World Cup 2023 ರಲ್ಲಿ ಈ Playing 11 ಆಡಿದರೆ.. ಭಾರತ ವಿಶ್ವ ಚಾಂಪಿಯನ್ ಆಗೋದು ನಿಸ್ಸಂಶಯ!!
World Cup 2023 Team India Playing 11 : ಟೀಂ ಇಂಡಿಯಾ ತನ್ನ ತವರಿನ ಪರಿಸ್ಥಿತಿಯ ಲಾಭವನ್ನು ಪಡೆಯಲು ಮತ್ತು 2023 ರ ವಿಶ್ವಕಪ್ ಗೆಲ್ಲಲು ಬಯಸಿದರೆ, ಅದು ಪ್ರತಿ ಪಂದ್ಯದಲ್ಲೂ ಈ Playing 11 ಆಟಗಾರರನ್ನು ಕಣಕ್ಕಿಳಿಸುವ ಅಗತ್ಯವಿದೆ.
ODI World Cup 2023: ವಿಶ್ವಕಪ್ 2023 ಅಕ್ಟೋಬರ್ 5 ರಿಂದ ಭಾರತದಲ್ಲಿ ಆರಂಭವಾಗಲಿದ್ದು, ನವೆಂಬರ್ 19 ರಂದು ಫೈನಲ್ ಪಂದ್ಯ ನಡೆಯಲಿದೆ. 2023ರ ವಿಶ್ವಕಪ್‌ನಲ್ಲಿ ಭಾರತ ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ಅಕ್ಟೋಬರ್ 14 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ರೋಚಕ ಪಂದ್ಯ ನಡೆಯಲಿದೆ. 12 ವರ್ಷಗಳ ಹಿಂದೆ ತವರಿನಲ್ಲಿ ಆಡಿದ 2011ರ ವಿಶ್ವಕಪ್‌ನಲ್ಲಿ ಭಾರತ ಪ್ರಶಸ್ತಿ ಗೆದ್ದಿತ್ತು. ಅಂತಹ ಪರಿಸ್ಥಿತಿಯಲ್ಲಿ, ಈ ಬಾರಿ 2023 ರ ವಿಶ್ವಕಪ್ ಪ್ರಶಸ್ತಿಯನ್ನು ಗೆಲ್ಲುವ ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿದೆ. ಈ ಬಾರಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಐಸಿಸಿ ಟ್ರೋಫಿ ಗೆಲ್ಲುವ ತನ್ನೆಲ್ಲ ಪ್ರಯತ್ನ ಮಾಡಲಿದೆ.
ಇದನ್ನೂ ಓದಿ: ವಿಶ್ವಕಪ್ ತಂಡದಿಂದ ಹೊರಗುಳಿದ ಯುಜ್ವೇಂದ್ರ ಚಹಾಲ್.. ನೋವಿನಿಂದ ಈ ರೀತಿ ಹೇಳಿದ್ದೇಕೆ?
ವಿಶ್ವಕಪ್ 2023 ರ ಸಮಯದಲ್ಲಿ, ಭಾರತೀಯ ಪಿಚ್‌ಗಳು ಸ್ಪಿನ್ ಬೌಲರ್‌ಗಳಿಗೆ ಸಹಾಯ ಮಾಡುತ್ತದೆ. ಬ್ಯಾಟಿಂಗ್‌ಗೆ ಸಹ ಅತ್ಯುತ್ತಮವಾಗಿರುತ್ತದೆ. ಟೀಂ ಇಂಡಿಯಾ ತನ್ನ ತವರಿನ ಪರಿಸ್ಥಿತಿಯ ಲಾಭವನ್ನು ಪಡೆಯಲು ಮತ್ತು 2023 ರ ವಿಶ್ವಕಪ್ ಗೆಲ್ಲಲು ಬಯಸಿದರೆ, ಅದು ಪ್ರತಿ ಪಂದ್ಯದಲ್ಲೂ ಈ Playing 11 ಆಟಗಾರರನ್ನು ಕಣಕ್ಕಿಳಿಸುವ ಅಗತ್ಯವಿದೆ. 2023 ರ ವಿಶ್ವಕಪ್ ಟ್ರೋಫಿಯನ್ನು ಗೆಲ್ಲಬಹುದಾದ ಟೀಂ ಇಂಡಿಯಾದ ಅತ್ಯುತ್ತಮ ಪ್ಲೇಯಿಂಗ್ ಇಲೆವೆನ್ ಅನ್ನು ನೋಡೋಣ.
ಟೀಂ ಇಂಡಿಯಾ ಶುಭಮನ್ ಗಿಲ್ ಮತ್ತು ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಲಿದೆ. ಟೀಂ ಇಂಡಿಯಾದ ಬಲಿಷ್ಠ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ 3ನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಶ್ರೇಯಸ್ ಅಯ್ಯರ್ 4ನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬರಲಿದ್ದಾರೆ. ಆಲ್ ರೌಂಡರ್ ಆಗಿ ಟೀಂ ಇಂಡಿಯಾ ಉಪನಾಯಕ ಹಾರ್ದಿಕ್ ಪಾಂಡ್ಯ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ಡೇಂಜರಸ್ ಮ್ಯಾಚ್ ಫಿನಿಶರ್ ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಬರಲಿದ್ದಾರೆ. ರವೀಂದ್ರ ಜಡೇಜಾ ತಮ್ಮ ಸ್ಫೋಟಕ ಬ್ಯಾಟಿಂಗ್ ಮತ್ತು ಮಾರಕ ಎಡಗೈ ಸ್ಪಿನ್ ಬೌಲಿಂಗ್‌ನಿಂದ ಟೀಂ ಇಂಡಿಯಾವನ್ನು ಬಲಪಡಿಸಲಿದ್ದಾರೆ.
ಇದನ್ನೂ ಓದಿ: ವಿಶ್ವಕಪ್’ಗೂ ಮುನ್ನ ಅಂತರಾಷ್ಟ್ರೀಯ ಕ್ರಿಕೆಟ್’ಗೆ ನಿವೃತ್ತಿ ಘೋಷಿಸಿದ 33ರ ಹರೆಯದ ಸ್ಟಾರ್ ವಿಕೆಟ್ ಕೀಪರ್!
ರವಿಚಂದ್ರನ್ ಅಶ್ವಿನ್ 2023ರ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ Playing 11 ರಲ್ಲಿ ಸ್ಪಿನ್ನರ್ ಆಗಿ ಆಯ್ಕೆಯಾಗುವುದು ಖಚಿತವಾಗಿದೆ. ರವಿಚಂದ್ರನ್ ಅಶ್ವಿನ್ ಅವರು ಸ್ಪಿನ್ ಬೌಲಿಂಗ್‌ನಲ್ಲಿ ಹಲವು ಮಾರ್ಪಾಡುಗಳನ್ನು ಹೊಂದಿದ್ದಾರೆ. ರವಿಚಂದ್ರನ್ ಅಶ್ವಿನ್ 2023ರ ವಿಶ್ವಕಪ್‌ನಲ್ಲಿ ಎದುರಾಳಿ ತಂಡಕ್ಕೆ ದುಸ್ವಪ್ನರಾಗಬಲ್ಲರು ಎಂದು ಊಹಿಸಲಾಗಿದೆ. ವೇಗದ ಬೌಲರ್‌ಗಳ ಪೈಕಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ Playing 11 ರಲ್ಲಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
ಇದು 2023 ರ ವಿಶ್ವಕಪ್‌ನಲ್ಲಿ ಭಾರತದ Playing 11 ಆಗಬಹುದು :
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.