India Vs England 5th Test: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಮಾರ್ಚ್ 7 ರಿಂದ ಧರ್ಮಶಾಲಾದಲ್ಲಿ ನಡೆಯಲಿದೆ. ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಈಗಾಗಲೇ 3-1 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ. ಇದೀಗ ಸರಣಿಯ ಕೊನೆಯ ಪಂದ್ಯ ಗೆದ್ದರೆ.. 112 ವರ್ಷಗಳ ಬಳಿಕ ಭಾರತ ತಂಡ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಲಿದೆ.


COMMERCIAL BREAK
SCROLL TO CONTINUE READING

ಇದುವರೆಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ, ಇದು ಕೇವಲ 3 ಬಾರಿ ಸಂಭವಿಸಿದೆ. 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಸೋಲುಂಡ ತಂಡ ಉಳಿದ ನಾಲ್ಕು ಪಂದ್ಯಗಳನ್ನು ಗೆಲ್ಲುವ ಮೂಲಕ ಹೊಸ ಇತಿಹಾಸ ಬರೆದಿತ್ತು. ಮೊಟ್ಟ ಮೊದಲ ಬಾರಿ 1897-98 ರಲ್ಲಿ ಈ ರೀತಯ ಪಂದ್ಯ ನಡೆಸಲಾಯಿತು. ಆ ಬಳಿಕ ಆಶಸ್ ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ ಈ ದಾಖಲೆ ಬರೆದಿತ್ತು.ಆ ನಂತರ ಆಸ್ಟ್ರೇಲಿಯಾ ಎರಡನೇ ಬಾರಿಯೂ ಅದೇ ರೆಕಾರ್ಡ್‌ನ್ನು ಪುನರಾವರ್ತಿಸಿತು. 


ಇದನ್ನೂ ಓದಿ: Cricket Records: ಆರ್.ಅಶ್ವಿನ್ ಹೆಸರಿನಲ್ಲಿವೆ ಈ ಆಸಕ್ತಿದಾಯಕ ದಾಖಲೆಗಳು...!


ಬಳಿಕ ಆಶಸ್‌ ಸರಣಿಯಲ್ಲಿ ಇಂಗ್ಲೆಂಡ್ ಮೂರನೇ ಬಾರಿ ಈ ಸಾಧನೆ ಮಾಡಿತು. 1911/12 ರ ಅವಧಿಯಲ್ಲಿ ಇಂಗ್ಲೆಂಡ್ ತಂಡವು ಸರಣಿಯ ಮೊದಲ ಪಂದ್ಯವನ್ನು ಸೋತಿತು, ಬಳಿಕ ಆಸ್ಟ್ರೇಲಿಯಾ ವಿರುದ್ಧ 4-1 ಅಂತರದಲ್ಲಿ ಗೆದ್ದಿತು. ಅಂದಿನಿಂದ ಇಂದಿನವರೆಗೆ ಯಾವುದೇ ತಂಡಕ್ಕೆ ಈ ಸಾಧನೆ ಮಾಡಲು ಸಾಧ್ಯವಾಗಿಲ್ಲ. ಆದರೆ ಈಗ 112 ವರ್ಷಗಳ ಬಳಿಕ ಭಾರತಕ್ಕೆ ಇಂಥದ್ದೊಂದು ಅದ್ಭುತ ದಾಖಲೆ ನಿರ್ಮಿಸುವ ಅವಕಾಶ ಸಿಕ್ಕಿದೆ.


ಈ ಬಾರಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ನಡೆದ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಸೋಲು ಕಂಡಿದೆ. ಆ ಬಳಿಕ ಸತತ 3 ಪಂದ್ಯಗಳನ್ನು ಗೆದ್ದು ಸರಣಿ ಕೈವಶ ಮಾಡಿಕೊಂಡಿದೆ. ಈಗ ಸರಣಿಯ ಕೊನೆಯ ಪಂದ್ಯವನ್ನು ಗೆದ್ದರೆ ಭಾರತ ತಂಡವು 4-1 ಅಂತರದಲ್ಲಿ ಸರಣಿಯನ್ನು ವಶಪಡಿಸಿಕೊಳ್ಳಲಿದೆ. ಇದರೊಂದಿಗೆ 112 ವರ್ಷಗಳ ನಂತರ ಇತಿಹಾಸ ಮರುಕಳಿಸಲಿದೆ. 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡ ಮೊದಲ ಪಂದ್ಯದಲ್ಲಿ ಸೋತು ಉಳಿದ 4 ಪಂದ್ಯಗಳನ್ನು ಗೆದ್ದ ಇತಿಹಾಸ ನಿರ್ಮಿಸಲಿದೆ.


ಇದನ್ನೂ ಓದಿ: Ravi Shastri: ಗವಾಸ್ಕರ್ ಬಳಿಕ ಈ ಆಟಗಾರನೇ ಭಾರತದ ಅತ್ಯುತ್ತಮ ಓಪನರ್: ರವಿಶಾಸ್ತ್ರಿ ಹೇಳಿದ್ದು ಯಾರ ಬಗ್ಗೆ?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.