India vs Bangladesh, 2st Test: ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿದ್ದ ಸರ್ಫರಾಜ್ ಖಾನ್, ಧ್ರುವ್ ಜುರೇಲ್ ಹಾಗೂ ಯಶ್ ದಯಾಳ್ ಅವರು ಭಾರತ ತಂಡದಿಂದ ಹೊರಬರಲಿದ್ದಾರೆ. ಈ ಮೂವರು ಆಟಗಾರರು ಮುಂಬರುವ ಇರಾನಿ ಕಪ್ ಪಂದ್ಯಕ್ಕೆ ಆಯ್ಕೆಯಾಗಿದ್ದು, ಹೀಗಾಗಿ ಇವರನ್ನು ಟೀಂ ಇಂಡಿಯಾದಿಂದ ರಿಲೀಸ್ ಮಾಡಲಾಗುತ್ತಿದೆ.


COMMERCIAL BREAK
SCROLL TO CONTINUE READING

ಸರ್ಫರಾಜ್ ಖಾನ್ ಇರಾನಿ ಕಪ್​ಗಾಗಿ ಆಯ್ಕೆ ಮಾಡಲಾಗಿರುವ ಮುಂಬೈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಧ್ರುವ್ ಜುರೇಲ್ ಹಾಗೂ ಯಶ್ ದಯಾಳ್ ಶೇಷ ಭಾರತ ತಂಡದ ಭಾಗವಾಗಿದ್ದಾರೆ. ಅಕ್ಟೋಬರ್ 1ರಿಂದ ಶುರುವಾಗಲಿರುವ ಇರಾನಿ ಕಪ್​ನಲ್ಲಿ ಈ ಮೂವರು ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ ಎಂದು ವರದಿಯಾಗಿದೆ.


ಇದನ್ನೂ ಓದಿ: IPL 2025: ಆಟಗಾರರನ್ನು ಉಳಿಸಿಕೊಳ್ಳುವ ನಿಯಮದಲ್ಲಿ ಐಪಿಎಲ್ ಫ್ರಾಂಚೈಸಿಗಳಿಗೆ ಶಾಕ್ ನೀಡುತ್ತಾ ಬಿಸಿಸಿಐ!


ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯದ ವೇಳೆ ಈ ಮೂವರು ಆಟಗಾರರು ಬೆಂಚ್ ಕಾದಿದ್ದರು. 2ನೇ ಪಂದ್ಯದಲ್ಲೂ ಇವರು ಕಣಕ್ಕಿಳಿಯುವ ಸಾಧ್ಯತೆಯಿಲ್ಲ. ಹೀಗಾಗಿಯೇ ಸರ್ಫರಾಜ್ ಖಾನ್, ಯಶ್ ದಯಾಳ್ ಹಾಗೂ ಧ್ರುವ್ ಜುರೇಲ್ ಅವರನ್ನು ಇರಾನಿ ಕಪ್​ಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.


ಭಾರತ ಮತ್ತು ಬಾಂಗ್ಲಾದೇಶ ನಡುವಿನ 2ನೇ ಟೆಸ್ಟ್ ಪಂದ್ಯವು ಸೆಪ್ಟೆಂಬರ್ 27ರಿಂದ ಶುರುವಾಗಲಿದೆ. ಅದೇ ರೀತಿ ಅಕ್ಟೋಬರ್ 1ರಿಂದ ಇರಾನಿ ಕಪ್ ಟೂರ್ನಿ ಶುರುವಾಗಲಿದೆ. ಒಂದು ವೇಳೆ ಟೀಂ ಇಂಡಿಯಾ ಪರ ಟೆಸ್ಟ್​ನಲ್ಲಿ ಕಾಣಿಸಿಕೊಂಡರೆ, ಈ ಆಟಗಾರರಿಗೆ ಇರಾನಿ ಕಪ್ ಪಂದ್ಯ ಆಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಸೆಪ್ಟೆಂಬರ್ ಅಂತ್ಯದೊಳಗೆ ಈ ಮೂವರು ಇರಾನಿ ಕಪ್​ ತಂಡಗಳನ್ನು ಸೇರಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.


ಇದನ್ನೂ ಓದಿಕ್ರಿಕೆಟ್ ಇತಿಹಾಸ ಕಂಡ ಅತ್ಯಂತ ವೇಗದ ಬೌಲರ್ ಯಾರು ಗೊತ್ತಾ? ಗಂಟೆಗೆ 161.3 ಕಿಮೀ ವೇಗದಲ್ಲಿ ಬೌಲಿಂಗ್ ಮಾಡುವ ಡೇಂಜರಸ್ ಕ್ರಿಕೆಟಿಗ ಈತನೇ


ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆ.ಎಲ್.ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ, ಆಕಾಶ್ ದೀಪ್.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.