IND vs ZIM 2nd ODI : ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಶನಿವಾರ ಜಿಂಬಾಬ್ವೆ ವಿರುದ್ಧ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 5 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.ಜಿಂಬಾಬ್ವೆ ವಿರುದ್ಧ ಕ್ಯಾಪ್ಟನ್ ನಾಯಕ ಕೆಎಲ್ ರಾಹುಲ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.


COMMERCIAL BREAK
SCROLL TO CONTINUE READING

ಸದ್ಯ ಭಾರತ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಎರಡನೇ ಏಕದಿನ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಸರಣಿಯನ್ನು ಅವರ ಪರವಾಗಿ ಮುದ್ರೆ ಒತ್ತಿದೆ.. ಟಾಸ್ ಗೆದ್ದ ನಂತರ, ಮೊದಲ ODI ನಲ್ಲಿ ಏಳು ಓವರ್‌ಗಳಲ್ಲಿ 3-27 ರೊಂದಿಗೆ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಯಶಸ್ವಿಯಾಗಿ ಹಿಂದಿರುಗಿದ ವೇಗಿ ದೀಪಕ್ ಚಹಾರ್ ಇಂದಿನ ಪಂದ್ಯದಿಂದ ಹೊರಗುಳಿದಿದ್ದಾರೆ ಮತ್ತು ಅವರ ಬದಲಿಗೆ ಶಾರ್ದೂಲ್ ಠಾಕೂರ್ ಪ್ಲೇಯಿಂಗ್ 11 ನಲ್ಲಿ ಸ್ಥಾನ ಪಡೆದಿದ್ದಾರೆ ಎಂದು ರಾಹುಲ್ ಹೇಳಿದರು.


ಇದನ್ನೂ ಓದಿ : Jhulan Goswami Retirement: ಅಂತರಾಷ್ಟ್ರೀಯ ಮಹಿಳಾ ಕ್ರಿಕೆಟ್ ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಆಟಗಾರ್ತಿ ಝೂಲನ್ ಗೋಸ್ವಾಮಿಯಿಂದ ನಿವೃತ್ತಿಯ ಘೋಷಣೆ


ಟೀಂ ಇಂಡಿಯಾ : ಶುಭಮನ್ ಗಿಲ್, ಶಿಖರ್ ಧವನ್, ಇಶಾನ್ ಕಿಶನ್, ಕೆಎಲ್ ರಾಹುಲ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ದೀಪಕ್ ಹೂಡಾ, ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ ಮತ್ತು ಮೊಹಮ್ಮದ್ ಸಿರಾಜ್.


ಜಿಂಬಾಬ್ವೆ ಟೀಂ : ಇನ್ನೋಸೆಂಟ್ ಕೈಯಾ, ತಕುದ್ಜ್ವಾನಾಶೆ ಕೈಟಾನೊ, ವೆಸ್ಲಿ ಮಾಧೆವೆರೆ, ಸೀನ್ ವಿಲಿಯಮ್ಸ್, ಸಿಕಂದರ್ ರಜಾ, ರೆಗಿಸ್ ಚಕಬ್ವಾ (ನಾಯಕ ಮತ್ತು ವಿಕೆಟ್ ಕೀಪರ್), ರಿಯಾನ್ ಬರ್ಲ್, ಲ್ಯೂಕ್ ಜೊಂಗ್ವೆ, ಬ್ರಾಡ್ ಇವಾನ್ಸ್, ವಿಕ್ಟರ್ ನ್ಯೌಚಿ ಮತ್ತು ತನಕಾ ಚಿವಾಂಗಾ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.