IND vs ENG, 3rd Test: ಆಂಗ್ಲರ ವಿರುದ್ಧ ಭರ್ಜರಿ ಶತಕ ಸಿಡಿಸಿದ ರೋಹಿತ್ ಶರ್ಮಾ!
India vs England 3rd Test: ರಾಜಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ 3ನೇ ಟೆಸ್ಟ್ ಪಂದ್ಯದಲ್ಲಿ ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದ್ದಾರೆ.
ರಾಜಕೋಟ್(ಗುಜರಾತ್): ರಾಜಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ 3ನೇ ಟೆಸ್ಟ್ ಪಂದ್ಯದಲ್ಲಿ ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದ್ದಾರೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ ಆರಂಭಿಕ ಆಘಾತ ಅನುಭವಿಸಿತು.
ತಂಡದ ಮೊತ್ತ 22 ಆಗುವಷ್ಟರಲ್ಲಿ ಯುವ ಆಟಗಾರ ಯಶಸ್ವಿ ಜೈಸ್ವಾಲ್(10) ಮಾರ್ಕ್ ವುಡ್ ಬೌಲಿಂಗ್ನಲ್ಲಿ ಜೋ ರೂಟ್ಗೆ ಕ್ಯಾಚಿತ್ತು ನಿರ್ಗಮಿಸಿದರು. ನಂತರ ಶುಭ್ಮನ್ ಗಿಲ್(0) ಸೊನ್ನೆ ಸುತ್ತಿದರು. ಬಳಿಕ ಬಂದ ರಜತ್ ಪಾಟಿದಾರ್(5) ಬಹುಬೇಗನೇ ನಿರ್ಗಮಿಸುವ ಮೂಲಕ ನಿರಾಸೆ ಮೂಡಿಸಿದರು. ಭಾರತ ತಂಡ 33 ರನ್ ಗಳಿಸುವಷ್ಟರಲ್ಲಿ 3 ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.
CSK Brand Ambassador: CSK ಬ್ರಾಂಡ್ ಅಂಬಾಸಿಡರ್ ಆದ ಈ ಬಾಲಿವುಡ್ ಸ್ಟಾರ್ ನಟಿ!
ನಂತರ ನಾಯಕ ರೋಹಿತ್ ಶರ್ಮಾ ಜೊತೆಗೂಡಿದ ರವೀಂದ್ರ ಜಡೇಜಾ ಅತ್ಯುತ್ತಮ ಜೊತೆಯಾಟವಾಡಿದರು. ಆಂಗ್ಲರನ್ನು ಮನಬಂದಂತೆ ದಂಡಿಸಿದ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದರು. ಸಿಕ್ಸರ್ ಮತ್ತು ಬೌಂಡರಿಗಳ ಸುರಿಮಳೆ ಸುರಿಸುತ್ತಿರುವ ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಸದ್ಯದ ಮಾಹಿತಿ ಪ್ರಕಾರ 196 ಎಸೆಗಳನ್ನು ಎದುರಿಸಿರುವ ರೋಹಿತ್ ಶರ್ಮಾ 3 ಸಿಕ್ಸರ್ ಮತ್ತು ೧4 ಬೌಂಡರಿ ಇದ್ದ 131 ರನ್ ಗಳಿಸಿದರು.
ಇವರಿಗೆ ಉತ್ತಮ ಸಾಥ್ ನೀಡಿದ ರವೀಂದ್ರ ಜಡೇಜಾ ಸಹ ಆಕರ್ಷಕ ಅರ್ಧಶತಕ ಭಾರಿಸಿದ್ದಾರೆ. ಜಡೇಜಾ 153 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 7 ಬೌಂಡರಿ ಇದ್ದ 84 ರನ್ ಗಳಿಸಿ ಆಟವಾಡುತ್ತಿದ್ದಾರೆ. ಈ ಜೋಡಿ 4ನೇ ವಿಕೆಟ್ಗೆ 150+ ರನ್ ಜೊತೆಯಾಟವಾಡಿದೆ. ಸದ್ಯದ ಮಾಹಿತಿ ಪ್ರಕಾರ ಭಾರತ 64 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡಿದ್ದು, 237 ರನ್ ಗಳಿಸಿದೆ.
ಇದನ್ನೂ ಓದಿ: Virender Sehwag: ಸಚಿನ್ ಅಲ್ಲ! ಈ ಲೆಜೆಂಡರಿ ಆಟಗಾರನೇ ಶ್ರೇಷ್ಠ ಕ್ರಿಕೆಟಿಗ ಎಂದ ವೀರೇಂದ್ರ ಸೆಹ್ವಾಗ್
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.