ಕೊಲ್ಕತ್ತಾ: ಇಲ್ಲಿನ ಈಡನ್ ಗಾರ್ಡನ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡವು 17 ಗಳ ಗೆಲುವನ್ನು ಸಾಧಿಸಿದೆ.
ಟಾಸ್ ಗೆದ್ದು ಭಾರತಕ್ಕೆ ಬ್ಯಾಟಿಂಗ್ ಅವಕಾಶ ಕಲ್ಪಿಸಿದ ವೆಸ್ಟ್ ಇಂಡೀಸ್ ತಂಡವು ಆರಂಭದಲ್ಲಿ ತನ್ನ ನಿರ್ಧಾರ ಸರಿ ಎನ್ನುವಂತೆ ಆಗಿತ್ತು, ಏಕೆಂದರೆ ಆರಂಭದಲ್ಲಿ ರುತುರಾಜ್ ಗಾಯಕ್ವಾಡ್ ಅವರ ವಿಕೆಟ್ ಕಳೆದುಕೊಂಡು ಭಾರತ ತಂಡವು ಸಂಕಷ್ಟಕ್ಕೆ ಸಿಲುಕಿತು. ಇದಾದ ನಂತರ ಜೊತೆಗೂಡಿದ ಇಶಾನ್ ಕಿಸ್ಹಾನ್ ಮತ್ತು ಶ್ರೇಯಸ್ ಅಯ್ಯರ್ ಕ್ರಮವಾಗಿ 34, ಮತ್ತು 25 ರನ್ ಗಳನ್ನು ಗಳಿಸಿದರು.
That's that from the final T20I as #TeamIndia win by 17 runs to complete a 3-0 clean sweep in the series.
Scorecard - https://t.co/2nbPwNh8dw #INDvWI @Paytm pic.twitter.com/u5z5CzD44b
— BCCI (@BCCI) February 20, 2022
ಇದನ್ನೂ ಓದಿ: "ಮಕ್ಕಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುತ್ತಿರುವುದು ಅಸಹ್ಯ ರಾಜಕಾರಣದ ಪರಮಾವಧಿ"
ನಂತರ ಬಂದತಹ ಸೂರ್ಯಕುಮಾರ್ ಯಾದವ್ ಕೇವಲ 31 ಎಸೆತಗಳಲ್ಲಿ ಭರ್ಜರಿ ಏಳು ಸಿಕ್ಸರ್ ಹಾಗೂ ಒಂದು ಬೌಂಡರಿಯೊಂದಿಗೆ 65 ರನ್ ಗಳಿಸಿದರು, ಇನ್ನೊಂದೆಡೆಗೆ ವೆಂಕಟೇಶ್ ಅಯ್ಯರ್ ಇವರಿಗೆ ಸಾಥ್ ನೀಡಿ 35 ರನ್ ಗಳಿಸಿದರು.ಅಂತಿಮವಾಗಿ ಭಾರತ ಐದು ವಿಕೆಟ್ ನಷ್ಟಕ್ಕೆ 20 ಓವರ್ ಗಳಲ್ಲಿ 184 ರನ್ ಗಳಿಸುವಲ್ಲಿ ಯಶಸ್ವಿಯಾಯಿತು.
ಇದನ್ನೂ ಓದಿ: ಹೆಣ್ಣು ಮಕ್ಕಳ ಶಿಕ್ಷಣದಲ್ಲಿ ಬಿಜೆಪಿಯ ನಿಲುವೇನು?: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ
ಭಾರತ ತಂಡವು ನೀಡಿದ ಈ ಗುರಿಯನ್ನು ಬೆನ್ನತಿದ ವೆಸ್ಟ್ ಇಂಡೀಸ್ ತಂಡವು ನಿಕೊಲಸ್ ಪೂರಣ್ 61 ಹಾಗೂ ರೋಮ್ಯಾರಿಯೋ ಶೆಫಾರ್ದ್ ಅವರ 29 ರನ್ ಗಳ ನೆರವಿನಿಂದ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 167 ರನ್ ಗಳನ್ನಷ್ಟೇ ಗಳಿಸಲು ಸಾಧ್ಯವಾಯಿತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.