IND vs SL: ಕೆಎಲ್ ರಾಹುಲ್ ಅಥವಾ ಇಶಾನ್ ಕಿಶನ್? ODI ಸರಣಿಯಲ್ಲಿ ವಿಕೆಟ್ ಕೀಪಿಂಗ್ ಮಾಡೋದು ಈ ಆಟಗಾರ
India vs Sri Lanka ODI Series: ಕನ್ನಡಿಗ ಕೆಎಲ್ ರಾಹುಲ್ ವಿಕೆಟ್ ಕೀಪಿಂಗ್ ನಲ್ಲಿ ಅಪಾರ ಅನುಭವ ಹೊಂದಿದ್ದು, ಟೀಂ ಇಂಡಿಯಾಕ್ಕೆ ಇದು ಉಪಯುಕ್ತ. ಬಾಂಗ್ಲಾದೇಶ ಪ್ರವಾಸದಲ್ಲಿ ಭಾರತ ತಂಡದ ವಿಕೆಟ್ ಕೀಪಿಂಗ್ ನೋಡಿಕೊಳ್ಳುತ್ತಿದ್ದರು. ಆದರೆ ರಾಹುಲ್ ದೀರ್ಘ ಕಾಲದಿಂದ ಕಳಪೆ ಫಾರ್ಮ್‌ನಿಂದ ಬಳಲುತ್ತಿದ್ದಾರೆ.
India vs Sri Lanka ODI Series: ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯ ಜನವರಿ 10 ರಂದು ಗುವಾಹಟಿ ಮೈದಾನದಲ್ಲಿ ನಡೆಯಲಿದೆ. ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗಾಗಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಅವರಂತಹ ಅನುಭವಿ ಆಟಗಾರರು ಟೀಂ ಇಂಡಿಯಾಕ್ಕೆ ಮರಳುತ್ತಿದ್ದಾರೆ. ಆದರೆ ಅಪಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರಣ ರಿಷಬ್ ಪಂತ್ ಏಕದಿನ ಸರಣಿಯ ಭಾಗವಾಗಿರುವುದಿಲ್ಲ. ಹೀಗಿರುವಾಗ ಶ್ರೀಲಂಕಾ ವಿರುದ್ಧ ಇಶಾನ್ ಕಿಶನ್ ಮತ್ತು ಕೆಎಲ್ ರಾಹುಲ್ ನಡುವೆ ಭಾರತ ತಂಡದ ವಿಕೆಟ್ ಕೀಪಿಂಗ್ ಯಾರು ನಿಭಾಯಿಸುತ್ತಾರೆ ಎಂಬ ದೊಡ್ಡ ಪ್ರಶ್ನೆ ಭುಗಿಲೆದ್ದಿದೆ.
ಇದನ್ನೂ ಓದಿ: Kohli Bat Price : ವಿರಾಟ್ ಕೊಹ್ಲಿ ಬಳಸುವ ಬ್ಯಾಟ್ ಬೆಲೆ ಎಷ್ಟು ಸಾವಿರ ಗೊತ್ತಾ?
ಕನ್ನಡಿಗ ಕೆಎಲ್ ರಾಹುಲ್ ವಿಕೆಟ್ ಕೀಪಿಂಗ್ ನಲ್ಲಿ ಅಪಾರ ಅನುಭವ ಹೊಂದಿದ್ದು, ಟೀಂ ಇಂಡಿಯಾಕ್ಕೆ ಇದು ಉಪಯುಕ್ತ. ಬಾಂಗ್ಲಾದೇಶ ಪ್ರವಾಸದಲ್ಲಿ ಭಾರತ ತಂಡದ ವಿಕೆಟ್ ಕೀಪಿಂಗ್ ನೋಡಿಕೊಳ್ಳುತ್ತಿದ್ದರು. ಆದರೆ ರಾಹುಲ್ ದೀರ್ಘ ಕಾಲದಿಂದ ಕಳಪೆ ಫಾರ್ಮ್‌ನಿಂದ ಬಳಲುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಶ್ರೀಲಂಕಾ ವಿರುದ್ಧ ಆಡಲು ಅವಕಾಶ ಸಿಕ್ಕಿದ್ದಲ್ಲಿ ಮತ್ತೊಮ್ಮೆ ಲಯಕ್ಕೆ ಬರಲು ಶ್ರಮ ವಹಿಸುವುದಾಗಿ ಭರವಸೆ ನೀಡಿದ್ದಾರೆ. ಇನ್ನು ರಾಹುಲ್, ಟೀಂ ಇಂಡಿಯಾ ಪರ ಇದುವರೆಗೆ 48 ಏಕದಿನ ಪಂದ್ಯಗಳಲ್ಲಿ 1760 ರನ್ ಗಳಿಸಿದ್ದಾರೆ. ಏಕದಿನದಲ್ಲಿ ವಿಕೆಟ್ ಕೀಪಿಂಗ್ ಮಾಡುವಾಗ ಅವರು 26 ಕ್ಯಾಚ್ ಮತ್ತು 2 ಸ್ಟಂಪಿಂಗ್ ಮಾಡಿದ್ದಾರೆ.
ಇನ್ನೊಂದೆಡೆ ಇಶಾನ್ ಕಿಶನ್ ಸ್ಫೋಟಕ ಬ್ಯಾಟಿಂಗ್‌ನಲ್ಲಿ ಪರಿಣತಿ ಹೊಂದಿರುವ ಆಟಗಾರ. ಬಾಂಗ್ಲಾದೇಶ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಅವರು 210 ರನ್‌ಗಳ ಬಿರುಸಿನ ಇನ್ನಿಂಗ್ಸ್ ಆಡಿದ್ದರು. ಇದರ ನಂತರ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಜೊತೆ ಆರಂಭಿಕ ಆಟಗಾರನಾಗಿ ಮೈದಾನಕ್ಕೆ ಕಾಲಿಟ್ಟಿದ್ದರು. ಅವರ ವಿಕೆಟ್ ಕೀಪಿಂಗ್ ಕೌಶಲ್ಯವೂ ಅದ್ಭುತವಾಗಿದೆ. ಟೀಂ ಇಂಡಿಯಾ ಪರ ಇದುವರೆಗೆ 10 ಏಕದಿನ ಪಂದ್ಯಗಳಲ್ಲಿ 477 ರನ್ ಗಳಿಸಿದ್ದಾರೆ. ಟೀಂ ಇಂಡಿಯಾ ಪರ ವಿಕೆಟ್ ಕೀಪಿಂಗ್ ಮಾಡುವಾಗ 3 ಕ್ಯಾಚ್ ಹಾಗೂ 1 ಸ್ಟಂಪಿಂಗ್ ಮಾಡಿದ್ದಾರೆ. ಆದರೆ ಈ ಸಂದರ್ಭದಲ್ಲಿ ಅನುಭವವನ್ನು ನೋಡಿದರೆ, ನಾಯಕ ರೋಹಿತ್ ಶರ್ಮಾ ಕೆಎಲ್ ರಾಹುಲ್ ಅವರನ್ನು ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಬಹುದು.
ಇದನ್ನೂ ಓದಿ: IND vs SL : ಟೀಂ ಇಂಡಿಯಾಗೆ ಮರಳಿದ ಈ 3 ದಿಗ್ಗಜ ಆಟಗಾರರು!
ಭಾರತ ಮತ್ತು ಶ್ರೀಲಂಕಾ ನಡುವೆ ಇದುವರೆಗೆ 162 ಏಕದಿನ ಪಂದ್ಯಗಳು ನಡೆದಿದ್ದು, ಇದರಲ್ಲಿ ಟೀಂ ಇಂಡಿಯಾ 93 ಏಕದಿನ ಪಂದ್ಯಗಳನ್ನು ಗೆದ್ದಿದೆ. ಮತ್ತೊಂದೆಡೆ, ಶ್ರೀಲಂಕಾ ತಂಡವು ಕೇವಲ 57 ಪಂದ್ಯಗಳನ್ನು ಗೆಲ್ಲಲು ಶಕ್ತವಾಗಿದೆ. 11 ಪಂದ್ಯಗಳು ಅನಿರ್ದಿಷ್ಟವಾಗಿವೆ. ಳೆದ 37 ವರ್ಷಗಳಿಂದ, ಶ್ರೀಲಂಕಾ ತಂಡವು ಭಾರತದಲ್ಲಿ ಏಕದಿನ ಸರಣಿಯನ್ನು ಗೆಲ್ಲಲು ಸಾಧ್ಯವಾಗಲಿಲ್ಲ ಎಂಬುದು ಇಲ್ಲಿ ಗಮನಿಸಬೇಕಾದ ಸಂಗತಿ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.