain. #TeamIndia pic.twitter.com/tQWmfaK3SV
— BCCI (@BCCI) June 19, 2022
ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಡೇವಿಡ್ ಮಿಲ್ಲರ್, ಹೆನ್ರಿಕ್ ಕ್ಲಾಸೆನ್, ಟ್ರಿಸ್ಟಾನ್ ಸ್ಟಬ್ಸ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡ, ಕೇಶವ್ ಮಹಾರಾಜ್(ನಾಯಕ), ಲುಂಗಿ ಎನ್‌ಗಿಡಿ, ಆನ್ರಿಚ್ ನಾರ್ಟ್ಜೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.