WI ವಿರುದ್ಧದ ಮೊದಲ T20 ಗೆ ಟೀಂ ಇಂಡಿಯಾ Playing 11 ರೆಡಿ: ಈ ಲೆಗ್ ಸ್ಪಿನ್ನರ್’ಗೆ ಮತ್ತೆ ಅವಕಾಶ ನೀಡದ ಸಮಿತಿ!

IND vs WI 1st T20 Predicted playing 11: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11 ಬಹುತೇಕ ಫಿಕ್ಸ್ ಆಗಿದೆ. ಆಗಸ್ಟ್ 3ರ ರಾತ್ರಿ 8 ಗಂಟೆಗೆ ಪೋರ್ಟ್ ಆಫ್ ಸ್ಪೇನ್ (ಟ್ರಿನಿಡಾಡ್) ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯಲಿದೆ.

Written by - Bhavishya Shetty | Last Updated : Aug 2, 2023, 01:47 PM IST
    • ಟಿ20 ಪಂದ್ಯಕ್ಕೆ ಟೀಂ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11 ಬಹುತೇಕ ಫಿಕ್ಸ್ ಆಗಿದೆ
    • ಮೊದಲ ಪಂದ್ಯ 3ರ ರಾತ್ರಿ 8 ಗಂಟೆಗೆ ಟ್ರಿನಿಡಾಡ್ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯಲಿದೆ
    • ಹಾರ್ದಿಕ್ ಪಾಂಡ್ಯ ಈ ಸರಣಿಯಲ್ಲಿ ಟೀಂ ಇಂಡಿಯಾ ನಾಯಕತ್ವ ವಹಿಸಲಿದ್ದಾರೆ.
WI ವಿರುದ್ಧದ ಮೊದಲ T20 ಗೆ ಟೀಂ ಇಂಡಿಯಾ Playing 11 ರೆಡಿ: ಈ ಲೆಗ್ ಸ್ಪಿನ್ನರ್’ಗೆ ಮತ್ತೆ ಅವಕಾಶ ನೀಡದ ಸಮಿತಿ!  title=
India Probable Playing XI

IND vs WI 1st T20 Predicted playing 11: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಐದು ಪಂದ್ಯಗಳ T20 ಅಂತಾರಾಷ್ಟ್ರೀಯ ಸರಣಿಯ ಮೊದಲ ಪಂದ್ಯ ನಾಳೆ ಅಂದರೆ ಆಗಸ್ಟ್ 3ರ ರಾತ್ರಿ 8 ಗಂಟೆಗೆ ಪೋರ್ಟ್ ಆಫ್ ಸ್ಪೇನ್ (ಟ್ರಿನಿಡಾಡ್) ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯಲಿದೆ. ಹಾರ್ದಿಕ್ ಪಾಂಡ್ಯ ವೆಸ್ಟ್ ಇಂಡೀಸ್ ವಿರುದ್ಧ ಈ ಟಿ20 ಅಂತಾರಾಷ್ಟ್ರೀಯ ಸರಣಿಯಲ್ಲಿ ಟೀಂ ಇಂಡಿಯಾ ನಾಯಕತ್ವ ವಹಿಸಲಿದ್ದಾರೆ.

ಇದನ್ನೂ ಓದಿ: ಕ್ಯಾಬ್ ನಲ್ಲಿ ಪರ್ಸನಲ್ ವಿಚಾರ ಮಾತನಾಡಿ 22 ಲಕ್ಷ ಕಳೆದುಕೊಂಡ ಮಹಿಳೆ..!

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11 ಬಹುತೇಕ ಫಿಕ್ಸ್ ಆಗಿದೆ. ನಾಯಕ ಹಾರ್ದಿಕ್ ಪಾಂಡ್ಯ ಕೆಲವು ಆಟಗಾರರನ್ನು ಈ ಪಂದ್ಯದಿಂದ ಹೊರಗಿಡುವ ಸಾಧ್ಯತೆ ಇದೆ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತದ ಸಂಭಾವ್ಯ ಪ್ಲೇಯಿಂಗ್ XI ಹೇಗಿದೆ ಎಂದು ನೋಡೋಣ.

ಆರಂಭಿಕರು: 

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ, ವಿಕೆಟ್ ಕೀಪರ್ ಕಂ ಬ್ಯಾಟ್ಸ್‌ಮನ್‌ ಇಶಾನ್ ಕಿಶನ್ ಮತ್ತು ಶುಭ್ಮನ್ ಗಿಲ್ ಓಪನಿಂಗ್ ಮಾಡಲಿದ್ದಾರೆ. ಇಶಾನ್ ಕಿಶನ್ ಮತ್ತು ಶುಭ್ಮನ್ ಗಿಲ್ ಜೋಡಿ ತುಂಬಾ ಅಪಾಯಕಾರಿ ಮತ್ತು ಈ ಇಬ್ಬರೂ ಬ್ಯಾಟ್ಸ್‌ಮನ್‌ ಗಳು ಪವರ್-ಪ್ಲೇನಲ್ಲಿ ತೀವ್ರವಾಗಿ ರನ್ ಲೂಟಿ ಮಾಡುವಲ್ಲಿ ಪ್ರವೀಣರಾಗಿದ್ದಾರೆ. ಹೀಗಿರುವಾಗ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಅವರನ್ನು ಹೊರಗಿಡುವ ಸಾಧ್ಯತೆ ಇದೆ.

ಮಧ್ಯಮ ಕ್ರಮಾಂಕ:

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಉಪನಾಯಕ ಸೂರ್ಯಕುಮಾರ್ ಯಾದವ್ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಗೆ ಬರಬಹುದು. ಇತ್ತೀಚಿನ ದಿನಗಳಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ನಲ್ಲಿ ಅಬ್ಬರಿಸುತ್ತಿದ್ದಾರೆ. ಇನ್ನು  ತಿಲಕ್ ವರ್ಮಾ 4 ನೇ ಬ್ಯಾಟ್ಸ್‌ಮನ್ ಆಗಿ ಪ್ಲೇಯಿಂಗ್ ಇಲೆವೆನ್‌ನಲ್ಲಿ ಅವಕಾಶ ನೀಡಬಹುದು. ಹೀಗಿರುವಾಗ ಸಂಜು ಸ್ಯಾಮ್ಸನ್‌ ಗೆ ಪ್ಲೇಯಿಂಗ್ XI ನಲ್ಲಿ ಸ್ಪೆಷಲಿಸ್ಟ್ ಬ್ಯಾಟ್ಸ್‌ಮನ್ ಆಗಿ 5 ನೇ ಸ್ಥಾನದಲ್ಲಿ ಅವಕಾಶ ನೀಡಬಹುದು.

ಆಲ್’ರೌಂಡರ್‌:

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ಆಲ್ ರೌಂಡರ್ ಆಗಿ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬಹುದು. 7 ನೇ ಕ್ರಮಾಂಕದ ಬ್ಯಾಟಿಂಗ್ ಸ್ಥಾನದಲ್ಲಿ ಅಕ್ಷರ್ ಪಟೇಲ್‌ ಗೆ ಅವಕಾಶ ನೀಡಿದರೆ, ಸ್ಪಿನ್ ಬೌಲಿಂಗ್‌ ಎದುರಿಸಿ ಟೀಂ ಇಂಡಿಯಾದ ಬ್ಯಾಟಿಂಗ್‌ ನ್ನು ಬಲಪಡಿಸಬಹುದು.

ಸ್ಪಿನ್ ಬೌಲಿಂಗ್ ವಿಭಾಗ:

ಸ್ಪಿನ್ ಬೌಲಿಂಗ್ ವಿಭಾಗದಲ್ಲಿ ಅಕ್ಷರ್ ಪಟೇಲ್ ಮತ್ತು ಕುಲದೀಪ್ ಯಾದವ್ ಸೇರ್ಪಡೆಯಾಗಲಿದ್ದಾರೆ. ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಮತ್ತು ಚೈನಾಮನ್ ಸ್ಪಿನ್ನರ್ ಕುಲದೀಪ್ ಯಾದವ್ ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್‌ಗೆ ದೊಡ್ಡ ಆಘಾತ ನೀಡುವುದು ಮಾತ್ರ ಖಚಿತ. ನಾಯಕ ಹಾರ್ದಿಕ್ ಪಾಂಡ್ಯ ಪ್ಲೇಯಿಂಗ್ XI ನಿಂದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಮತ್ತು ರವಿ ಬಿಷ್ಣೋಯ್ ಅವರನ್ನು ಹೊರಗಿಡಲಿದ್ದಾರೆ.

ವೇಗಿಗಳು:

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ವೇಗಿ ಅರ್ಷದೀಪ್ ಸಿಂಗ್, ಅವೇಶ್ ಖಾನ್ ಮತ್ತು ಮುಖೇಶ್ ಕುಮಾರ್ ಅವರಿಗೆ ಅವಕಾಶ ನೀಡಲಿದ್ದಾರೆ. ನಾಯಕ ಹಾರ್ದಿಕ್ ಪಾಂಡ್ಯ ವೇಗದ ಬೌಲರ್ ಉಮ್ರಾನ್ ಮಲಿಕ್ ಅವರನ್ನು ಹೊರಗಿಡಬಹುದು.

ಮೊದಲ ಟಿ20 ಪಂದ್ಯಕ್ಕೆ ಭಾರತದ ಸಂಭಾವ್ಯ ಆಟಗಾರರ XI

ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ಉಪನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಶ್ದೀಪ್ ಸಿಂಗ್, ಅವೇಶ್ ಖಾನ್ ಮತ್ತು ಮುಖೇಶ್ ಕುಮಾರ್.

ಭಾರತ vs ವೆಸ್ಟ್ ಇಂಡೀಸ್ ಟಿ20 ಸರಣಿ

  • 1ನೇ ಟಿ20 ಪಂದ್ಯ, ಆಗಸ್ಟ್ 3, ರಾತ್ರಿ 8.00, ಟ್ರಿನಿಡಾಡ್
  • 2ನೇ ಟಿ20 ಪಂದ್ಯ, ಆಗಸ್ಟ್ 6, ರಾತ್ರಿ 8.00, ಗಯಾನಾ
  • 3ನೇ ಟಿ20 ಪಂದ್ಯ, ಆಗಸ್ಟ್ 8, ರಾತ್ರಿ 8.00, ಗಯಾನಾ
  • 4ನೇ ಟಿ20 ಪಂದ್ಯ, ಆಗಸ್ಟ್ 12, ರಾತ್ರಿ 8.00, ಫ್ಲೋರಿಡಾ
  • ಐದನೇ ಟಿ20 ಪಂದ್ಯ, ಆಗಸ್ಟ್ 13, ರಾತ್ರಿ 8.00, ಫ್ಲೋರಿಡಾ

ಇದನ್ನೂ ಓದಿ: ಏಕದಿನ ಸರಣಿಯ ಎಲ್ಲಾ 3 ಪಂದ್ಯಗಳಲ್ಲಿ ಅರ್ಧಶತಕ ಸಿಡಿಸಿದ ಕ್ರಿಕೆಟಿಗ ಯಾರು? ಕೊಹ್ಲಿ, ರೋಹಿತ್ ಅಲ್ಲವೇ ಅಲ್ಲ…

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News