IND vs ZIM 2nd ODI : ಹರಾರೆ ಸ್ಪೋರ್ಟ್ಸ್ ಕ್ಲಬ್ನಲ್ಲಿ ಶನಿವಾರ ಜಿಂಬಾಬ್ವೆ ವಿರುದ್ಧ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 5 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.ಜಿಂಬಾಬ್ವೆ ವಿರುದ್ಧ ಕ್ಯಾಪ್ಟನ್ ನಾಯಕ ಕೆಎಲ್ ರಾಹುಲ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.
ಸದ್ಯ ಭಾರತ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಎರಡನೇ ಏಕದಿನ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಸರಣಿಯನ್ನು ಅವರ ಪರವಾಗಿ ಮುದ್ರೆ ಒತ್ತಿದೆ.. ಟಾಸ್ ಗೆದ್ದ ನಂತರ, ಮೊದಲ ODI ನಲ್ಲಿ ಏಳು ಓವರ್ಗಳಲ್ಲಿ 3-27 ರೊಂದಿಗೆ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಯಶಸ್ವಿಯಾಗಿ ಹಿಂದಿರುಗಿದ ವೇಗಿ ದೀಪಕ್ ಚಹಾರ್ ಇಂದಿನ ಪಂದ್ಯದಿಂದ ಹೊರಗುಳಿದಿದ್ದಾರೆ ಮತ್ತು ಅವರ ಬದಲಿಗೆ ಶಾರ್ದೂಲ್ ಠಾಕೂರ್ ಪ್ಲೇಯಿಂಗ್ 11 ನಲ್ಲಿ ಸ್ಥಾನ ಪಡೆದಿದ್ದಾರೆ ಎಂದು ರಾಹುಲ್ ಹೇಳಿದರು.
ಟೀಂ ಇಂಡಿಯಾ : ಶುಭಮನ್ ಗಿಲ್, ಶಿಖರ್ ಧವನ್, ಇಶಾನ್ ಕಿಶನ್, ಕೆಎಲ್ ರಾಹುಲ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ದೀಪಕ್ ಹೂಡಾ, ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ ಮತ್ತು ಮೊಹಮ್ಮದ್ ಸಿರಾಜ್.
ಜಿಂಬಾಬ್ವೆ ಟೀಂ : ಇನ್ನೋಸೆಂಟ್ ಕೈಯಾ, ತಕುದ್ಜ್ವಾನಾಶೆ ಕೈಟಾನೊ, ವೆಸ್ಲಿ ಮಾಧೆವೆರೆ, ಸೀನ್ ವಿಲಿಯಮ್ಸ್, ಸಿಕಂದರ್ ರಜಾ, ರೆಗಿಸ್ ಚಕಬ್ವಾ (ನಾಯಕ ಮತ್ತು ವಿಕೆಟ್ ಕೀಪರ್), ರಿಯಾನ್ ಬರ್ಲ್, ಲ್ಯೂಕ್ ಜೊಂಗ್ವೆ, ಬ್ರಾಡ್ ಇವಾನ್ಸ್, ವಿಕ್ಟರ್ ನ್ಯೌಚಿ ಮತ್ತು ತನಕಾ ಚಿವಾಂಗಾ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.