ನವದೆಹಲಿ: ಬುಧವಾರದಂದು ಚಟ್ಟೋಗ್ರಾಮ್‌ನಲ್ಲಿ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ನ 1 ನೇ ದಿನದಂದು ಸ್ಪೆಷಲಿಸ್ಟ್ ಬ್ಯಾಟ್ಸಮನ್ ಶ್ರೇಯಸ್ ಅಯ್ಯರ್ ಅವರಿಗಿಂತ ಮುಂಚಿತವಾಗಿ ವಿಕೆಟ್‌ಕೀಪರ್ ರಿಷಬ್ ಪಂತ್ ಅವರನ್ನು ನಂ. 5 ಸ್ಥಾನಕ್ಕೆ ಬಡ್ತಿ ನೀಡಲು ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ನಿರ್ಧರಿಸಿತು.ಭಾರತವು 3 ವಿಕೆಟ್‌ಗೆ 55 ರನ್‌ಗೆ ಹೆಣಗಾಡುತ್ತಿರುವಾಗ ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿಅವರ ಬ್ಯಾಕ್-ಟು-ಬ್ಯಾಕ್ ವಿಕೆಟ್‌ಗಳ ನಂತರ ಪಂತ್ ಅವರನ್ನು ಬ್ಯಾಟಿಂಗ್ ಗೆ ಕಳುಹಿಸಲಾಯಿತು.


COMMERCIAL BREAK
SCROLL TO CONTINUE READING

ಈ ಸಂದರ್ಭದಲ್ಲಿ ಪಂತ್ 45 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 6 ಬೌಂಡರಿಗಳ ನೆರವಿನಿಂದ 46 ರನ್ ಗಳಿಸಿದರು.ಆ ಮೂಲಕ, ಪಂತ್ ಆಟದ ಎಲ್ಲಾ ಸ್ವರೂಪಗಳಲ್ಲಿ 4,000 ಅಂತರರಾಷ್ಟ್ರೀಯ ರನ್‌ಗಳನ್ನು ಮತ್ತು ಟೆಸ್ಟ್ ಕ್ರಿಕೆಟ್‌ನಲ್ಲಿ 50 ಸಿಕ್ಸರ್‌ಗಳನ್ನು ಪೂರೈಸಿದರು.


ರೋಹಿತ್ ಶರ್ಮಾ ನಂತರ ಟೆಸ್ಟ್ ಕ್ರಿಕೆಟ್‌ನಲ್ಲಿ ವೇಗವಾಗಿ 50 ಸಿಕ್ಸರ್‌ಗಳನ್ನು ಬಾರಿಸಿದ ಎರಡನೇ ಭಾರತೀಯ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪಂತ್ 54 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದರೆ, ರೋಹಿತ್ 51 ಇನ್ನಿಂಗ್ಸ್‌ಗಳನ್ನು ತೆಗೆದುಕೊಂಡಿದ್ದಾರೆ. ಒಟ್ಟಾರೆಯಾಗಿ ಪಂತ್ ಈಗ 50 ಸಿಕ್ಸರ್ ಗಳನ್ನು ಸಿಡಿಸಿದ ಎಂಟನೆ ಭಾರತೀಯ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ಭಾರತದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ 180 ಇನ್ನಿಂಗ್ಸ್‌ಗಳಲ್ಲಿ 91 ಸಿಕ್ಸರ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಭಾರತದ ಮಾಜಿ ನಾಯಕ ಎಂಎಸ್ ಧೋನಿ 144 ಇನ್ನಿಂಗ್ಸ್‌ಗಳಲ್ಲಿ 78 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ.


ಟೆಸ್ಟ್ ಕ್ರಿಕೆಟ್‌ನಲ್ಲಿ 50ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಸಿಡಿಸಿದ ಭಾರತೀಯರ ಪಟ್ಟಿ ಇಲ್ಲಿದೆ...


1. ವೀರೇಂದ್ರ ಸೆಹ್ವಾಗ್ - 91 ಸಿಕ್ಸರ್‌ಗಳು


2. ಎಂಎಸ್ ಧೋನಿ - 78 ಸಿಕ್ಸರ್‌ಗಳು


3. ಸಚಿನ್ ತೆಂಡೂಲ್ಕರ್ - 69 ಸಿಕ್ಸರ್ಗಳು


4. ರೋಹಿತ್ ಶರ್ಮಾ - 64 ಸಿಕ್ಸರ್‌ಗಳು


5. ಕಪಿಲ್ ದೇವ್ - 61 ಸಿಕ್ಸರ್ಗಳು


6. ಸೌರವ್ ಗಂಗೂಲಿ - 57 ಸಿಕ್ಸರ್ಗಳು


7. ರವೀಂದ್ರ ಜಡೇಜಾ - 55 ಸಿಕ್ಸರ್‌ಗಳು


8. ರಿಷಬ್ ಪಂತ್ - 50 ಸಿಕ್ಸರ್  


 https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.