IND vs ZIM: 2024 ನೇ ವರ್ಷ ಟೀಂ ಇಂಡಿಯಾಗೆ ಹೊಸ ಯುಗವನ್ನು ಸೃಷ್ಟಿಸಿದೆ, ಈ ವರ್ಷ ಭಾರತ ತಂಡದ ಇತಿಹಾಸವನ್ನೇ ಬದಲಾಯಿಸಿದೆ ಎಂದೇ ಹೇಳಬಹುದು. 13 ವರ್ಷಗಳ ಕಾಯುವಿಕೆಯ ನಂತರ ಟೀಂ ಇಂಡಿಯಾ ಇತ್ತೀಚೆಗಷ್ಟೆ ಟಿ20 ವಿಸ್ವಕಪ್ಗೆ ಮುತ್ತಿಟ್ಟಿತು. ಇದರ ಬೆನ್ನಲ್ಲಿ ಇದೀಗ ಟಿ20 ಮಾದರಿಯಲ್ಲಿ ಟೀಂ ಇಂಡಿಯಾ ಇತಿಹಾಸ ಸೃಷ್ಟಿಸಿದೆ. ಅತೀ ಹೆಚ್ಚು ಗೆಲುವು ಸಾಧಿಸಿದ ತಂಡ ಎಂಬ ಹೆಗ್ಗಳಿಕೆಗೆ ಟೀಂ ಇಂಡಿಯಾ ಪಾತ್ರವಾಗಿದೆ.
ಜಿಂಬಾಬ್ವೆ ಪ್ರವಾಸದಲ್ಲಿರುವ ಟೀಂ ಇಂಡಿಯಾ ಬುಧವಾರ ನಡೆದ ಮೂರನೇ ಟಿ20 ಪಂದ್ಯದಲ್ಲಿ 23 ರನ್ಗಳ ಅಂತರದಿಂದ ರೋಚಕ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ. ಇದು ಟಿ20ಯಲ್ಲಿ ಟೀಂ ಇಂಡಿಯಾದ 150ನೇ ಗೆಲುವು. ಈ ಮೂಲಕ ಟೀಂ ಇಂಡಿಯಾ ಟಿ20 ಮಾದರಿಯಲ್ಲಿ 150 ಗೆಲುವು ದಾಖಲಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಇದನ್ನೂ ಓದಿ: IND vs ZIM: ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ
ಜಿಂಬಾಬ್ವೆ ವಿರುದ್ಧ ಹರಾರೆಯಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ತಂಡ ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿತು. ಭಾರಿ ಮೊತ್ತದ ಗುರಿಯನ್ನು ಬೆನ್ನಟ್ಟಲಾಗದೆ ಎದುರಾಳಿ ತಂಡದ ಆಟಗಾರರು ಮಂಡಿಯೂರಿದರು.
ಟಿ20 ಮಾದರಿಯಲ್ಲಿ ಅತೀ ಹೆಚ್ಚು ಗೆಲುವು ಸಾಧಿಸಿದ ಟಾಪ್ 5 ತಂಡಗಳು:
230 ಪಂದ್ಯಗಳನ್ನಾಡಿರು ಭಾರತ ತಂಡ 150 ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಟಾಪ್ 1 ಸ್ಥಾನದಲ್ಲಿದ್ದು ಟಿ20 ಮಾದರಿಯಲ್ಲಿ ಇತಿಹಾಸ ಸೃಷ್ಟಿಸಿದೆ.
245 ಪಂದ್ಯಗಳನ್ನಾಡಿರುವ ಪಾಕಿಸ್ತಾನ ತಂಡ 142 ಪಂದ್ಯಗಳಲ್ಲಿ ಗೆಲುವು ಸಾಧಿಸಿ ಎರಡನೇ ಸ್ಥಾನದಲ್ಲಿದೆ.
ನ್ಯೂಜಿಲೆಂಡ್ ತಂಡ 220 ಪಂದ್ಯಗಳನ್ನಾಡಿದ್ದು, 111 ಪಂದ್ಯಗಳ್ಲಿ ಗೆಲುವು ಸಾಧಿಸಿದೆ.
ಆಸ್ಟ್ರೇಲಿಯಾ 195 ಪಂದ್ಯಗಳಲ್ಲಿ 105 ಗೆಲುವು ಸಾಧಿಸುವ ಮೂಲಕ ಟಾಪ್ 4 ನೇ ಸ್ಥಾನದಲ್ಲಿದೆ.
ದಕ್ಷಿಣ ಆಫ್ರಿಕಾ 185 ಪಂದ್ಯಗಳಲ್ಲಿ 104 ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಟಾಪ್ 5 ನೇ ಸ್ಥಾನದಲ್ಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ