India vs Australia: ಆಸೀಸ್ ವಿರುದ್ಧ ಭರ್ಜರಿ ಜಯ, ಸರಣಿ ಕೈವಶ ಮಾಡಿಕೊಂಡ ಭಾರತ..!

India vs Australia 2nd ODI Highlights: ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 1 ಪಂದ್ಯ ಬಾಕಿ ಇರುವಂತೆಯೇ 3 ಪಂದ್ಯಗಳ ಏಕದಿನ ಸರಣಿಯನ್ನು 2-0 ಅಂತರದಿಂದ ಭಾರತ ಕೈವಶಮಾಡಿಕೊಂಡಿದೆ.

Written by - Puttaraj K Alur | Last Updated : Sep 24, 2023, 10:43 PM IST
  • ಶುಭ್‍ಮನ್‍ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಭರ್ಜರಿ ಶತಕ
  • ಸೂರ್ಯಕುಮಾರ್ ಯಾದವ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ
  • ಟೀಂ ಇಂಡಿಯಾದ ಮಾರಕ ಬೌಲಿಂಗ್ ದಾಳಿಗೆ ನಲುಗಿದ ಆಸ್ಟ್ರೇಲಿಯಾ
India vs Australia: ಆಸೀಸ್ ವಿರುದ್ಧ ಭರ್ಜರಿ ಜಯ, ಸರಣಿ ಕೈವಶ ಮಾಡಿಕೊಂಡ ಭಾರತ..! title=
ಸರಣಿ ಕೈವಶ ಮಾಡಿಕೊಂಡ ಭಾರತ

ನವದೆಹಲಿ: ಇಂದೋರ್‍ನ ಹೋಲ್ಕರ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 1 ಪಂದ್ಯ ಬಾಕಿ ಇರುವಂತೆಯೇ 3 ಪಂದ್ಯಗಳ ಏಕದಿನ ಸರಣಿಯನ್ನು 2-0 ಅಂತರದಿಂದ ಭಾರತ ಕೈವಶಮಾಡಿಕೊಂಡಿದೆ. ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ದುಕೊಂಡಿತು. ಅದರಂತೆ ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 50 ಓವರ್‍ಗಳಲ್ಲಿ 5 ವಿಕೆಟ್ ಕಳೆದುಕೊಂಡು 399 ರನ್‍ಗಳ ಬೃಹತ್ ಮೊತ್ತವನ್ನು ಪೇರಿಸಿತು.

ಶುಭ್‍ಮನ್‍ ಗಿಲ್ & ಶ್ರೇಯಸ್ ಅಯ್ಯರ್ ಶತಕ!

ಆರಂಭಿಕ ಆಟಗಾರರಾದ ಶುಭ್​ಮನ್ ಗಿಲ್​ ಜೊತೆ ಇನಿಂಗ್ಸ್ ಆರಂಭಿಸಿದ ರುತುರಾಜ್ ಗಾಯಕ್ವಾಡ್ ಕೇವಲ 8 ರನ್​ ಗಳಿಸಿ ವಿಕೆಟ್ ಒಪ್ಪಿಸಿದರು. ಈ ವೇಳೆ ಕಣಕ್ಕಿಳಿದ ಶ್ರೇಯಸ್ ಅಯ್ಯರ್, ಗಿಲ್ ಜೊತೆಗೂಡಿ ಅತ್ಯುತ್ತಮ ಜೊತೆಯಾಟ ಪ್ರದರ್ಶಿಸಿದರು. ಈ ಜೋಡಿ ಆಸೀಸ್ ಬೌಲರ್​ಗಳ ಬೇವರಿಳಿಸಿದರು. ಪರಿಣಾಮ ಅಯ್ಯರ್ ಮತ್ತು ಗಿಲ್ ಭರ್ಜರಿ ಶತಕ ಬಾರಿಸಿ ಮಿಂಚಿದರು.

90 ಎಸೆತಗಳಲ್ಲಿ ಅಯ್ಯರ್ 11 ಬೌಂಡರಿ ಮತ್ತು 3 ಸಿಕ್ಸರ್ ಇದ್ದ 105 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, 97 ಎಸೆತಗಳಲ್ಲಿ 6 ಬೌಂಡರಿ ಮತ್ತು 4 ಸಿಕ್ಸರ್ ಇದ್ದ 104 ರನ್ ಗಳಿಸಿ ಗಿಲ್ ಕೂಡ ಔಟಾದರು. ಈ ಜೋಡಿ 2ನೇ ವಿಕೆಟ್‍ಗೆ 200 ರನ್‍ಗಳ ಜೊತೆಯಾಟವಾಡಿತು. ಬಳಿಕ ಬಂದ ಕೆ.ಎಲ್.ರಾಹುಲ್ ಸಹ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿ ಆಕರ್ಷಕ ಅರ್ಧಶತಕ ಬಾರಿಸಿದರು. 38 ಎಸೆತಗಳಲ್ಲಿ 3 ಬೌಂಡರಿ ಮತ್ತು 3 ಸಿಕ್ಸರ್ ಇದ್ದ 52 ರನ್ ಗಳಿಸಿ ಔಟಾದರು.

ಇದನ್ನೂ ಓದಿ: ಶುಭ್ಮನ್-ಸಾರಾ ಪ್ರೀತಿ ನಿಜ! 3 ವರ್ಷದ ಗೊಂದಲಕ್ಕೆ ಅಂತ್ಯ ಹಾಡಿದ ಸಚಿನ್ ಪುತ್ರಿಯ ಆ ಟ್ವೀಟ್

ಸೂರ್ಯಕುಮಾರ್ ಸ್ಫೋಟಕ ಬ್ಯಾಟಿಂಗ್!

ರಾಹುಲ್ ಔಟಾದ ಬಳಿಕ ಸಿಡಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಸೂರ್ಯಕುಮಾರ್ ಯಾದವ್ ಕೇವಲ 24 ಎಸೆತಗಳಲ್ಲಿ ಭರ್ಜರಿ ಅರ್ಧಶತಕ ಬಾರಿಸಿ ಮಿಂಚಿದರು. ಕೇವಲ 37 ಎಸೆತಗಳಲ್ಲಿ 6 ಸಿಕ್ಸರ್ ಮತ್ತು 6 ಬೌಂಡರಿ ಬಾರಿಸಿದ ಸೂರ್ಯಕುಮಾರ್ 72 ರನ್ ಗಳಿಸಿ ಅಜೇಯರಾಗುಳಿದರು. ಕ್ಯಾಮರೂನ್ ಗ್ರೀನ್ ಎಸೆದ 44ನೇ ಓವರ್‍ನಲ್ಲಿ ಸೂರ್ಯಕುಮಾರ್ 4 ಹ್ಯಾಟ್ರಿಕ್ ಸಿಕ್ಸ್ ಬಾರಿಸಿ ಆಸೀಸ್‍ಗೆ ನಡುಕ ಹುಟ್ಟಿಸಿದರು. ಪರಿಣಾಮ 50 ಓವರ್‍ಗಳಿಗೆ 5 ವಿಕೆಟ್ ಕಳೆದುಕೊಂಡ ಭಾರತ 399 ರನ್ ಕೆಲೆಹಾಕಿತು.     

317 ರನ್​ಗಳ ಟಾರ್ಗೆಟ್!

ಟೀಂ ಇಂಡಿಯಾ ನೀಡಿದ 400 ರನ್​ಗಳ ಬೃಹತ್ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾಗೆ ಕನ್ನಡಿಗ ಪ್ರಸಿದ್ಧ್ ಕೃಷ್ಣ ಆರಂಭಿಕ ಆಘಾತ ನೀಡಿದರು. 2ನೇ ಓವರ್​ನಲ್ಲಿ ಮ್ಯಾಥ್ಯೂ ಶಾರ್ಟ್ ಹಾಗೂ ಸ್ಟಿವ್ ಸ್ಮಿತ್​ರನ್ನು ಪೆವಿಲಿಯನ್‍ಗೆ ಕಳಿಸಿದರು. ಈ ವೇಳೆ ಮಳೆ ಅಡ್ಡಿಯಾಗಿದ್ದರಿಂದ ಕೆಲಕಾಲ ಪಂದ್ಯವನ್ನು ಸ್ಥಗಿತಗೊಳಿಸಲಾಗಿತ್ತು. ಪಂದ್ಯ ಶುರುವಾದಾಗ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಓವರ್​ ಕಡಿತಗಳೊಂದಿಗೆ ಆಸೀಸ್‍ಗೆ 33 ಓವರ್​ಗಳಲ್ಲಿ 317 ರನ್​ಗಳ ಟಾರ್ಗೆಟ್ ನೀಡಲಾಯಿತು. ಆದರೆ ಭಾರತದ ಮಾರಕ ಬೌಲಿಂಗ್ ದಾಳಿಗೆ ಸಿಲುಕಿದ ಆಸೀಸ್ 28.2 ಓವರ್‍ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 217 ರನ್​ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಆಸ್ಟ್ರೇಲಿಯಾ 99 ರನ್​ಗಳ ಹೀನಾಯ ಸೋಲು ಕಂಡಿತು.

ಇದನ್ನೂ ಓದಿ: ಏಷ್ಯನ್ ಗೇಮ್ಸ್‌ನಲ್ಲೂ ರಾಜಕೀಯ: ಭಾರತದ ವುಶು ಪಟುಗಳಿಗೆ ವೀಸಾ ನಿರಾಕರಿಸಿದ ಚೀನಾ!

ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ (53), ಸೀನ್ ಅಬಾಟ್(54), ಮಾರ್ನಸ್ ಲ್ಯಾಬುಶೇನ್(27), ಜೋಶ್ ಹ್ಯಾಜಲ್ವುಡ್(23) ಮತ್ತು  ಕ್ಯಾಮರೂನ್ ಗ್ರೀನ್(19) ರನ್ ಗಳಿಸಿದರು. ಭಾರತ ಪರ ಬೌಲಿಂಗ್‍ನಲ್ಲಿ ಆರ್.ಅಶ್ವಿನ್ ಮತ್ತು ರವೀಂದ್ರ ಜಡೇಜಾ ತಲಾ 3 ವಿಕಟ್ ಪಡೆದು ಮಿಂಚಿದರೆ, ಪ್ರಸೀದ್ ಕೃಷ್ಣ 2 ಮತ್ತು ಮೊಹಮ್ಮದ್ ಶಮಿ 1 ವಿಕೆಟ್ ಕಬಳಿಸಿದರು. ಇನ್ನು 3ನೇ ಏಕದಿನ ಪಂದ್ಯ ಸೆಪ್ಟೆಂಬರ್ 27ರಂದು ನಡೆಯಲಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News