T20 World Cup 2022:13 ವರ್ಷಗಳ ಸೇಡು ತೀರಿಸಿಕೊಳ್ಳಲು ಅಡಿಲೇಡ್ ತಲುಪಿದ ಟೀಂ ಇಂಡಿಯಾ! ಚುಕ್ತಾ ಆಗುತ್ತಾ ಲೆಕ್ಕ?

T20 World Cup 2022: ಸೂಪರ್ 12 ಅಂತಿಮ ಸುತ್ತಿನಲ್ಲಿ ಜಿಂಬಾಬ್ವೆ ವಿರುದ್ಧ ಅದ್ಭುತ ಪ್ರದರ್ಶನ ತೋರಿದ್ದ ಟೀಂ ಇಂಡಿಯಾ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿದೆ. ಇನ್ನು ಸೆಮಿ ಫೈನಲ್ ನಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿರುವ ಭಾರತ ತನ್ನ 13 ಹಳೆಯ ಸೇಡನ್ನು ತೀರಿಸಿಕೊಳ್ಳಲು ಕಾತುರದಿಂದ ಕಾಯುತ್ತಿದೆ.

Written by - Bhavishya Shetty | Last Updated : Nov 8, 2022, 11:05 AM IST
    • ಸೆಮಿ ಫೈನಲ್ ನಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿರುವ ಭಾರತ
    • ಭಾರತ ತನ್ನ 13 ಹಳೆಯ ಸೇಡನ್ನು ತೀರಿಸಿಕೊಳ್ಳಲು ಕಾತುರದಿಂದ ಕಾಯುತ್ತಿದೆ
    • ಟೀಂ ಇಂಡಿಯಾ ವಿಶ್ವಕಪ್ ಪಂದ್ಯಾವಳಿಯಲ್ಲಿ ಉತ್ತಮ ಫಾರ್ಮ್ ನಲ್ಲಿ ಆಟವಾಡುತ್ತಿದೆ
T20 World Cup 2022:13 ವರ್ಷಗಳ ಸೇಡು ತೀರಿಸಿಕೊಳ್ಳಲು ಅಡಿಲೇಡ್ ತಲುಪಿದ ಟೀಂ ಇಂಡಿಯಾ! ಚುಕ್ತಾ ಆಗುತ್ತಾ ಲೆಕ್ಕ? title=
World Cup Semi Final

T20 World Cup 2022: ಸದ್ಯ ಟಿ20 ವಿಶ್ವಕಪ್ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ಇನ್ನೇನು ಫೈನಲ್ ಹಣಾಹಣಿ ವೀಕ್ಷಿಸಲು ಒಂದು ಹೆಜ್ಜೆ ಬಾಕಿಯಿದೆ ಅಷ್ಟೇ. ಈಗಾಗಲೇ ಸೆಮಿಫೈನಲ್ ಗೆ ನಾಲ್ಕು ತಂಡಗಳು ಅರ್ಹತೆ ಪಡೆದಿದ್ದು, ಅದರಲ್ಲಿ ಟೀಂ ಇಂಡಿಯಾ, ನ್ಯೂಜಿಲ್ಯಾಂಡ್, ಇಂಗ್ಲೆಂಡ್ ಮತ್ತು ಪಾಕಿಸ್ತಾನ ತಂಡಗಳು ಸೇರಿವೆ.

ಸೂಪರ್ 12 ಅಂತಿಮ ಸುತ್ತಿನಲ್ಲಿ ಜಿಂಬಾಬ್ವೆ ವಿರುದ್ಧ ಅದ್ಭುತ ಪ್ರದರ್ಶನ ತೋರಿದ್ದ ಟೀಂ ಇಂಡಿಯಾ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿದೆ. ಇನ್ನು ಸೆಮಿ ಫೈನಲ್ ನಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿರುವ ಭಾರತ ತನ್ನ 13 ಹಳೆಯ ಸೇಡನ್ನು ತೀರಿಸಿಕೊಳ್ಳಲು ಕಾತುರದಿಂದ ಕಾಯುತ್ತಿದೆ.

ಇದನ್ನೂ ಓದಿ: T20 World Cup: ಸೆಮಿಫೈನಲ್ ಪಂದ್ಯದ ‘ಅಂಪೈರ್’ ಪಟ್ಟಿ ಘೋಷಿಸಿದ ಐಸಿಸಿ

ಸದ್ಯ ಟೀಂ ಇಂಡಿಯಾ ವಿಶ್ವಕಪ್ ಪಂದ್ಯಾವಳಿಯಲ್ಲಿ ಉತ್ತಮ ಫಾರ್ಮ್ ನಲ್ಲಿ ಆಟವಾಡುತ್ತಿದೆ. ಅಷ್ಟೇ ಅಲ್ಲದೆ, ತಂಡಕ್ಕೆ ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಮತ್ತು ಕೆ.ಎಲ್ ರಾಹುಲ್ ನೆರವಾಗುತ್ತಿದ್ದಾರೆ. ಬ್ಯಾಟಿಂಗ್ ವಿಭಾಗ ಸುಧಾರಿಸಿದ್ದರೂ ಸಹ ಫೀಲ್ಡಿಂಗ್ ನಲ್ಲಿ ಕೊಂಚ ಎಚ್ಚರಿಕೆ ವಹಿಸಬೇಕಾಗಿದೆ.

ವಿರಾಟ್ ಕೊಹ್ಲಿ ಅವರ ನೆಚ್ಚಿನ ಮೈದಾನಗಳಲ್ಲಿ ಅಡಿಲೇಡ್ ಓವಲ್ ಕೂಡ ಒಂದು. ಈ ಮೈದಾನದಲ್ಲಿ ಕೊಹ್ಲಿ ಭರ್ಜರಿ ಆಟವನ್ನೂ ಆಡಿದ್ದಾರೆ. ಈ ಎಲ್ಲಾ ಅಂಕಿ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಹೇಳುವುದಾದರೆ, ಇಂಗ್ಲೆಂಡ್‌ ವಿರುದ್ಧ 13 ವರ್ಷಗಳ ಹಿಂದಿನ ಸೋಲಿಗೆ ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ಅಖಾಡಕ್ಕಿಳಿಯಲಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್‌ ಸೆಮಿ ಫೈನಲ್ ಪಂದ್ಯವು ನವೆಂಬರ್ 10 ರಂದು ನಡೆಯಲಿದೆ. ಈ ಹಿಂದೆ ಅಡಿಲೇಡ್ ಓವೆಲ್ ನಲ್ಲಿ ಭಾರತ ಮತ್ತು ಬಾಂಗ್ಲಾದೇಶದ ನಡುವೆ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಕೊಹ್ಲಿ 64 ರನ್‌ಗಳ ಇನಿಂಗ್ಸ್‌ ಆಡುವ ಮೂಲಕ ಟೀಂ ಇಂಡಿಯಾಗೆ ಗೆಲುವು ತಂದುಕೊಟ್ಟಿದ್ದರು

13 ವರ್ಷಗಳ ಹಳೆಯ ಸೇಡು ತೀರಿಸಲು ಕಾತುರ:

2007 ರ ಮೊದಲ ಟಿ 20 ವಿಶ್ವಕಪ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಯುವರಾಜ್ ಸಿಂಗ್ ಸ್ಟುವರ್ಟ್ ಬ್ರಾಡ್ ಓವರ್​ನಲ್ಲಿ ಸತತ ಆರು ಸಿಕ್ಸರ್‌ಗಳನ್ನು ಬಾರಿಸಿ ಇತಿಹಾಸ ನಿರ್ಮಿಸಿದ್ದರು. ಜೊತೆಗೆ ಆ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿತ್ತು. ಇದಾದ ಬಳಿಕ 2009ರಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಈ ಎರಡೂ ತಂಡಗಳು ಗ್ರೂಪ್ ಹಂತದಲ್ಲಿ  ಮುಖಾಮುಖಿಯಾಗಿದ್ದು, ಆಗ ಭಾರತ ಸೋಲು ಕಂಡಿತ್ತು.

ಇದನ್ನೂ ಓದಿ: Rohit Sharma Injury: ಸೆಮೀಸ್ ಗೂ ಮುನ್ನ ಟೀಂ ಇಂಡಿಯಾಗೆ ಭಾರೀ ಆಘಾತ: ರೋಹಿತ್ ಶರ್ಮಾಗೆ ಗಾಯ!

ಆ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಇಂಗ್ಲೆಂಡ್ ತಂಡ ಏಳು ವಿಕೆಟ್ ನಷ್ಟಕ್ಕೆ 153 ರನ್ ಬಾರಿಸಿತ್ತು. ಆಂಗ್ಲರು ನೀಡಿದ್ದ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ ಕೇವಲ 150 ರನ್ ಗಳಿಸಲಷ್ಟೇ ಶಕ್ತವಾಯಿತು. ಕೇವಲ ಮೂರು ರನ್ ಅಂತರದಲ್ಲಿ ಸೋಲು ಕಂಡಿದ್ದ ಭಾರತ ಈ ಬಾರಿ ಸೇಡು ತೀರಿಸಿಕೊಳ್ಳಲು ಕಾತುರದಿಂದಿದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News