India vs Australia ODI series : ಆಸ್ಟ್ರೇಲಿಯಾ ವಿರುದ್ಧದ ಮುಂಬರುವ ಏಕದಿನ ಪಂದ್ಯ ಮತ್ತು ಟಿ20 ಸರಣಿಗೆ ಭಾರತ ಆಯ್ಕೆ ಸಮಿತಿ ಮುಂಬರುವ ಪಂದ್ಯಗಳಲ್ಲಿ ಭಾಗಿಯಾಗಲಿರುವ ಆಟಗಾರರನ್ನು ಆಯ್ಕೆ ಮಾಡಿದೆ.

India vs Australia ODI series: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಹಾಗೂ ದ್ವಿಪಕ್ಷೀಯ ಸರಣಿಗೆ ಆಯ್ಕೆ ಸಮಿತಿ ಇಂದು ತಂಡದ ಆಟಗಾರರನ್ನು ಸದಸ್ಯರನ್ನು ಆಯ್ಕೆ ಮಾಡಿದೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಮೂರು ಪಂದ್ಯಗಳ ಸರಣಿಗೆ ಶುಭಮನ್ ಗಿಲ್ ಅವರನ್ನು ಭಾರತ ಏಕದಿನ ತಂಡದ ನಾಯಕರನ್ನಾಗಿ ನೇಮಿಸಲಾಗಿದೆ, ರೋಹಿತ್ ಶರ್ಮಾ ಈ ಸ್ಥಾನದಿಂದ ಕೆಳಗಿಳಿದ ನಂತರ ಅವರ ಜಾಗವನ್ನು ಶುಭಮನ್ ಅಲಂಕರಿಸುತ್ತಿರುವುದು ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆಯಾಗಿದೆ. ಅನುಭವಿ ಆಟಗಾರ ವಿರಾಟ್ ಕೊಹ್ಲಿ ಜೊತೆಗೆ ರೋಹಿತ್ ಮತ್ತು ಇನ್ನಿತರ 15 ಸದಸ್ಯರನ್ನು ಈ ಏಕದಿನ ತಂಡದಲ್ಲಿ ಉಳಿಸಿಕೊಳ್ಳಲಾಗಿದ್ದು, ಹೊಸ ನಾಯಕನ ಆಯ್ಕೆ ತಂಡಕ್ಕೆ ಹುರುಪು ತುಂಬುವ ಉದ್ದೇಶ ಹೊಂದಿದೆ. ತಂಡದಲ್ಲಿ ಶ್ರೇಯಸ್ ಅಯ್ಯರ್ ಸರಣಿಗೆ ಉಪನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಇವೆಲ್ಲವಕ್ಕಿಂತ ಗಮನ ಸೆಳೆಯುತ್ತಿರುವ ಪ್ರಮುಖ ಅಂಶವೇನೆಂದರೆ, ಈ ಸರಣಿ ಮೂಲಕ ಬಹಳ ದಿನಗಳ ನಂತರ ರೋಹಿತ್ ಮತ್ತು ಕೊಹ್ಲಿ ಜೋಡಿಯ ಮೋಡಿಗೆ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಇನ್ನು ಟೀಮ್ ಇಂಡಿಯಾದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಅವರಿಗೆ ಏಕದಿನ ಪಂದ್ಯಗಳಿಗೆ ವಿಶ್ರಾಂತಿ ನೀಡಲಾಗಿದೆ. ಅಷ್ಟೇ ಅಲ್ಲ ಯುವ ಎಡಗೈ ಬ್ಯಾಟ್ಸ್ಮನ್ ಯಶಸ್ವಿ ಜೈಸ್ವಾಲ್ ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಸ್ಥಿರ ಪ್ರದರ್ಶನ ನೀಡಿದ ನಂತರ ಏಕದಿನ ತಂಡಕ್ಕೆ ಮರಳಿದ್ದಾರೆ. ಅಕ್ಟೋಬರ್ 19 ಮತ್ತು 25 ರ ನಡುವೆ ಸಿಡ್ನಿ, ಅಡಿಲೇಡ್ ಮತ್ತು ಮೆಲ್ಬೋರ್ನ್ನಲ್ಲಿ ಏಕದಿನ ಪಂದ್ಯಗಳು ನಡೆಯಲಿವೆ, ತದನಂತರ ಭಾರತ ತಂಡವು ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ.
ಭಾರತ ಕ್ರಿಕೆಟ್ ತಂಡ (ಏಕದಿನ ಸರಣಿ)
ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ವಾಯ್ಸ್ ಕ್ಯಾಪ್ಟನ್), ಕೆಎಲ್ ರಾಹುಲ್ (ವಿಕೇಟ್ ಕೀಪರ್), ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಶ್ದೀಪ್ ಸಿಂಗ್, ಪ್ರಸಿದ್ ಜುರೆಲ್, ಪ್ರಸಿದ್.
ಭಾರತ T20 ತಂಡ
ಇನ್ನು ಅಂತರಾಷ್ಟ್ರೀಯ T20ಯಲ್ಲಿ ಸೂರ್ಯಕುಮಾರ್ ಯಾದವ್(ನಾಯಕ), ಶುಭಮನ್ ಗಿಲ್ (ಉಪನಾಯಕ). ತಂಡದಲ್ಲಿ ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ಡಬ್ಲ್ಯುಕೆ), ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಅರ್ಷ್ದೀಪ್ ಸಿಂಗ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಸಂಜು ಸ್ಯಾಮ್ಸನ್ (ಡಬ್ಲ್ಯುಕೆ), ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್ .
ಇದರೊಂದಿಗೆ ಇನ್ನೊಂದು ಪ್ರಮುಖ ಅಂಶವೆಂದರೆ ಭಾರತದ ಚಾಂಪಿಯನ್ಸ್ ಟ್ರೋಫಿ ವಿಜೇತ ತಂಡದ ಭಾಗವಾಗಿದ್ದ ರವೀಂದ್ರ ಜಡೇಜಾ ಮತ್ತು ಮೊಹಮ್ಮದ್ ಶಮಿ ಜೋಡಿಯನ್ನು ತಂಡದಿಂದ ಹೊರಗಿಡಲಾಗಿದೆ.