IND vs AUS T20i: ಇಂಡೋ-ಆಸಿಸ್ ಮುಖಾಮುಖಿ: ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ
ಟೀಂ ಇಂಡಿಯಾದಲ್ಲಿ ಕೆ.ಎಲ್ ರಾಹುಲ್, ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ವಿರಾಟ್ ಕೊಹ್ಲಿ, ಅಕ್ಷರ್ ಪಟೇಲ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಉಮೇಶ್ ಯಾದವ್ ಮತ್ತು ಯುಜ್ವೇಂದ್ರ ಚಾಹಲ್ ಇದ್ದಾರೆ.
ಇಂದು ಮೂರು ಪಂದ್ಯಗಳ T20I ಸರಣಿಯ ಮೊದಲ ಪಂದ್ಯ ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಶನ್ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಸದ್ಯ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಇದನ್ನೂ ಓದಿ: ICC New Rules: October 1 ರಿಂದ ಕ್ರಿಕೆಟ್ ನ ಈ ನಿಯಮಗಳು ಬದಲಾಗುತ್ತಿವೆ, ಐಸಿಸಿ ಘೋಷಣೆ
ಇಂದಿನಿಂದ ಪ್ರಾರಂಭವಾಗುವ ಮೂರು ಪಂದ್ಯಗಳ T20I ಸರಣಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಲಿವೆ. ಮೊದಲ ಪಂದ್ಯವು ಮೊಹಾಲಿಯಲ್ಲಿ ನಡೆಯುತ್ತಿದ್ದು, ಉಳಿದ ಎರಡು ಪಂದ್ಯಗಳು ಸೆಪ್ಟೆಂಬರ್ 23ರಂದು ನಾಗ್ಪುರದಲ್ಲಿ ಮತ್ತು ಸೆಪ್ಟೆಂಬರ್ 25ರಂದು ಹೈದರಾಬಾದ್ ನಲ್ಲಿ ನಡೆಯಲಿವೆ.
ಟೀಂ ಇಂಡಿಯಾದಲ್ಲಿ ಕೆ.ಎಲ್ ರಾಹುಲ್, ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ವಿರಾಟ್ ಕೊಹ್ಲಿ, ಅಕ್ಷರ್ ಪಟೇಲ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಉಮೇಶ್ ಯಾದವ್ ಮತ್ತು ಯುಜ್ವೇಂದ್ರ ಚಾಹಲ್ ಇದ್ದಾರೆ.
ಇದನ್ನೂ ಓದಿ: ದ್ರಾವಿಡ್ ದಾಖಲೆ ಸರಿಗಟ್ಟಲು ಕಿಂಗ್ ಕೊಹ್ಲಿ ಸಜ್ಜು: ‘ಬಿಗ್ ಇಂಡಿಯಾ’ ರೆಕಾರ್ಡ್ ಮಾಡ್ತಾರಾ ವಿರಾಟ್!
ಇನ್ನು ಆಸ್ಟ್ರೇಲಿಯಾ ತಂಡದಲ್ಲಿ ಆರನ್ ಫಿಂಚ್, ಸ್ಟೀವನ್ ಸ್ಮಿತ್, ಟಿಮ್ ಡೇವಿಡ್, ಕ್ಯಾಮೆರನ್ ಗ್ರೀನ್, ಗ್ಲೆನ್ ಮ್ಯಾಕ್ಸ್ ವೆಲ್, ಜೋಶ್ ಇಂಗ್ಲಿಸ್, ಮ್ಯಾಥ್ಯತೂ ವೇಡ್, ಆಡಂ ಜಂಪಾ, ಜೋಶ್ ಹೇಜಲ್ ವುಡ್, ನಥನ್ ಎಲ್ಲಿಸ್, ಪ್ಯಾಟ್ ಕುಮಿನ್ಸ್ ಇದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.