ವಿಶ್ವಕಪ್‌ಗೂ ಮುನ್ನವೇ ಭಾರತಕ್ಕೆ ಬಿಗ್ ಶಾಕ್! ಈ ಸ್ಟಾರ್ ಆಟಗಾರ ಟೀಂನಿಂದ ಔಟ್

IND vs AUS 3ನೇ ODI:ಮುಂದಿನ ತಿಂಗಳು ಅಕ್ಟೋಬರ್ 5 ರಿಂದ ಪ್ರಾರಂಭವಾಗಲಿದೆ. ಭಾರತವು ಈ ಐಸಿಸಿ ಪಂದ್ಯಾವಳಿಯನ್ನು ಆಯೋಜಿಸುತ್ತಿದ್ದು, ಇದಕ್ಕಾಗಿ ಸಕಲ ಸಿದ್ಧತೆಗಳು ನಡೆಯುತ್ತಿವೆ.

Written by - Ranjitha R K | Last Updated : Sep 25, 2023, 03:04 PM IST
  • ತಂಡದ ಸ್ಟಾರ್ ಆಟಗಾರ ಔಟ್
  • ಏಷ್ಯಾಕಪ್‌ನಲ್ಲಿ ಗಾಯಗೊಂಡಿದ್ದ ಅಕ್ಷರ್ ಪಟೇಲ್‌
  • ಈಗಾಗಲೇ ಸ್ಪಷ್ಟನೆ ನೀಡಿದ ಬಿಸಿಸಿಐ
ವಿಶ್ವಕಪ್‌ಗೂ ಮುನ್ನವೇ ಭಾರತಕ್ಕೆ ಬಿಗ್ ಶಾಕ್! ಈ ಸ್ಟಾರ್ ಆಟಗಾರ ಟೀಂನಿಂದ ಔಟ್  title=

IND vs AUS 3ನೇ ODI : ODI ವಿಶ್ವಕಪ್ ((ODI World Cup-2023) ಮುಂದಿನ ತಿಂಗಳು ಅಕ್ಟೋಬರ್ 5 ರಿಂದ ಪ್ರಾರಂಭವಾಗಲಿದೆ. ಭಾರತವು ಈ ಐಸಿಸಿ ಪಂದ್ಯಾವಳಿಯನ್ನು ಆಯೋಜಿಸುತ್ತಿದ್ದು, ಇದಕ್ಕಾಗಿ ಸಕಲ ಸಿದ್ಧತೆಗಳು ನಡೆಯುತ್ತಿವೆ. ಪ್ರಸ್ತುತ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 3 ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದೆ. ಈ ಸರಣಿಯ ಮೂರನೇ ಪಂದ್ಯ ಸೆಪ್ಟೆಂಬರ್ 27 ರಂದು ರಾಜ್‌ಕೋಟ್‌ನ SCA ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಭಾರತ ಕ್ರಿಕೆಟ್ ತಂಡ ದೊಡ್ಡ ಹಿನ್ನಡೆ ಅನುಭವಿಸಿದೆ.

ತಂಡದ ಸ್ಟಾರ್ ಆಟಗಾರ ಔಟ್ : 
ರಾಜ್‌ಕೋಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೂರನೇ ಮತ್ತು ಅಂತಿಮ ODI(IND vs AUS 3rd ODI)ನಿಂದ ಭಾರತದ ಆಲ್‌ರೌಂಡರ್ ಅಕ್ಷರ್ ಪಟೇಲ್ ಹೊರಗುಳಿದಿದ್ದಾರೆ. ವಿಶ್ವಕಪ್‌ಗೂ ಮುನ್ನ ಫಿಟ್‌ನೆಸ್ ಸಾಬೀತುಪಡಿಸಲು ಅಕ್ಷರ್ ಪಟೇಲ್‌ಗೆ ಇದು ಕೊನೆಯ ಅವಕಾಶವಾಗಿತ್ತು. ಇದರ ನಂತರ, ಭಾರತ ತಂಡ ಅಕ್ಟೋಬರ್ 8 ರಂದು ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾವನ್ನು ನೇರವಾಗಿ ಎದುರಿಸಲಿದೆ. ಅಕ್ಷರ್ ವಿಶ್ವಕಪ್ 2023 ತಂಡದ ಭಾಗವಾಗಿದ್ದಾರೆ. ಆದರೆ ಅವರು ಗಾಯದಿಂದ ಇನ್ನೂ ಚೇತರಿಸಿಕೊಂಡಿಲ್ಲ.

ಇದನ್ನೂ ಓದಿ : ಭಾರತದ ಸ್ಪಿನ್​ ಮೋಡಿಗೆ ಆಸಿಸ್‌ 217 ರನ್‌ಗೆ ಆಲೌಟ್‌

ಏಷ್ಯಾಕಪ್‌ನಲ್ಲಿ ಗಾಯಗೊಂಡಿದ್ದ ಅಕ್ಷರ್ ಪಟೇಲ್‌ :
2023 ರ ಏಷ್ಯಾಕಪ್ ಸಮಯದಲ್ಲಿ ಅಕ್ಷರ್ ಪಟೇಲ್ ಗಾಯಗೊಂಡಿದ್ದರು.  ಗಾಯದ ಕಾರಣದಿಂದಾಗಿ ಅವರು ಅಂತಿಮ ಪಂದ್ಯವನ್ನು ಆಡುವುದು  ಸಾಧ್ಯವಾಗಲಿಲ್ಲ. ಅಕ್ಷರ್ ಇನ್ನು ಕೂಡಾ ಗಾಯದಿಂದ ಚೇತರಿಸಿಕೊಳ್ಳಲು ಸಾಧ್ಯವಾಗಿಲ್ಲ. ಈ ಕಾರಣದಿಂದಾಗಿ  ಅವರು ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಕೊನೆಯ ಪಂದ್ಯದಿಂದ ಹೊರಗುಳಿದಿದ್ದಾರೆ. ಕ್ರಿಕ್‌ಬಝ್‌ನ ವರದಿ ಪ್ರಕಾರ, ಅಕ್ಷರ್ ಫಿಟ್ ಆಗದೆ ಇರುವ ಕಾರಣ  ಮೂರನೇ ODI ನಲ್ಲಿ ಆಡಲು ಸಾಧ್ಯವಾಗುವುದಿಲ್ಲ.

ಈಗಾಗಲೇ ಸ್ಪಷ್ಟನೆ ನೀಡಿದ ಬಿಸಿಸಿಐ  : 
ಏಷ್ಯನ್ ಕಪ್-2023ರ ಫೈನಲ್ ಪಂದ್ಯದಲ್ಲಿ ಅಕ್ಷರ್ ಪಟೇಲ್ ಬದಲಿಗೆ ವಾಷಿಂಗ್ಟನ್ ಸುಂದರ್‌ಗೆ ಅವಕಾಶ ನೀಡಲಾಗಿದೆ. ಆಸ್ಟ್ರೇಲಿಯಾ ವಿರುದ್ಧದ ODI ಸರಣಿಯ ಮೊದಲ ಎರಡು ಪಂದ್ಯಗಳಿಗೂ ಅಕ್ಷರ್ ಪಟೇಲ್  ಲಭ್ಯವಿರಲಿಲ್ಲ. ಬಿಸಿಸಿಐ ಸರಣಿಗೆ ತಂಡವನ್ನು ಪ್ರಕಟಿಸಿದಾಗ ಅಕ್ಷರ್ ಸಂಪೂರ್ಣ ಫಿಟ್‌ನೆಸ್ ಮರಳಿದ ನಂತರವೇ ಮೂರನೇ ಪಂದ್ಯದಲ್ಲಿ ಆಡಲು ಸಾಧ್ಯವಾಗುತ್ತದೆ ಎನ್ನುವುದನ್ನು ಸ್ಪಷ್ಟಪಡಿಸಿತ್ತು. 

ಇದನ್ನೂ ಓದಿ : ವಿಶ್ವಕಪ್’ನಲ್ಲಿ ನಂ.3ನೇ ಕ್ರಮಾಂಕದಲ್ಲಿ ಭಾರತದ ಪರ ಬ್ಯಾಟಿಂಗ್ ಮಾಡೋದು ವಿರಾಟ್ ಅಲ್ಲ… ಬದಲಿಗೆ ಈ ಆಟಗಾರ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News