ಮುಂಬೈ: ಇಲ್ಲಿನ ವಾಂಖೇಡ ಕ್ರೀಡಾಂಗಣದಲ್ಲಿ ನಡೆದ ಟಿ20 ಮೊದಲನೇ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾ ವಿರುದ್ಧ ಎರಡು ರನ್ ಗಳ ರೋಚಕ ಗೆಲುವನ್ನು ಸಾಧಿಸಿದೆ.
ಮೊದಲು ಟಾಸ್ ಗೆದ್ದು ಶ್ರೀಲಂಕಾ ತಂಡವು ಭಾರತಕ್ಕೆ ಬ್ಯಾಟಿಂಗ್ ಅವಕಾಶವನ್ನು ನೀಡಿತು.ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡ ಭಾರತ ತಂಡವು 20 ಓವರ್ ಗಳಲ್ಲಿ ಐದು ವಿಕೆಟ್ ಗಳ ನಷ್ಟಕ್ಕೆ 162 ರನ್ ಗಳ ಸವಾಲಿನ ಮೊತ್ತವನ್ನು ಗಳಿಸಿತು.
ಇದನ್ನೂ ಓದಿ: Siddeshwara Swamiji: ಪಂಚಭೂತಗಳಲ್ಲಿ ಲೀನರಾದ ʻಶತಮಾನದ ಸಂತʼ
ಭಾರತ ತಂಡದ ಪರವಾಗಿ ಇಶಾನ್ ಕಿಶನ್ 37 ದೀಪಕ್ ಹೂಡಾ 41 ಹಾಗೂ ಅಕ್ಸರ್ ಪಟೇಲ್ ಅವರ 31 ರನ್ ಗಳ ನೆರವಿನಿಂದ 162 ರನ್ ಗಳನ್ನು ಗಳಿಸುವಲ್ಲಿ ಯಶಸ್ವಿಯಾಯಿತು.ಇದಾದ ನಂತರ ಭಾರತ ತಂಡವು ನೀಡಿದ 163 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ತಂಡವು 20 ಓವರ್ ಗಳಲ್ಲಿ ಎಲ್ಲ ವಿಕೆಟ್ ಗಳನ್ನು ಕಳೆದುಕೊಂಡು 160 ರನ್ ಗಳನ್ನು ಗಳಿಸಲಷ್ಟೇ ಶಕ್ತವಾಯಿತು.
That's that from the 1st T20I.#TeamIndia win by 2 runs and take a 1-0 lead in the series.
Scorecard - https://t.co/uth38CaxaP #INDvSL @mastercardindia pic.twitter.com/BEU4ICTc3Y
— BCCI (@BCCI) January 3, 2023
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ..!
ಶ್ರೀಲಂಕಾ ತಂಡದ ಪರವಾಗಿ ದಾಸುನ್ ಶನಕಾ 45 ರನ್ ಗಳನ್ನು ಗಳಿಸುವ ಮೂಲಕ ತಂಡವನ್ನು ಗೆಲುವಿನ ಹಂತಕ್ಕೆ ತಂದಿದ್ದರು. ಆದಾಗ್ಯೂ ಭಾರತ ತಂಡದ ಪರವಾಗಿ ಶಿವಂ ಮಾವಿ ನಾಲ್ಕು ಉಮ್ರಾನ್ ಮಾಲಿಕ್ ಹಾಗೂ ಹರ್ಶಾಲ್ ಪಟೇಲ್ ತಲಾ ಎರಡು ವಿಕೆಟ್ ಗಳನ್ನು ಪಡೆಯುವ ಮೂಲಕ ಶ್ರೀಲಂಕಾ ತಂಡದ ಬ್ಯಾಟಿಂಗ್ ಪಡೆಯನ್ನು ಕಟ್ಟಿ ಹಾಕಿದರು.ಅಂತಿಮವಾಗಿ ಭಾರತ ತಂಡವು ಎರಡು ರನ್ ಗಳ ರೋಚಕ ಗೆಲುವನ್ನು ಸಾಧಿಸಿತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.