ಬ್ರಿಟನ್ ಸೋಲಿಸಿ ಒಲಂಪಿಕ್ಸ್ ಸೆಮಿಫೈನಲ್ ಗೆ ಲಗ್ಗೆ ಇಟ್ಟ 'ಚೆಕ್ ದೇ ಇಂಡಿಯಾ' 

ಪೆನಾಲ್ಟಿ ಶೂಟೌಟ್ ನಲ್ಲಿ ಬ್ರಿಟನ್ ತಂಡವನ್ನು 4-2 ಅಂತರದಿಂದ ಸೋಲಿಸಿ ಪ್ಯಾರಿಸ್ ಒಲಿಂಪಿಕ್ಸ್ ನ ಸೆಮಿಫೈನಲ್ ಪ್ರವೇಶಿಸಿದೆ. ನಿಗದಿತ ಸಮಯದವರೆಗೆ ಪಂದ್ಯ 1-1 ರಲ್ಲಿ ಸಮಬಲಗೊಂಡ ನಂತರ ಪೆನಾಲ್ಟಿ ಶೂಟೌಟ್ ನಡೆಯಿತು. ಇದರಲ್ಲಿ ಭಾರತ ಪರ ನಾಯಕ ಹರ್ಮನ್‌ಪ್ರೀತ್ ಸಿಂಗ್, ಸುಖಜಿತ್ ಸಿಂಗ್, ಲಲಿತ್ ಉಪಾಧ್ಯಾಯ ಮತ್ತು ರಾಜ್‌ಕುಮಾರ್ ಪಾಲ್ ಗೋಲು ಗಳಿಸಿದರೆ, ಇನ್ನೊಂದೆಡೆಗೆ 2 ಗೋಲುಗಳನ್ನು ಉಳಿಸಿ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಪಿ.ಆರ್.ಶ್ರೀಜೇಶ್ ಪೆನಾಲ್ಟಿ ಶೂಟೌಟ್ ನ ಹೀರೋ ಎನಿಸಿಕೊಂಡರು.

ಬ್ರಿಟನ್ ಸೋಲಿಸಿ ಒಲಂಪಿಕ್ಸ್ ಸೆಮಿಫೈನಲ್ ಗೆ ಲಗ್ಗೆ ಇಟ್ಟ 'ಚೆಕ್ ದೇ ಇಂಡಿಯಾ' 

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More