ಕೊಲ್ಕತ್ತಾ: ಇಲ್ಲಿನ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಹೊನಲು ಬೆಳಕಿನ ಪಿಂಕ್ ಬಾಲ್ ಕ್ರಿಕೆಟ್ ಟೆಸ್ಟ್ ಪಂದ್ಯದಲ್ಲಿ ಭಾರತ ಭರ್ಜರಿ ಆರಂಭವನ್ನು ಕಂಡಿದೆ.


COMMERCIAL BREAK
SCROLL TO CONTINUE READING

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಬಾಂಗ್ಲಾದೇಶದ ತಂಡವು ಭಾರತ ತಂಡದ ಮಾರಕ ಬೌಲಿಂಗ್ ದಾಳಿಗೆ ತತ್ತರಿಸುವ ಮೂಲಕ 106 ರನ್ ಗಳಿಗೆ ಸರ್ವಪತನ ಕಂಡಿತು.ಭಾರತದ ಪರವಾಗಿ ಇಶಾಂತ್ ಶರ್ಮಾ ಐದು ವಿಕೆಟ್ ಕಬಳಿಸುವ ಮೂಲಕ ಬಾಂಗ್ಲಾ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದರು. ಇವರಿಗೆ ಸಾಥ್ ನೀಡಿದ ಉಮೇಶ್ ಯಾದವ್ 3, ಹಾಗೂ ಮೊಹಮ್ಮದ್ ಶಮಿ 2 ವಿಕೆಟ್ ಗಳನ್ನು ಪಡೆದರು.



ತನ್ನ ಮೊದಲ ಇನಿಂಗ್ಸ್ ಆರಂಭಿಸಿದ ಭಾರತ ತಂಡವು 26 ರನ್ ಗಳಾಗುವಷ್ಟರಲ್ಲಿ ಮಾಯಂಕ್ ಅಗರವಾಲ್ ವಿಕೆಟ್ ಕಳೆದುಕೊಂಡಿತು. ಇದಾದ ಬೆನ್ನಲ್ಲೇ ರೋಹಿತ್ ಶರ್ಮಾ ಕೂಡ ನಿರ್ಗಮಿಸಿದರು. ನಂತರ ಚೇತೆಶ್ವರ್ ಪೂಜಾರ್ ಅವರು 55 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನೊಂದೆಡೆ ತಂಡದ ನಾಯಕ ವಿರಾಟ್ ಕೊಹ್ಲಿ ಸದ್ಯ ಕ್ರಿಸ್ ನಲ್ಲಿದ್ದು 59 ರನ್ ಹಾಗೂ ಅಜಿಂಕ್ಯಾ ರಹಾನೆ 23 ರನ್ ಗಳಿಸಿ ಆಟವಾಡುತ್ತಿದ್ದಾರೆ. ಭಾರತ ತಂಡವು ದಿನದಾಂತ್ಯಕ್ಕೆ ಮೂರು ವಿಕೆಟ್ ನಷ್ಟಕ್ಕೆ 174 ರನ್ ಗಳಿಸುವ ಮೂಲಕ ಮೊದಲ ದಿನವೇ 68 ರನ್ ಗಳ ಮುನ್ನಡೆಯನ್ನು ಕಾಯ್ದುಕೊಂಡಿದೆ.