ನವದೆಹಲಿ : ಭಾರತ-ದಕ್ಷಿಣ ಆಫ್ರಿಕಾ (India vs South Africa) ನಡುವಿನ ಜೋಹಾನ್ಸ್ ಬರ್ಗ್ (Johannesburg Test) ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಗೆ (Team India) ಭಾರಿ ಆಘಾತ ಎದುರಾಗಿದೆ. ವಿರಾಟ್ ಕೊಹ್ಲಿ (Virat Kohli) ಈ ಟೆಸ್ಟ್ ಆಡುತ್ತಿಲ್ಲ. ಕೊಹ್ಲಿ ಬದಲಿಗೆ ಕೆಎಲ್ ರಾಹುಲ್  (KL Rahul) ತಂಡದ ನಾಯಕಣ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ. ಈ ಮೂಲಕ ಭಾರತ ಟೆಸ್ಟ್ ಪದ್ಯದ ನಾಯಕತ್ವ ವಹಿಸುತ್ತಿರುವ 34 ನೇ ಆಟಗಾರ ಕೆ ಎಲ್ ರಾಹುಲ್ ಆಗಲಿದ್ದಾರೆ. 


COMMERCIAL BREAK
SCROLL TO CONTINUE READING

ಕೆಎಲ್ ರಾಹುಲ್ ಹೆಗಲಿಗೆ ಜವಾಬ್ದಾರಿ :
ರೋಹಿತ್ ಶರ್ಮಾ  (Rohit Sharma) ಅನುಪಸ್ಥಿತಿಯಲ್ಲಿ, ಕೆಎಲ್ ರಾಹುಲ್ ಅವರನ್ನು ಇತ್ತೀಚೆಗೆ ಟೀಮ್ ಇಂಡಿಯಾದ ಟೆಸ್ಟ್ ಉಪನಾಯಕರನ್ನಾಗಿ ಮಾಡಲಾಯಿತು. ಈಗ ವಿರಾಟ್ ಕೊಹ್ಲಿ (Virat Kohli) ಗಾಯಗೊಂಡಿರುವ ಹಿನ್ನೆಲೆಯಲ್ಲಿ ರಾಹುಲ್‌ಗೆ ಈ ಜವಾಬ್ದಾರಿ ಕೆ.ಎಲ್ ರಾಹುಲ್ ಹೆಗಲೇರಿದೆ. 


ಇದನ್ನೂ ಓದಿ : ಟೀಂ ಇಂಡಿಯಾದ ಈ ಆಟಗಾರನಿಗೆ ಭಾರೀ ಅನ್ಯಾಯ, ಒಂದೇ ಸರಣಿಯ ಮೂಲಕ ತಂಡದಿಂದಲೇ ಕೈ ಬಿಟ್ಟ ಆಯ್ಕೆ ಮಂಡಳಿ


 ಟಾಸ್ ಗೆದ್ದ ಕೆಎಲ್ ರಾಹುಲ್ :
ಚೊಚ್ಚಲ ಬಾರಿಗೆ ಭಾರತ ಟೆಸ್ಟ್ ತಂಡವನ್ನು ಮುನ್ನಡೆಸುತ್ತಿರುವ ಕೆಎಲ್ ರಾಹುಲ್ (KL Rahul), ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
 
ಹನುಮ ವಿಹಾರಿಗೆ ಅವಕಾಶ ಸಿಕ್ಕಿದೆ :
ವಿರಾಟ್ ಕೊಹ್ಲಿ ಬದಲಿಗೆ ಹನುಮ ವಿಹಾರಿ  (Hanuma Vihari)  ಪ್ಲೇಯಿಂಗ್ 11 ನಲ್ಲಿ ಸ್ಥಾನ ಪಡೆದಿದ್ದಾರೆ. ಸೆಂಚುರಿಯನ್‌ನಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಗೆದ್ದಿದ್ದ ಭಾರತ ತಂಡದಲ್ಲಿ ಮಾಡಿರುವ ಏಕೈಕ ಬದಲಾವಣೆ ಇದಾಗಿದೆ. 'ಕೊಹ್ಲಿ ಬೆನ್ನಿನಲ್ಲಿ ನೋವು ಕಾಣಿಸಿಕೊಂಡಿದ್ದು, ಮುಂದಿನ ಪಂದ್ಯದ ವೇಳೆಗೆ ಅವರು ಗುಣಮುಖರಾಗುವ ನಿರೀಕ್ಷೆ ಇದೆ ಎಂದು ಟಾಸ್ ವೇಳೆ ರಾಹುಲ್ (KL Rahul) , ಹೇಳಿದ್ದಾರೆ.  


ದಕ್ಷಿಣ ಆಫ್ರಿಕಾ ತಂಡದಲ್ಲಿ 2 ಬದಲಾವಣೆ :
ದಕ್ಷಿಣ ಆಫ್ರಿಕಾ ತಂಡದಲ್ಲಿ ಎರಡು ಬದಲಾವಣೆ ಮಾಡಿದೆ. ಮಗುವಾದ ಕಾರಣ ರಜೆಯಲ್ಲಿ ತೆರಳಿರುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕ್ವಿಂಟನ್ ಡಿ ಕಾಕ್ (Quinton de Kock) ಬದಲಿಗೆ ಕೈಲ್ ವೆರ್ರೆನ್ (Kyle Verreynne) ಮತ್ತು ವಿಯಾನ್ ಮುಲ್ಡರ್ ಬದಲಿಗೆ Duanne Olivier ಆಯ್ಕೆಯಾಗಿದ್ದಾರೆ.


ಇದನ್ನೂ ಓದಿ : ಪುಟ್ಬಾಲ್ ದಂತಕಥೆ ಲಿಯೋನಿಲ್ ಮೆಸ್ಸಿ ಸೇರಿ 4 ಆಟಗಾರರಿಗೆ ಕೊರೊನಾ ಧೃಡ


ಟೀಮ್ ಇಂಡಿಯಾ ಪ್ಲೇಯಿಂಗ್ 11 :
ಕೆಎಲ್ ರಾಹುಲ್ (ನಾಯಕ), ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಹನುಮ ವಿಹಾರಿ, ರಿಷಬ್ ಪಂತ್ (ವಿಕೆಟ್ ಕೀಪರ್ ), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.