India vs Australia ಏಕದಿನ ಪಂದ್ಯ: ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ

 ಟೆಸ್ಟ್ ಸರಣಿಯಲ್ಲಿ ಸೋಲನುಭವಿಸಿದ್ದ ಆಸ್ಟ್ರೇಲಿಯಾ ತಂಡ ಈ ಬಾರಿ ಏಕದಿನ ಪಂದ್ಯ ಸರಣಿಯನ್ನು ಗೆಲ್ಲಲೇಬೇಕೆಂಬ ಛಲದಲ್ಲಿ ಕಣಕ್ಕಿಳಿದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

Updated: Jan 12, 2019 , 09:03 AM IST
India vs Australia ಏಕದಿನ ಪಂದ್ಯ: ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ

ಸಿಡ್ನಿ: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯ ಇಂದು ಸಿಡ್ನಿಯಲ್ಲಿ ಆರಂಭವಾಗಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಇತ್ತೀಚೆಗಷ್ಟೇ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಗೆದ್ದು ದಾಖಲೆ ನಿರ್ಮಿಸಿರುವ ಭಾರತ ತಂಡ, ಟಾಸ್'ನಲ್ಲಿ ಸೋತು ಫೀಲ್ಡಿಂಗ್ ಮಾಡುತ್ತಿದೆ. ಈ ಬಾರಿಯೂ ಮೂರು ದಿನಗಳ ಏಕದಿನ ಪಂದ್ಯದಲ್ಲಿ ಆಸಿಸ್ ವಿರುದ್ಧ ಭರ್ಜರಿ ಜಯ ಗಳಿಸಿ ಇತಿಹಾಸ ನಿರ್ಮಿಸಲು ಟೀ ಇಂಡಿಯಾ ಈಗಾಗಲೇ ಸಾಕಷ್ಟು ತಯಾರಿ ನಡೆಸಿದೆ. ಟೆಸ್ಟ್​ ಸರಣಿಯಿಂದ ಹೊರಗುಳಿದಿದ್ದ ಆಟಗಾರರಾದ ಶಿಖರ್​ ಧವನ್​ ಸೇರಿದಂತೆ ದಿನೇಶ್​  ಕಾರ್ತಿಕ್​, ಧೋನಿ ರಾಯುಡು, ಖಲೀಲ್​ ಅಹ್ಮದ್​ ಭುವನೇಶ್ವರ್​ ಏಕದಿನ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ.

ಆಸ್ಟ್ರೇಲಿಯಾ ತಂಡದಲ್ಲಿ ಪೀಟರ್ ಸಿಡ್ಲ್, ಅಲೆಕ್ಸ್ ಕ್ಯಾರಿ, ಮಾರ್ಕಸ್ ಸ್ಟೋಯಿನಿಸ್, ಗ್ಲೆನ್ ಮ್ಯಾಕ್ಸ್ ವೆಲ್ ಅವರಿಗೆ ಅವಕಾಶ ಕಲ್ಪಿಸಲಾಗಿದ್ದು, ಮಿಷೆಲ್ ಸ್ಟಾರ್ಕ್, ಪ್ಯಾಟ್ ಕಮಿನ್ಸ್ ಮತ್ತು ಜೋಶ್ ಹ್ಯಾಜಲ್ವುಡ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಟೆಸ್ಟ್ ಸರಣಿಯಲ್ಲಿ ಹೀನಾಯ ಸೋಲನುಭವಿಸಿದ್ದ ಆಸ್ಟ್ರೇಲಿಯಾ ತಂಡ ಈ ಬಾರಿ ಏಕದಿನ ಪಂದ್ಯ ಸರಣಿಯನ್ನು ಗೆಲ್ಲಲೇಬೇಕೆಂಬ ಛಲದಲ್ಲಿ ಕಣಕ್ಕಿಳಿದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.