ವೆಸ್ಟ್ ಇಂಡೀಸ್ ಸರಣಿಯಲ್ಲಿ ಈ ಮೂವರು ಆಟಗಾರರಿಗೆ ಅವಕಾಶ ನೀಡದ ರೋಹಿತ್ ಶರ್ಮಾ! Playing 11ನಿಂದ ಔಟ್…

IND vs WI Playing 11: ವೆಸ್ಟ್ ಇಂಡೀಸ್ ವಿರುದ್ಧ ಜುಲೈ 12 ರಿಂದ ಡೊಮಿನಿಕಾದಲ್ಲಿ ಆರಂಭವಾಗಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ವೇಗದ ಬೌಲಿಂಗ್ ಆಲ್‌ ರೌಂಡರ್ ಶಾರ್ದೂಲ್ ಠಾಕೂರ್, ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಮತ್ತು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕೆಎಸ್ ಭರತ್ ಅವರನ್ನು ಪ್ಲೇಯಿಂಗ್ XI ನಿಂದ ಹೊರಗಿಡಲಾಗುತ್ತದೆ

Written by - Bhavishya Shetty | Last Updated : Jun 30, 2023, 11:48 AM IST
    • ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯ
    • ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾಗೆ ಪ್ಲೇಯಿಂಗ್ 11 ಆಯ್ಕೆ ಸುಲಭವಲ್ಲ
    • ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಈ 3 ಆಟಗಾರರು ಮೈದಾನದಲ್ಲಿ ಕಾಣಿಸಿಕೊಳ್ಳುವುದು ಅನುಮಾನ
ವೆಸ್ಟ್ ಇಂಡೀಸ್ ಸರಣಿಯಲ್ಲಿ ಈ ಮೂವರು ಆಟಗಾರರಿಗೆ ಅವಕಾಶ ನೀಡದ ರೋಹಿತ್ ಶರ್ಮಾ! Playing 11ನಿಂದ ಔಟ್… title=
India vs West Indies

IND vs WI Playing 11: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಜುಲೈ 12 ರಿಂದ ಪ್ರಾರಂಭವಾಗಲಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯ ಜುಲೈ 12 ರಿಂದ ಡೊಮಿನಿಕಾದಲ್ಲಿ ಭಾರತೀಯ ಕಾಲಮಾನ ರಾತ್ರಿ 7:30ಕ್ಕೆ ನಡೆಯಲಿದೆ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾಗೆ ಪ್ಲೇಯಿಂಗ್ ಇಲೆವೆನ್ ಆಯ್ಕೆ ಸುಲಭವಲ್ಲ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಪ್ಲೇಯಿಂಗ್ XI ನಿಂದ 3 ಆಟಗಾರರನ್ನು ಕೈಬಿಡುವ ಸಾಧ್ಯತೆ ಇದೆ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಈ 3 ಆಟಗಾರರು ಮೈದಾನದಲ್ಲಿ ಕಾಣಿಸಿಕೊಳ್ಳುವುದು ಅನುಮಾನ.

ಇದನ್ನೂ ಓದಿ: ಬಿಸಿಸಿಐ ಆಯ್ಕೆ ಸಮಿತಿಯ ಮುಖ್ಯಸ್ಥ ಸ್ಥಾನ ಪಡೆಯಲು ಐಪಿಎಲ್ ತಂಡಕ್ಕೆ ರಾಜೀನಾಮೆ ನೀಡಿದ ಕ್ರಿಕೆಟ್ ದಿಗ್ಗಜ!

ವೆಸ್ಟ್ ಇಂಡೀಸ್ ವಿರುದ್ಧ ಜುಲೈ 12 ರಿಂದ ಡೊಮಿನಿಕಾದಲ್ಲಿ ಆರಂಭವಾಗಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ವೇಗದ ಬೌಲಿಂಗ್ ಆಲ್‌ ರೌಂಡರ್ ಶಾರ್ದೂಲ್ ಠಾಕೂರ್, ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಮತ್ತು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕೆಎಸ್ ಭರತ್ ಅವರನ್ನು ಪ್ಲೇಯಿಂಗ್ XI ನಿಂದ ಹೊರಗಿಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಸ್ಪಿನ್ ವಿಭಾಗವನ್ನು ಮುನ್ನಡೆಸಲಿದ್ದಾರೆ ಮತ್ತು ರವೀಂದ್ರ ಜಡೇಜಾ ಅವರಿಗೆ ಸಾಥ್ ನೀಡಲಿದ್ದಾರೆ. ಈ ರೀತಿ ನಡೆದರೆ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಹೊರಗುಳಿಯಬೇಕಾಗುತ್ತದೆ.

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕೋಚ್ ರಾಹುಲ್ ದ್ರಾವಿಡ್ ಮತ್ತು ನಾಯಕ ರೋಹಿತ್ ಶರ್ಮಾ ವೇಗದ ಬೌಲರ್‌ ಗಳಲ್ಲಿ ಮೊಹಮ್ಮದ್ ಸಿರಾಜ್, ನವದೀಪ್ ಸೈನಿ ಮತ್ತು ಜಯದೇವ್ ಉನದ್ಕತ್ ಅವರಿಗೆ ಅವಕಾಶ ನೀಡಲಿದ್ದಾರೆ. ವೇಗದ ಬೌಲಿಂಗ್ ಆಲ್‌ ರೌಂಡರ್ ಶಾರ್ದೂಲ್ ಠಾಕೂರ್ ಅವರನ್ನು ಟೀಂ ಇಂಡಿಯಾದ ಪ್ಲೇಯಿಂಗ್ XI ನಿಂದ ಕೈಬಿಡಲಾಗುತ್ತದೆ.

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕೆಎಸ್ ಭರತ್ ಅವರು ಪ್ಲೇಯಿಂಗ್ XI ತಂಡದಿಂದ ಹೊರಗುಳಿಯುವ ಸಾಧ್ಯತೆ ಇದೆ. ಇಶಾನ್ ಕಿಶನ್ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡಬಹುದು. ಇಶಾನ್ ಕಿಶನ್ ತಮ್ಮ ಬ್ಯಾಟಿಂಗ್ ಮೂಲಕ 7ನೇ ಕ್ರಮಾಂಕದಲ್ಲಿ ಸ್ಪೋಟಕ ಬ್ಯಾಟಿಂಗ್ ಮಾಡುವ ಅವಕಾಶ ಹೊಂದಿದ್ದಾರೆ. ಈಗಾಗಲೇ ರೋಹಿತ್ ಶರ್ಮಾಗೆ ಇಶಾನ್ ಕಿಶನ್ ಬ್ರಹ್ಮಾಸ್ತ್ರ ಎಂಬುದನ್ನು ಸಾಬೀತುಪಡಿಸಿದ್ದಾರೆ. ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿ ಕೆಎಸ್ ಭರತ್ ಇಲ್ಲಿಯವರೆಗೆ ಬ್ಯಾಟಿಂಗ್ ಮತ್ತು ವಿಕೆಟ್ ಕೀಪಿಂಗ್ ಎರಡರಲ್ಲೂ ವೈಫಲ್ಯವನ್ನು ಸಾಬೀತುಪಡಿಸಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್‌ ಗೆ ಭಾರತದ ಸಂಭಾವ್ಯ ಆಟಗಾರರ ಪ್ಲೇಯಿಂಗ್ 11:

ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ, ಜಯದೇವ್ ಉನದ್ಕತ್.

ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತೀಯ ಟೆಸ್ಟ್ ತಂಡ:

ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ರಿತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ.

ಭಾರತ vs ವೆಸ್ಟ್ ಇಂಡೀಸ್ ಟೆಸ್ಟ್ ಸರಣಿಯ ಪಂದ್ಯಗಳು (ಭಾರತೀಯ ಕಾಲಮಾನ):

1ನೇ ಟೆಸ್ಟ್, ಜುಲೈ 12-16, ಡೊಮಿನಿಕಾ, ರಾತ್ರಿ 7.30

2ನೇ ಟೆಸ್ಟ್, ಜುಲೈ 20-24, ರಾತ್ರಿ 7.30, ಟ್ರಿನಿಡಾಡ್

 

ಭಾರತ vs ವೆಸ್ಟ್ ಇಂಡೀಸ್ ODI ಸರಣಿ

1ನೇ ODI, ಜುಲೈ 27, ರಾತ್ರಿ 7.00, ಬಾರ್ಬಡೋಸ್

2ನೇ ODI, ಜುಲೈ 29, ರಾತ್ರಿ 7.00, ಬಾರ್ಬಡೋಸ್

3ನೇ ODI, ಆಗಸ್ಟ್ 1, ರಾತ್ರಿ 7.00, ಟ್ರಿನಿಡಾಡ್

 

ಭಾರತ vs ವೆಸ್ಟ್ ಇಂಡೀಸ್ ಟಿ20 ಸರಣಿ

1ನೇ ಟಿ20 ಪಂದ್ಯ, ಆಗಸ್ಟ್ 3, ರಾತ್ರಿ 8.00, ಟ್ರಿನಿಡಾಡ್

2ನೇ ಟಿ20 ಪಂದ್ಯ, ಆಗಸ್ಟ್ 6, ರಾತ್ರಿ 8.00, ಗಯಾನಾ

3ನೇ ಟಿ20 ಪಂದ್ಯ, ಆಗಸ್ಟ್ 8, ರಾತ್ರಿ 8.00, ಗಯಾನಾ

4ನೇ ಟಿ20 ಪಂದ್ಯ, ಆಗಸ್ಟ್ 12, ರಾತ್ರಿ 8.00, ಫ್ಲೋರಿಡಾ

ಐದನೇ ಟಿ20 ಪಂದ್ಯ, ಆಗಸ್ಟ್ 13, ರಾತ್ರಿ 8.00, ಫ್ಲೋರಿಡಾ

ಇದನ್ನೂ ಓದಿ: “ತಪ್ಪನ್ನು ಒಪ್ಪಿಕೊಂಡು ವಿರಾಟ್ ಬಳಿ ಕ್ಷಮೆ ಕೇಳಿ”: ಗಂಭೀರ್’ಗೆ ಪಾಕ್ ಕ್ರಿಕೆಟ್ ದಿಗ್ಗಜನಿಂದ ಕ್ಲಾಸ್

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News