India Vs England 5th Test: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಮಾರ್ಚ್ 7 ರಿಂದ ಧರ್ಮಶಾಲಾದಲ್ಲಿ ನಡೆಯಲಿದೆ. ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಈಗಾಗಲೇ 3-1 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ. ಇದೀಗ ಸರಣಿಯ ಕೊನೆಯ ಪಂದ್ಯ ಗೆದ್ದರೆ.. 112 ವರ್ಷಗಳ ಬಳಿಕ ಭಾರತ ತಂಡ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಲಿದೆ.
ಇದುವರೆಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ, ಇದು ಕೇವಲ 3 ಬಾರಿ ಸಂಭವಿಸಿದೆ. 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಸೋಲುಂಡ ತಂಡ ಉಳಿದ ನಾಲ್ಕು ಪಂದ್ಯಗಳನ್ನು ಗೆಲ್ಲುವ ಮೂಲಕ ಹೊಸ ಇತಿಹಾಸ ಬರೆದಿತ್ತು. ಮೊಟ್ಟ ಮೊದಲ ಬಾರಿ 1897-98 ರಲ್ಲಿ ಈ ರೀತಯ ಪಂದ್ಯ ನಡೆಸಲಾಯಿತು. ಆ ಬಳಿಕ ಆಶಸ್ ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ ಈ ದಾಖಲೆ ಬರೆದಿತ್ತು.ಆ ನಂತರ ಆಸ್ಟ್ರೇಲಿಯಾ ಎರಡನೇ ಬಾರಿಯೂ ಅದೇ ರೆಕಾರ್ಡ್‌ನ್ನು ಪುನರಾವರ್ತಿಸಿತು.
ಇದನ್ನೂ ಓದಿ: Cricket Records: ಆರ್.ಅಶ್ವಿನ್ ಹೆಸರಿನಲ್ಲಿವೆ ಈ ಆಸಕ್ತಿದಾಯಕ ದಾಖಲೆಗಳು...!
ಬಳಿಕ ಆಶಸ್ ಸರಣಿಯಲ್ಲಿ ಇಂಗ್ಲೆಂಡ್ ಮೂರನೇ ಬಾರಿ ಈ ಸಾಧನೆ ಮಾಡಿತು. 1911/12 ರ ಅವಧಿಯಲ್ಲಿ ಇಂಗ್ಲೆಂಡ್ ತಂಡವು ಸರಣಿಯ ಮೊದಲ ಪಂದ್ಯವನ್ನು ಸೋತಿತು, ಬಳಿಕ ಆಸ್ಟ್ರೇಲಿಯಾ ವಿರುದ್ಧ 4-1 ಅಂತರದಲ್ಲಿ ಗೆದ್ದಿತು. ಅಂದಿನಿಂದ ಇಂದಿನವರೆಗೆ ಯಾವುದೇ ತಂಡಕ್ಕೆ ಈ ಸಾಧನೆ ಮಾಡಲು ಸಾಧ್ಯವಾಗಿಲ್ಲ. ಆದರೆ ಈಗ 112 ವರ್ಷಗಳ ಬಳಿಕ ಭಾರತಕ್ಕೆ ಇಂಥದ್ದೊಂದು ಅದ್ಭುತ ದಾಖಲೆ ನಿರ್ಮಿಸುವ ಅವಕಾಶ ಸಿಕ್ಕಿದೆ.
ಈ ಬಾರಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ನಡೆದ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಸೋಲು ಕಂಡಿದೆ. ಆ ಬಳಿಕ ಸತತ 3 ಪಂದ್ಯಗಳನ್ನು ಗೆದ್ದು ಸರಣಿ ಕೈವಶ ಮಾಡಿಕೊಂಡಿದೆ. ಈಗ ಸರಣಿಯ ಕೊನೆಯ ಪಂದ್ಯವನ್ನು ಗೆದ್ದರೆ ಭಾರತ ತಂಡವು 4-1 ಅಂತರದಲ್ಲಿ ಸರಣಿಯನ್ನು ವಶಪಡಿಸಿಕೊಳ್ಳಲಿದೆ. ಇದರೊಂದಿಗೆ 112 ವರ್ಷಗಳ ನಂತರ ಇತಿಹಾಸ ಮರುಕಳಿಸಲಿದೆ. 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡ ಮೊದಲ ಪಂದ್ಯದಲ್ಲಿ ಸೋತು ಉಳಿದ 4 ಪಂದ್ಯಗಳನ್ನು ಗೆದ್ದ ಇತಿಹಾಸ ನಿರ್ಮಿಸಲಿದೆ.
ಇದನ್ನೂ ಓದಿ: Ravi Shastri: ಗವಾಸ್ಕರ್ ಬಳಿಕ ಈ ಆಟಗಾರನೇ ಭಾರತದ ಅತ್ಯುತ್ತಮ ಓಪನರ್: ರವಿಶಾಸ್ತ್ರಿ ಹೇಳಿದ್ದು ಯಾರ ಬಗ್ಗೆ?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.