IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಈ ಮೂವರು ಆಟಗಾರರಿಗೆ ತಂಡದಲ್ಲಿ ಅವಕಾಶ

ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ T20 ಸರಣಿಯ ಮೊದಲ ಪಂದ್ಯ ಇಂದು ಸಂಜೆ ತಿರುವನಂತಪುರಂನಲ್ಲಿರುವ ಗ್ರೀನ್‌ಫೀಲ್ಡ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಆತಿಥೇಯ ತಂಡದಲ್ಲಿ ಮೂವರು ಆಟಗಾರರನ್ನು ಸೇರಿಸಿಕೊಳ್ಳಲಾಗಿದೆ.

Written by - Puttaraj K Alur | Last Updated : Sep 28, 2022, 03:31 PM IST
  • ಆಲ್ ರೌಂಡರ್ ದೀಪಕ್ ಹೂಡಾ ಬೆನ್ನುನೋವಿನಿಂದ ತಂಡದಿಂದ ಹೊರಗುಳಿದಿದ್ದಾರೆ
  • ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ವೇಗಿ ಭುವನೇಶ್ವರ್ ಕುಮಾರ್ ಸಹ ಆಡುತ್ತಿಲ್ಲ
  • ಉಮೇಶ್ ಯಾದವ್, ಶಹಬಾಜ್ ಅಹ್ಮದ್ ಮತ್ತು ಶ್ರೇಯಸ್ ಅಯ್ಯರ್‍ಗೆ ತಂಡದಲ್ಲಿ ಸ್ಥಾನ
IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಈ ಮೂವರು ಆಟಗಾರರಿಗೆ ತಂಡದಲ್ಲಿ ಅವಕಾಶ title=
ಮೂವರಿಗೆ ಟೀಂ ಇಂಡಿಯಾದಲ್ಲಿ ಅವಕಾಶ

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿ ಆರಂಭಕ್ಕೂ ಮುನ್ನವೇ ಭಾರತ ಕ್ರಿಕೆಟ್ ತಂಡ ಭಾರೀ ಹಿನ್ನಡೆ ಅನುಭವಿಸಿದೆ. ಆಲ್ ರೌಂಡರ್ ದೀಪಕ್ ಹೂಡಾ ಬೆನ್ನುನೋವಿನಿಂದ ತಂಡದಿಂದ ಹೊರಗುಳಿದಿದ್ದಾರೆ. ಅವರು ಪ್ರಸ್ತುತ ಬೆಂಗಳೂರಿನ ಎನ್‌ಸಿಎನಲ್ಲಿದ್ದಾರೆ. ಇವರಿಗಿಂತ ಮೊದಲೇ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ವೇಗಿ ಭುವನೇಶ್ವರ್ ಕುಮಾರ್ ಸಹ ಎನ್‌ಸಿಎಗೆ ತಲುಪಿದ್ದರು.

ಗಾಯಗೊಂಡ ದೀಪಕ್ ಹೂಡಾ

ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಟಿ-20 ಸರಣಿ ಇಂದು(ಸೆ.28) ಸಂಜೆಯಿಂದ ಆರಂಭವಾಗಲಿದೆ. ಸರಣಿಯ ಮೊದಲ ಪಂದ್ಯ ಕೇರಳ ರಾಜಧಾನಿ ತಿರುವನಂತಪುರಂನಲ್ಲಿರುವ ಗ್ರೀನ್ ಫೀಲ್ಡ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಬೆನ್ನುನೋವಿನಿಂದಾಗಿ ದೀಪಕ್ ಹೂಡಾ ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು ಮಿಸ್ ಮಾಡಿಕೊಂಡಿದ್ದರು. ಇವರಲ್ಲದೆ ಹಾರ್ದಿಕ್ ಪಾಂಡ್ಯ ಮತ್ತು ಭುವನೇಶ್ವರ್ ಕುಮಾರ್ ಕೂಡ ಕಂಡೀಷನಿಂಗ್‍ಗೆ ಸಂಬಂಧಿಸಿದ ಕೆಲಸಕ್ಕಾಗಿ ಎನ್‍ಸಿಎಗೆ ವರದಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: IND vs SA: ಹಿಂದೆಂದೂ ಮಾಡಿರದ ಸಾಧನೆ ಮಾಡುತ್ತಾ ಟೀಂ ಇಂಡಿಯಾ! ಏನದು ಗೊತ್ತಾ ಶ್ರೇಷ್ಠ ದಾಖಲೆ?

ತಂಡದಲ್ಲಿ ಉಮೇಶ್ ಯಾದವ್ & ಶಹಬಾಜ್

ಅನುಭವಿ ವೇಗಿ ಮೊಹಮ್ಮದ್ ಶಮಿ ಕೋವಿಡ್-19 ಸೋಂಕಿಗೆ ಒಳಗಾಗಿರುವ ಕಾರಣ ತಂಡದಿಂದ ಹೊರಗುಳಿದಿದ್ದಾರೆ. ಕಳೆದ ವರ್ಷ ಯುಎಇಯಲ್ಲಿ ನಡೆದ ಟಿ-20 ವಿಶ್ವಕಪ್‌ನಲ್ಲಿ ಅವರು ತಮ್ಮ ಕೊನೆಯ ಟಿ-20 ಅಂತಾರಾಷ್ಟ್ರೀಯ ಪಂದ್ಯ ಆಡಿದ್ದರು. ಬಿಸಿಸಿಐನ ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿಯು ಶಮಿ ಬದಲಿಗೆ ಉಮೇಶ್ ಯಾದವ್ ಮತ್ತು ದೀಪಕ್ ಹೂಡಾ ಬದಲಿಗೆ ಶ್ರೇಯಸ್ ಅಯ್ಯರ್ ಅವರನ್ನು ತಂಡಕ್ಕೆ ಸೇರಿಸಿದೆ. ಶಹಬಾಜ್ ಅಹ್ಮದ್ ಕೂಡ ಟಿ-20 ಸರಣಿಗೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ತಂಡದಲ್ಲಿ ಶ್ರೇಯಸ್ ಅಯ್ಯರ್  

ಶ್ರೇಯಸ್ ಅಯ್ಯರ್‍ಗೆ ತಂಡ ಸೇರಿಕೊಂಡಿದ್ದಾರೆ. ಯುವ ವೇಗಿ ಅರ್ಷದೀಪ್ ಸಿಂಗ್ ಕೂಡ ತಂಡದಲ್ಲಿದ್ದಾರೆ. ವೇಗದ ಬೌಲರ್ ಮೊಹಮ್ಮದ್ ಶಮಿ ಕೋವಿಡ್ -19 ನಿಂದ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ 3 ಪಂದ್ಯಗಳ ಟಿ-20 ಸರಣಿಯಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ.

ಇದನ್ನೂ ಓದಿ: ಪಾಕಿಸ್ತಾನ ತಂಡಕ್ಕೆ ಹಾರ್ದಿಕ್ ಪಾಂಡ್ಯರಂತಹ ಫಿನಿಶರ್ ಕೊರತೆಯಿದೆ: ಶಾಹಿದ್ ಆಫ್ರಿದಿ

ದಕ್ಷಿಣ ಆಫ್ರಿಕಾ ಟಿ-20 ಸರಣಿಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಕೆ.ಎಲ್.ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಆರ್.ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಷ್‌ದೀಪ್ ಸಿಂಗ್, ಹರ್ಷಲ್ ಪಟೇಲ್, ದೀಪಕ್ ಚಹಾರ್ ಜಸ್ಪ್ರೀತ್ ಬುಮ್ರಾ, ಉಮೇಶ್ ಯಾದವ್, ಶ್ರೇಯಸ್ ಅಯ್ಯರ್ ಮತ್ತು ಶಹಬಾಜ್ ಅಹ್ಮದ್.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News