IND vs SL 1st test: ಮೊಹಾಲಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾವನ್ನು ಇನ್ನಿಂಗ್ಸ್ ಮತ್ತು 222 ರನ್‌ಗಳಿಂದ ಸೋಲಿಸಿದೆ. ಇದರೊಂದಿಗೆ ಭಾರತ ತಂಡ ಎರಡು ಟೆಸ್ಟ್‌ಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ರೋಹಿತ್ ಶರ್ಮಾ ಟೆಸ್ಟ್ ಗೆಲುವಿನೊಂದಿಗೆ ನಾಯಕನಾಗಿ ಕೂಡ ಶುಭಾರಂಭ ಮಾಡಿದ್ದಾರೆ.  ಈ ಪಂದ್ಯದಲ್ಲಿ ಹಲವು ದಾಖಲೆಗಳು ನಿರ್ಮಾಣವಾದವು. ರವೀಂದ್ರ ಜಡೇಜಾಗೆ ಈ ಪಂದ್ಯವು ತುಂಬಾ ವಿಶೇಷವಾಗಿತ್ತು, ಜಡೇಜಾ ಅವರು ಅಂತರರಾಷ್ಟ್ರೀಯ ವೃತ್ತಿಜೀವನದ ಅತಿದೊಡ್ಡ ಇನ್ನಿಂಗ್ಸ್ ಆಡಿದರು, ನಂತರ ವಿರಾಟ್ ಕೊಹ್ಲಿ (Virat Kohli) ತಮ್ಮ ವೃತ್ತಿಜೀವನದಲ್ಲಿ 100 ಟೆಸ್ಟ್ ಪಂದ್ಯಗಳನ್ನು ಪೂರ್ಣಗೊಳಿಸಿದರು. ಈ ಪಂದ್ಯದಲ್ಲಿ ರೋಹಿತ್ ಶರ್ಮಾ (Rohit Sharma) ನಾಯಕನಾಗಿಯೂ ಅಂತಹ ದಾಖಲೆಯನ್ನು ಮಾಡಿದ್ದಾರೆ, ವಿರಾಟ್ ಕೊಹ್ಲಿ ಹಾಗೂ ಮಹೇಂದ್ರ ಸಿಂಗ್ ಧೋನಿ (Mahendra SIngh Dhoni)  ಕೂಡ ಅವರ ಹೆಸರಿನಲ್ಲಿ ಈ ದಾಖಲೆ ಮಾಡಲು ಸಾಧ್ಯವಾಗಲಿಲ್ಲ.


COMMERCIAL BREAK
SCROLL TO CONTINUE READING

ಮತ್ತೊಂದು ವಿಶೇಷ ದಾಖಲೆ ನಿರ್ಮಿಸಿದ ರೋಹಿತ್ :
ನಾಯಕನಾಗಿ ರೋಹಿತ್ ಶರ್ಮಾ (Rohit Sharma) ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ತಂಡವೂ ನಿರಂತರವಾಗಿ ಜಯಗಳಿಸುತ್ತಾ ಹಲವು ದಾಖಲೆಗಳನ್ನು ತನ್ನ ಹೆಸರಲ್ಲಿ ಬರೆಯುತ್ತಿದೆ. ಪೂರ್ಣಾವಧಿ ನಾಯಕನಾಗಿ ರೋಹಿತ್ ಶರ್ಮಾ ಅವರ ಮೊದಲ ಟೆಸ್ಟ್ ಪಂದ್ಯ ಇದಾಗಿದ್ದು, ಈ ಪಂದ್ಯದ ಗೆಲುವಿನೊಂದಿಗೆ ರೋಹಿತ್ ತಮ್ಮ ಚೊಚ್ಚಲ ನಾಯಕತ್ವದಲ್ಲಿಯೇ ಹೊಸ ಇತಿಹಾಸ ನಿರ್ಮಿಸಿದ್ದಾರೆ. ರೋಹಿತ್ ಪಾಲಿ ಉಮ್ರಿಗರ್ ನಂತರ ತಮ್ಮ ಮೊದಲ ಟೆಸ್ಟ್ ಅನ್ನು ಇನ್ನಿಂಗ್ಸ್ ಅಂತರದಿಂದ ಗೆದ್ದ ಎರಡನೇ ಭಾರತೀಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೊಹಾಲಿ ಟೆಸ್ಟ್‌ನಲ್ಲಿ ಶ್ರೀಲಂಕಾ ವಿರುದ್ಧದ ಸಂಪೂರ್ಣ ಪಂದ್ಯದಲ್ಲಿ ಭಾರತ ಪ್ರಾಬಲ್ಯ ಸಾಧಿಸಿದೆ. 1955ರಲ್ಲಿ ಉಮ್ರಿಗರ್ ನಾಯಕತ್ವದಲ್ಲಿ ಭಾರತ ತಂಡ ಇನಿಂಗ್ಸ್ ಅಂತರದಿಂದ ಜಯಗಳಿಸಿತು. ಈ ಪಂದ್ಯದಲ್ಲಿ ಉಮ್ರಿಗರ್ ಅವರು ಟೀಮ್ ಇಂಡಿಯಾದ ಕಮಾಂಡರ್ ಆಗಿದ್ದರು. 


ಇದನ್ನೂ ಓದಿ- IND vs SL: ರೋಹಿತ್ ಸಾರಥ್ಯದಲ್ಲಿ ವರ್ಷಗಳ ನಂತರ ಮತ್ತೆ ತಂಡಕ್ಕೆ ಮರಳಲಿದ್ದಾರೆ ಈ ಅಪಾಯಕಾರಿ ಆಟಗಾರ


ಜಡೇಜಾ-ಅಶ್ವಿನ್‌ಗೆ ಮೊದಲ ಟೆಸ್ಟ್:
ಮೊದಲ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ (Ravindra Jadeja) ಮತ್ತು ರವಿಚಂದ್ರನ್ ಅಶ್ವಿನ್ ಕಪಿಲ್ ದೇವ್ ಅವರ ಎರಡು ದೊಡ್ಡ ದಾಖಲೆಗಳನ್ನು ಮುರಿದರು. ಮೊದಲು ಜಡೇಜಾ ಏಳನೇ ಸ್ಥಾನಕ್ಕೆ ಬಂದು ಅಜೇಯ 175 ರನ್ ಗಳಿಸಿದರು ಮತ್ತು ಈ ಸಂಖ್ಯೆಯಲ್ಲಿ ಭಾರತಕ್ಕೆ ಅತಿದೊಡ್ಡ ಇನ್ನಿಂಗ್ಸ್ ಆಡಿದ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಇದಕ್ಕೂ ಮೊದಲು ಕಾನ್ಪುರದಲ್ಲಿ ಶ್ರೀಲಂಕಾ ವಿರುದ್ಧ ಕಪಿಲ್ ದೇವ್ 163 ರನ್ ಗಳಿಸಿದ್ದರು. ಇದಾದ ಬಳಿಕ ಅಶ್ವಿನ್ ಅತಿ ಹೆಚ್ಚು ವಿಕೆಟ್ ಪಡೆದ ವಿಚಾರದಲ್ಲಿ ಕಪಿಲ್ ದೇವ್ ಅವರನ್ನು ಹಿಂದಿಕ್ಕಿದರು. ಟೆಸ್ಟ್‌ನಲ್ಲಿ ಅಶ್ವಿನ್ 436 ವಿಕೆಟ್ ಪಡೆದಿದ್ದರೆ, ಕಪಿಲ್ ದೇವ್ 434 ವಿಕೆಟ್ ಪಡೆದಿದ್ದಾರೆ.


ಇದನ್ನೂ ಓದಿ- IND vs SL: ರವೀಂದ್ರ ಜಡೇಜಾ ಆಲ್ರೌಂಡ್ ಪರಾಕ್ರಮಕ್ಕೆ ಬೆಚ್ಚಿದ ಸಿಂಹಳಿಯರು...!


ಮೊಹಾಲಿ ಟೆಸ್ಟ್ 3 ದಿನಗಳಲ್ಲಿ ಕೊನೆಗೊಂಡಿತು:
ಮೊಹಾಲಿ ಟೆಸ್ಟ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಎರಡನೇ ದಿನ 8 ವಿಕೆಟ್‌ಗೆ 574 ರನ್ ಗಳಿಸುವ ಮೂಲಕ ತನ್ನ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿದೆ. ಇದಕ್ಕೆ ಉತ್ತರವಾಗಿ, ಶ್ರೀಲಂಕಾ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 174 ರನ್‌ಗಳಿಗೆ ಆಲೌಟ್ ಆಯಿತು ಮತ್ತು ಭಾರತವು ಶ್ರೀಲಂಕಾವನ್ನು ಫಾಲೋ-ಆನ್ ಮಾಡಲು ಒತ್ತಾಯಿಸಿತು. ಎರಡನೇ ಇನ್ನಿಂಗ್ಸ್‌ನಲ್ಲೂ ಶ್ರೀಲಂಕಾ ತಂಡ ಸಂಪೂರ್ಣ ಒತ್ತಡಕ್ಕೆ ಸಿಲುಕಿದ್ದು, ಈ ಇನಿಂಗ್ಸ್‌ನಲ್ಲಿ 60 ಓವರ್‌ಗಳಲ್ಲಿ 178 ರನ್ ಗಳಿಸಲಷ್ಟೇ ಶಕ್ತವಾಯಿತು. ಭಾರತದ ಪರ ಜಡೇಜಾ 4 ಹಾಗೂ ಅಶ್ವಿನ್ 4 ವಿಕೆಟ್ ಪಡೆದರು. ಇದೀಗ ಉಭಯ ತಂಡಗಳ ನಡುವೆ ಮಾರ್ಚ್ 12 ರಿಂದ ಬೆಂಗಳೂರಿನಲ್ಲಿ ಎರಡನೇ ಟೆಸ್ಟ್ ಪಂದ್ಯ ನಡೆಯಲಿದ್ದು, ಈ ಟೆಸ್ಟ್ ಪಂದ್ಯವನ್ನು ಡೇ ನೈಟ್ ಟೆಸ್ಟ್ ಆಗಿ ಆಡಲಾಗುತ್ತದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.