India vs England : ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಲಾರ್ಡ್ಸ್‌ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಪ್ಲೇಯಿಂಗ್ 11ರ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಹೌದು, ವಿರಾಟ್ ಕೊಹ್ಲಿ ಕಮ್ ಬ್ಯಾಕ್ ಬಗ್ಗೆಯೂ ಸಸ್ಪೆನ್ಸ್ ಉಳಿದಿದೆ. ಹಾಗೆ, ಈ ಪಂದ್ಯದಲ್ಲಿ ಸ್ಟಾರ್ ಆಟಗಾರನೊಬ್ಬನಿಗೆ ತಂಡದಿಂದ ಹೊರಗಿಡುವ ಸಾಧ್ಯತೆ ಇದೆ. ಈ ಆಟಗಾರನಿಗೆ ಮೊದಲ ಪಂದ್ಯದಲ್ಲೂ ರೋಹಿತ್ ಶರ್ಮಾ ಅವಕಾಶ ನೀಡಿರಲಿಲ್ಲ.


COMMERCIAL BREAK
SCROLL TO CONTINUE READING

ಈ ಆಟಗಾರನಿಗೆ ಸಿಗುತ್ತಿಲ್ಲ ಅವಕಾಶ 


ಈ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಆರಂಭಿಕರಾಗಿ ಇನ್ನಿಂಗ್ಸ್ ಆರಂಭಿಸಿದ್ದರು. ಹೀಗಾಗಿ ಯುವ ಬ್ಯಾಟ್ಸ್ ಮನ್ ಇಶಾನ್ ಕಿಶನ್ ತಂಡದಲ್ಲಿ ಸ್ಥಾನ ಸಿಗುತ್ತಿಲ್ಲ. ನಿರಂತರವಾಗಿ ಟೀಂ ಇಂಡಿಯಾದಲ್ಲಿ ಆರಂಭಿಕ ಬ್ಯಾಟ್ಸಮನ್ ಆಗಿ ಆಡುತ್ತಿದ್ದರು, ಆದರೆ ಈ ಸರಣಿಯಲ್ಲಿ ಇಶಾನ್ ಕಿಶನ್ ಪ್ಲೇಯಿಂಗ್ 11 ನಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಎರಡನೇ ಏಕದಿನ ಪಂದ್ಯದಲ್ಲೂ ಆಡುವುದು ಕಷ್ಟವಾಗಿದೆ.


ಇದನ್ನೂ ಓದಿ : ICC ODI Ranking: ಏಕದಿನ ಕ್ರಿಕೆಟ್ ನಲ್ಲಿ ನಂಬರ್ 1 ಪಟ್ಟಕ್ಕೆ ಏರಿದ ಜಸ್ಪ್ರಿತ್ ಬುಮ್ರಾ


ಅದ್ಭುತ ಇನ್ನಿಂಗ್ಸ್ ಆಡಿದ ಧವನ್ 


ಮೊದಲ ಏಕದಿನ ಪಂದ್ಯದಲ್ಲಿ ಇಶಾನ್ ಕಿಶನ್ ಬದಲಿಗೆ ಶಿಖರ್ ಧವನ್ ಅವರನ್ನು ರೋಹಿತ್ ಶರ್ಮಾ ತಂಡಕ್ಕೆ ಸೇರಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ, ಅವರು 54 ಎಸೆತಗಳಲ್ಲಿ 57.40 ಸ್ಟ್ರೈಕ್ ರೇಟ್‌ನಲ್ಲಿ 31 ರನ್ ಗಳಿಸಿದರು, ಇದರಲ್ಲಿ ಅವರ ಬ್ಯಾಟ್‌ನಲ್ಲಿ 4 ಬೌಂಡರಿಗಳು ಸಿಡಿಸಿದ್ದಾರೆ. ಹಾಗೆ, ಮೊದಲ ವಿಕೆಟ್‌ಗೆ ರೋಹಿತ್ ಶರ್ಮಾ ಅವರೊಂದಿಗೆ ಅಜೇಯ 114 ರನ್‌ಗಳ ಜೊತೆಯಾಟ ನಡೆಸಿದರು. ಈ ಅದ್ಭುತ ಪ್ರದರ್ಶನದ ನಂತರ ಧವನ್ ಎರಡನೇ ಏಕದಿನ ಪಂದ್ಯದಲ್ಲಿ ಆಡುವುದು ಬಹುತೇಕ ಖಚಿತವಾಗಿದೆ.


ಇಶನ್ ಕಿಶನ್ ವೃತ್ತಿ ಜೀವನ


ಇಶಾನ್ ಕಿಶನ್ ಕಳೆದ ಕೆಲವು ದಿನಗಳಿಂದ ಸ್ಥಿರ ಪ್ರದರ್ಶನ ನೀಡುವ ಮೂಲಕ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಇಶಾನ್ ಕಿಶನ್ ಭಾರತಕ್ಕಾಗಿ ಇದುವರೆಗೆ 3 ODI ಪಂದ್ಯಗಳನ್ನು ಆಡಿದ್ದಾರೆ, ಇದರಲ್ಲಿ ಅವರು 29.33 ರ ಸರಾಸರಿಯಲ್ಲಿ 88 ರನ್ ಗಳಿಸಿದ್ದಾರೆ, ಆದರೆ 18 ಟಿ20 ಪಂದ್ಯಗಳಲ್ಲಿ ಅವರು 31.29 ಸರಾಸರಿಯಲ್ಲಿ 532 ರನ್ ಗಳಿಸಿದ್ದಾರೆ.


ಇದನ್ನೂ ಓದಿ : Athiya Shetty KL Rahul : ಕೆಎಲ್ ರಾಹುಲ್ ಜೊತೆಗಿನ ಮದುವೆ ಬಗ್ಗೆ ಮೌನ ಮುರಿದ ಅಥಿಯಾ ಶೆಟ್ಟಿ!


ಟೀಂ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11


ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ ಮತ್ತು ಯುಜ್ವೇಂದ್ರ ಚಾಹಲ್.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ