ಕೋಲ್ಕತಾ: ಇಲ್ಲಿನ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿರುವ ಕ್ರಿಕೆಟ್ ಮೊದಲ ಟೆಸ್ಟ್‌ ಪಂದ್ಯದ ಎರಡನೇ ಇನ್ನಿಂಗ್ಸ್‌ನ ನಾಲ್ಕನೇ ದಿನದಾಟದ ಅಂತ್ಯಕ್ಕೆ ಶ್ರೀಲಂಕಾ ವಿರುದ್ಧ ಭಾರತ 1 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿದ್ದು 49 ರನ್ ಗಳ ಮುನ್ನಡೆ ಸಾಧಿಸುವ ಮೂಲಕ ಭಾರತೀಯ ಓಪನರ್‌ಗಳು ಮೆಚ್ಚುಗೆಗೆ ಪಾತ್ರವಾಗಿದ್ದಾರೆ.


COMMERCIAL BREAK
SCROLL TO CONTINUE READING

ಎರಡನೇ ಇನ್ನಿಂಗ್ಸ್ ಆರಂಭಿಸಿದ ಶಿಖರ್ ಧವನ್ ಮತ್ತು ಕೆಎಲ್ ರಾಹುಲ್ ಮೊದಲ ವಿಕೆಟ್‌ಗೆ 166 ರನ್‌ಗಳ ಜತೆಯಾಟ ನೀಡಿ ಉತ್ತಮ ಬುನಾದಿ ಹಾಕಿಕೊಟ್ಟರು. ಇದರಿಂದಾಗಿ ನಾಲ್ಕನೇ ದಿನದಂತ್ಯಕ್ಕೆ ಭಾರತ 49 ರನ್‌ಗಳ ಮಹತ್ವದ ಮುನ್ನಡೆ ದಾಖಲಿಸುವಂತಾಯಿತು. 


ಮೊದಲ ಇನ್ನಿಂಗ್ಸ್ನಲ್ಲಿ ಭಾರತ 172 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಇನ್ನಿಂಗ್ಸ್ ಪ್ರಾರಂಭಿಸಿದ ಶ್ರೀಲಂಕಾ ತಂಡ 294 ರನ್ ಗಳಿಗೆ ಆಲ್ ಔಟ್ ಆಗಿತ್ತು. ಇದರೊಂದಿಗೆ ಭಾರತದ ವಿರುದ್ಧ 122 ರನ್ ಗಳ ಪ್ರಥಮ ಇನ್ನಿಂಗ್ಸ್ ಮುನ್ನಡೆ ಸಾಧಿಸಿತು. 


ಸದ್ಯ ಕ್ರೀಸ್ನಲ್ಲಿ 73 ರನ್ ಗಳಿಸಿರುವ ಕೆ.ಎಲ್.ರಾಹುಲ್ ಹಾಗೂ 2 ರನ್ ಗಳಿಸಿ ಚೇತೇಶ್ವರ ಪೂಜಾರ್ ಇದ್ದು, ಐದನೇ ದಿನದಾಟವನ್ನು ಪ್ರಾರಂಭಿಸಲಿದ್ದಾರೆ.