Axar Patel Married To Meha Patel: ಭಾರತ ತಂಡದ ಸ್ಟಾರ್ ಆಲ್ ರೌಂಡರ್ ಅಕ್ಷರ್ ಪಟೇಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಕ್ಷರ್ ತನ್ನ ಪ್ರೇಯಸಿ ಮೇಹಾ ಪಟೇಲ್ ಜೊತೆ ಸಪ್ತಪದಿ ತುಳಿದಿದ್ದು, ಇದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇಬ್ಬರ ನಿಶ್ಚಿತಾರ್ಥ ಕಳೆದ ವರ್ಷ ನಡೆದಿತ್ತು. ಅಕ್ಷರ್ ವಾದ್ಯಮೇಳಗಳ ಮೆರವಣಿಗೆಯೊಂದಿಗೆ ಮೇಹಾ ಅವರನ್ನು ಕರೆದುಕೊಂಡು ಮಂಟಪಕ್ಕೆ ಆಗಮಿಸಿದ್ದಾರೆ. ಮದುವೆಯ ಅಪೂರ್ವ ಕ್ಷಣಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ.  


COMMERCIAL BREAK
SCROLL TO CONTINUE READING

ಇದನ್ನೂ ಓದಿ: Team Indiaದ ಡ್ರೆಸ್ಸಿಂಗ್ ರೂಂಗೆ ವಿಶ್ವದ ಅಪಾಯಕಾರಿ ಕ್ರಿಕೆಟಿಗನ ದಿಢೀರ್ ಎಂಟ್ರಿ! ಭಯದಲ್ಲಿ ನ್ಯೂಜಿಲೆಂಡ್


ಅಕ್ಷರ್ ಪಟೇಲ್ ಅವರು ಮೇಹಾ ಪಟೇಲ್ ಅವರನ್ನು ವಿವಾಹವಾಗಿದ್ದಾರೆ. ಮೇಹಾ ವೃತ್ತಿಯಲ್ಲಿ ಪೌಷ್ಟಿಕತಜ್ಞೆ ಮತ್ತು ಆಹಾರ ತಜ್ಞೆ. ಅವರು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸಕ್ರಿಯರಾಗಿದ್ದಾರೆ. ಅವರು ಹಂಚಿಕೊಂಡಿರುವ ಫೋಟೋಗಳನ್ನು ಅಭಿಮಾನಿಗಳು ತುಂಬಾ ಇಷ್ಟಪಡುತ್ತಾರೆ. ಈಗ ಅಕ್ಷರ್ ಪಟೇಲ್ ಜೊತೆ ಮೇಹಾ ಸಪ್ತಪದಿ ತುಳಿಯುವ ವೀಡಿಯೊ ವೈರಲ್ ಆಗಿದೆ. ಮೇಹಾ ಪಟೇಲ್ ಬಿಳಿ ಬಣ್ಣದ ಲೆಹೆಂಗಾ ಧರಿಸಿದ್ದಾರೆ. ಮತ್ತೊಂದೆಡೆ, ಅಕ್ಷರ್ ಬಿಳಿ ಬಣ್ಣದ ಶೇರ್ವಾನಿಯಲ್ಲಿ ತುಂಬಾ ಚೆನ್ನಾಗಿ ಕಾಣುತ್ತಿದ್ದಾರೆ.


ಕೆಎಲ್ ರಾಹುಲ್ ಬೆನ್ನಲ್ಲೇ ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಟೀಂ ಇಂಡಿಯಾದ ಈ ಸ್ಟಾರ್ ಆಲ್ ರೌಂಡರ್!


ಇನ್ನು ನ್ಯೂಜಿಲೆಂಡ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಯಿಂದ ಅಕ್ಷರ್ ಪಟೇಲ್ ವಿರಾಮ ತೆಗೆದುಕೊಂಡಿದ್ದಾರೆ. ಕಿಲ್ಲರ್ ಬೌಲಿಂಗ್ ಮತ್ತು ಡ್ಯಾಶಿಂಗ್ ಬ್ಯಾಟಿಂಗ್‌ನಲ್ಲಿ ಪರಿಣತಿ ಹೊಂದಿರುವ ಅಕ್ಷರ್, ಕೆಲವೇ ಎಸೆತಗಳಲ್ಲಿ ಪಂದ್ಯದ ಗತಿಯನ್ನೇ ಬದಲಿಸುವ ಸಾಮರ್ಥ್ಯ ಅವರಿಗಿದೆ. ಅಕ್ಷರ್ ಪಟೇಲ್ ಟೀಂ ಇಂಡಿಯಾ ಪರ 8 ಟೆಸ್ಟ್, 49 ODI ಮತ್ತು 40 ಅಂತರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು ಕ್ರಮವಾಗಿ 47, 56 ಮತ್ತು 37 ವಿಕೆಟ್ ಪಡೆದಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.